![6-ptr](https://www.udayavani.com/wp-content/uploads/2024/12/6-ptr-415x249.jpg)
ಕಾರ್ಮಿಕರಿಗೆ ಸವಲತ್ತು ನೀಡಿಕೆಗೆ ಆಗ್ರಹ
Team Udayavani, Jul 29, 2017, 9:10 AM IST
![CTU-28-7.jpg](https://www.udayavani.com/wp-content/uploads/2017/07/29/CTU-28-7.jpg)
ಬೆಳ್ತಂಗಡಿ ತಾ| ಕಚೇರಿಗೆ ಸಿಐಟಿಯು ಮುತ್ತಿಗೆ
ಬೆಳ್ತಂಗಡಿ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕ ಮಂಡಳಿಯಲ್ಲಿ 5,650.71 ಕೋ. ರೂ.ಗಳಿದ್ದರೂ ಕಟ್ಟಡ ಕಾರ್ಮಿಕರಿಗೆ ಸವಲತ್ತುಗಳನ್ನು ನೀಡದೆ ರಾಜ್ಯ ಸರ್ಕಾರ ಕಾರ್ಮಿಕರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ. ಸರಕಾರ ತನ್ನ ಹಠಮಾರಿ ಧೋರಣೆ ಕೈಬಿಡದಿದ್ದರೆ ಆ. 7ರಂದು ಜಿಲ್ಲಾ ಕಾರ್ಮಿಕ ಕಚೇರಿಗೆ ದಿಗ್ಬಂಧನ ಚಳವಳಿ ನಡೆಸಲಾಗುವುದೆಂದು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು)ದ ದ.ಕ ಜಿಲ್ಲಾಧ್ಯಕ್ಷ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ತಿಳಿಸಿದರು. ಅವರು ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಕಚೆೇರಿ ಮುತ್ತಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಹಲವಾರು ವರ್ಷಗಳ ನಿರಂತರ ಹೋರಾಟದ ಫಲವಾಗಿ ದೊರೆತ ಸವಲತ್ತುಗಳನ್ನು ಕಾರ್ಮಿಕರಿಗೆ ನೀಡದೆ ವಂಚಿಸಲಾಗುತ್ತಿದೆ, ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿರುವ ಹಣವನ್ನು ವ್ಯಾಪಕವಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಕಾರ್ಮಿಕರಿಗೆ ಸವಲತ್ತು ನೀಡುವ ಬದಲು ಜಿಲ್ಲಾ ಕೇಂದ್ರದಲ್ಲಿ ಕಲ್ಯಾಣ ಮಂಟಪಗಳ ನಿರ್ಮಾಣದಂತಹ ಕಾರ್ಯಕ್ರಮಗಳಲ್ಲಿ,ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಡುತ್ತಿದೆ, ಇಂತಹ ನಿರ್ಧಾರಗಳನ್ನು ಸರಕಾರ ಕೈಬಿಡಬೇಕು, ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಸಿಬಂದಿಗಳನ್ನು ತತ್‌ಕ್ಷಣ ನೇಮಕ ಮಾಡಬೇಕು ಮತ್ತು ಸವಲತ್ತನ್ನು ತತ್‌ಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ ಅವರು ತಪ್ಪಿದಲ್ಲಿ ವಿಧಾನಸೌಧ ಮುತ್ತಿಗೆ ಹಾಕಬೇಕಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ತಾ| ಅಧ್ಯಕ್ಷ, ನ್ಯಾಯವಾದಿ ಶಿವಕುಮಾರ್ ಎಸ್.ಎಂ. ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರನ್ನು ಸರಕಾರ ನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾದೀತು ಎಂದವರು ತಿಳಿಸಿದರು.
ಶಾಸಕರ ಭೇಟಿ
ಈ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಶಾಸಕ ಕೆ.ವಸಂತ ಬಂಗೇರ ಭೇಟಿ ನೀಡಿ , ಮನವಿ ಸ್ವೀಕರಿಸಿ ಮಾತನಾಡಿ ಕಾರ್ಮಿಕ ಎಲ್ಲ ಸಮಸ್ಯೆಗಳ ಬಗ್ಗೆ ಕಾರ್ಮಿಕ ಸಚಿವರೊಂದಿಗೆ ಮಾತುಕತೆ ನಡೆಸಿ ಇತ್ಯರ್ಥ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ತಹಶೀಲ್ದಾರ್ ತಿಪ್ಪೇಸ್ವಾಮಿ, ಪ್ರಭಾರ ಕಾರ್ಮಿಕ ನಿರೀಕ್ಷಕ ಗಣಪತಿ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು. ಪ್ರತಿಭಟನೆಯ ನೇತೃತ್ವವನ್ನು ತಾಲೂಕು ಕಾರ್ಯದರ್ಶಿ ವಸಂತ ನಡ, ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ನೆರಿಯ, ಪ್ರಮುಖರಾದ ಹೈದರಾಲಿ ಕೊಯ್ಯೂರು, ಚನಿಯಪ್ಪ ಧರ್ಮಸ್ಥಳ, ಕಾರಂದೂರು, ಶಾಂತಿರಾಜ್ ನಿಟ್ಟಡೆ, ಮಧುಸೂದನ್ ಕಳೆಂಜ, ಅನಿಲ್ ಎಂ, ವಿಜಯ ನಾವೂರು,
ರೋಹಿಣಿ ಪೆರಾಡಿ, ಮೀನಾಕ್ಷಿ ಪಡಂಗಡಿ, ಯಶೋದಾ ಎಸ್. ಪೂಜಾರಿ ಶೇಖರ್ ಮತ್ತಿತರರು ವಹಿಸಿದ್ದರು.
ಟಾಪ್ ನ್ಯೂಸ್
![6-ptr](https://www.udayavani.com/wp-content/uploads/2024/12/6-ptr-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![6-ptr](https://www.udayavani.com/wp-content/uploads/2024/12/6-ptr-150x90.jpg)
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-150x87.jpg)
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
![BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್](https://www.udayavani.com/wp-content/uploads/2024/12/4-37-150x90.jpg)
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
![1](https://www.udayavani.com/wp-content/uploads/2024/12/1-37-150x80.jpg)
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.