ಅಂದು ಗ್ಯಾರಂಟಿಗಳ ಡಂಗುರ ಹೊಡೆದವರು ಈಗ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಸಿಟಿ ರವಿ
Team Udayavani, Jun 22, 2023, 1:27 PM IST
ಮಂಗಳೂರು: ಮೋದಿಯವರು 9 ವರ್ಷಗಳಲ್ಲಿ ಹಲವು ಯೋಜನೆಗಳನ್ನು ಜಾರಿಗಳಿಸಿದ್ದು, ಯಾವುದನ್ನೂ ಟಾಂಟಾಂ ಹೊಡೆದಿಸಲ್ಲ. ಅಗತ್ಯವಿರುವವರನ್ನು ಗುರುತಿಸಿಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ ಅಕ್ಕಿಯ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ಚುನಾವಣೆಗೆ ಮುನ್ನ ಗ್ಯಾರಂಟಿಗಳ ಡಂಗುರ ಹೊಡೆದವರು, ಈಗ ಯಾಕೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಪ್ರಧಾನಿಯವರ ಒಪ್ಪಿಗೆ ಪಡೆದು 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ದಾರಾ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರಶ್ನಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ತನ್ನ ಪಾಲಿನ 5 ಕೆ.ಜಿ ಅಕ್ಕಿಯನ್ನು ಕೊಡುತ್ತಲೇ ಇದೆ. ಆದರೆ ಮುಂಗಾರು ಮಳೆಯ ಕೊರತೆಯನ್ನು ಗಮನಿಸಿ, ಕೇಂದ್ರ ಸರಕಾರ ಇಡೀ ದೇಶಕ್ಕೆ ಅನ್ವಯವಾಗುವಂತೆ ಕೆಲವೊಂದು ನಿರ್ಣಯಗಳನ್ನು ಕೈಗೊಂಡಿದೆ. ಉತ್ತರ ಪ್ರದೇಶ, ಮಧ್ಯ ಪ್ರದೇಶ ಸರಕಾರಗಳೂಅಕ್ಕಿಗೆ ಬೇಡಿಕೆ ಇಟ್ಟಿವೆ. ಅವರಿಗೂ ಕೇಂದ್ರ ಸರಕಾರ ಕೊಟ್ಟಿಲ್ಲ ಎಂದರು.
ಕೇಂದ್ರ ಸರಕಾರ ಸರ್ವರ್ ಹ್ಯಾಕ್ ಮಾಡಿದೆ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸ್ವಲ್ಪ ದಿನ ಕಳೆದರೆ ನಮ್ಮ ಮೈಂಡ್ ಕೂಡಾ ಹ್ಯಾಕ್ ಮಾಡಿದ್ದಾರೆ ಹಾಗಾಗಿ ಹುಚ್ಚು ಹುಚ್ಚಾಗಿ ಮಾತನಾಡುತ್ತಿದ್ದೇವೆ ಎಂದು ಹೇಳುವ ಸಾಧ್ಯತೆಯೂ ಇದೆ ಎಂದರು.
ಇದನ್ನೂ ಓದಿ: ಐದು ಗ್ಯಾರಂಟಿ ಜಾರಿ ಮಾಡಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ: ಬಿಎಸ್ ವೈ ಗುಡುಗು
ಕೇಂದ್ರ ಸರಕಾರದ 9 ವರ್ಷಗಳ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸುವ ನಿಟ್ಟಿನಲ್ಲಿ 7 ತಂಡಗಳಲ್ಲಿ ರಾಜ್ಯ-ಕೇಂದ್ರ ಮುಖಂಡರು ರಾಜ್ಯದ ವಿವಿಧೆಡೆ ತೆರಳಿ ಜುಲೈ 30ರ ವರೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ. ಎಂದರು.
ರಾಜ್ಯದಲ್ಲಿ ಬಿಜೆಪಿಗೆ ಓಟ್ ಕಡಿಮೆಯಾಗಿ ಅಧಿಕಾರ ಕಳೆದುಕೊಂಡಿಲ್ಲ. ಆದರೆ ಸೋಲನ್ನು ಒಪ್ಪಿಕೊಳ್ಳುತ್ತೇವೆ. ಹೀನಾಯ ಸೋಲು ಅಲ್ಲ. ಪ್ರತಾಪಸಿಂಹ, ಯೋಗೀಶ್ವರ್ ಮಾತಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಮುಖಂಡರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಆಗರ ಜ್ಞಾನೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ಕೇಶವ ಪ್ರಸಾದ್, ವೇದವ್ಯಾಸ ಕಾಮತ್, ಉದಯಕುಮಾರ್ ಶೆಟ್ಟಿ, ಸುದರ್ಶನ ಎಂ. ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.