ಮೊಸಳೆ ಬಂತು ಮೊಸಳೆ : ಪೊಸ್ರಾಲು ಪರಿಸರದ ಮಂದಿಗೆ ಗಾಬರಿ
Team Udayavani, May 17, 2018, 8:30 AM IST
ಬೆಳ್ಮಣ್ : ಮುಂಡ್ಕೂರು ಗ್ರಾಮದ ಪೊಸ್ರಾಲು ಬಳಿಯ ಶಾಂಭವಿ ನದಿಯಲ್ಲಿ ಮೊಸಳೆಗಳು ಕಂಡುಬಂದಿದ್ದು ಸ್ಥಳೀಯರು ಗಾಬರಿಗೊಂಡಿದ್ದಾರೆ. ಶಾಂಭವಿ ನದಿಗೆ ಸಂಕಲಕರಿಯದಲ್ಲಿ ಹಾಕಲಾದ ಅಣೆಕಟ್ಟಿನ ಸಮೀಪ ಈಗ ನೀರಿನ ಪ್ರಮಾಣ ಕಡಿಮೆಯಾಗಿದ್ದು ಮೊಸಳೆಗಳು ಸ್ಥಳೀಯರಿಗೆ ಕಾಣಸಿಕ್ಕಿದೆ. ಇದರಿಂದ ಅವರೆಲ್ಲ ಭೀತಿಗೊಳಗಾಗಿದ್ದಾರೆ. ಇಲ್ಲಿನ ಕೃಷಿಕರು ವ್ಯವಸಾಯಕ್ಕಾಗಿ ಶಾಂಭವಿ ನದಿಯ ನೀರನ್ನು ಅವಲಂಬಿಸಿದ್ದು, ಗದ್ದೆಗೆ ಪಂಪು ನೀರು ಹಾಯಿಸಲು ನದಿಗೆ ಹೋದ ಸಂದರ್ಭ ಮೊಸಳೆಗಳನ್ನು ಕಂಡಿದ್ದಾರೆ.
ಈ ಹಿಂದಿನ ವರ್ಷಗಳಲ್ಲಿ ಕಾಣಿಸದ ಮೊಸಳೆಗಳು ನದಿಗೆ ಹೇಗೆ ಬಂದವು ಎಂಬ ಬಗ್ಗೆ ಜನರಲ್ಲಿ ಸಂಶಯ ಮೂಡಿದೆ. ಈ ಭಾಗದ ಜನರು ಬಟ್ಟೆ ಒಗೆಯಲು, ದನ ತೊಳೆಯಲು ಅದಲ್ಲದೆ ಮಕ್ಕಳು ಈಜಾಡಲು ನದಿಗೆ ಬರುತ್ತಿದ್ದು ಅಪ್ಪಿತಪ್ಪಿ ನೀರಿಗಿಳಿದರೆ ಮೊಸಳೆಗಳಿಗೆ ಆಹಾರವಾಗುವ ಸಾಧ್ಯತೆ ಇದ್ದು ತತ್ ಕ್ಷಣವೇ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಂಡು ಮೊಸಳೆಗಳನ್ನು ಹಿಡಿದು ಸ್ಥಳಾಂತರಿಸಬೇಕೆಂದು ಆಗ್ರಹಿಸಿದ್ದಾರೆ. ಮೊಸಳೆಗಳು ಎಷ್ಟಿವೆ, ಎಷ್ಟು ಹೊತ್ತಿಗೆ ಕಾಣಸಿಗುತ್ತವೆ ಎಂಬ ಬಗ್ಗೆ ಮಾಹಿತಿ ಇಲ್ಲ. ಮೊಸಳೆೆಗಳ ಉಪಸ್ಥಿತಿಯಿಂದಾಗಿ ಜನರು ನದಿಗೆ ತೆರಳಲು ಭಯಪಡುತ್ತಿದ್ದಾರೆ. ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸಂಭಾವ್ಯ ಅವಘಡವನ್ನು ತಪ್ಪಿಸಬೇಕಾಗಿದೆ ಎಂದು ಸ್ಥಳೀಯರಾದ ರವೀಂದ್ರ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train: ಮುರುಡೇಶ್ವರ ಎಕ್ಸ್ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.