ಎಲ್ಲೆಡೆ ಹೊಂಚು ಹಾಕುತ್ತಿದ್ದಾರೆ ಸೈಬರ್‌ ಖದೀಮರು!

ವಂಚನೆಗೆ ವಿದ್ಯಾವಂತರೇ ಹೆಚ್ಚು ಟಾರ್ಗೆಟ್‌; ಒಂದು ಪ್ರಕರಣ ಸಿಐಡಿಗೆ

Team Udayavani, Mar 26, 2021, 7:00 AM IST

ಎಲ್ಲೆಡೆ ಹೊಂಚು ಹಾಕುತ್ತಿದ್ದಾರೆ ಸೈಬರ್‌ ಖದೀಮರು!

ಮಹಾನಗರ: ದ.ಕ. ಜಿಲ್ಲೆಯಲ್ಲಿ ಸೈಬರ್‌ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ.

ಜಿಲ್ಲೆಯಲ್ಲಿ 81 ದಿನಗಳಲ್ಲಿ 370ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಒಂದು ಕೋ.ರೂ.ಗಳಿಗೂ ಅಧಿಕ ಮೊತ್ತದ ವಂಚನ ಪ್ರಕರಣವೊಂದು ಸಿಐಡಿ ತನಿಖೆಗೆ ಒಳಪಡುವ ಸಾಧ್ಯತೆ ಇದೆ. ಒಂದೇ ಸಮನೆ ಏರುತ್ತಿರುವ ಸೈಬರ್‌ ಪ್ರಕರಣಗಳನ್ನು ಭೇದಿಸುವುದು ಪೊಲೀಸರಿಗೆ ಸವಾಲಾಗಿದೆ.

ವಿದ್ಯಾವಂತರೇ ಅಧಿಕ ಬಲಿ :

ಅಪರಿಚಿತರೊಂದಿಗೆ ಫೇಸ್‌ಬುಕ್‌ ಮೂಲಕ ಪರಿಚಯ, ಸ್ನೇಹ ಮಾಡಿಕೊಂಡು ವಂಚನೆಗೆ ಒಳಗಾಗುವುದು, ಬ್ಯಾಂಕ್‌ ಖಾತೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಇತರರೊಂದಿಗೆ ಹಂಚಿಕೊಳ್ಳುವುದು ಮೊದಲಾದ ವಂಚನ ಪ್ರಕರಣಗಳಲ್ಲಿ ಶಿಕ್ಷಕರು, ವೈದ್ಯರು, ಉಪನ್ಯಾಸಕರು ಸಹಿತ ವಿದ್ಯಾವಂತ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮಹಿಳೆಯರ ಸಂಖ್ಯೆಯೂ ಅಧಿಕವಾಗಿದೆ ಎನ್ನುತ್ತಾರೆ ಸೈಬರ್‌ ಪೊಲೀಸರು. ಪ್ರಸ್ತುತ ದ.ಕ ಜಿಲ್ಲೆಯಲ್ಲಿ ಉದ್ಯೋಗ, ವೈವಾಹಿಕ ಸಂಬಂಧ, ಗಿಫ್ಟ್ ನೀಡುವುದು, ಫೇಸ್‌ಬುಕ್‌ನಲ್ಲಿ ಪರಿಚಯ ಮಾಡಿಕೊಂಡು ಫೋಟೋ, ವೀಡಿಯೋ ಪಡೆದು ಎಡಿಟ್‌ ಮಾಡಿ ಬ್ಲ್ಯಾಕ್‌ವೆುàಲ್‌ ಮಾಡುವುದು ಮೊದಲಾದವುಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿವೆ.

ಮಂಗಳೂರು ನಗರ ಸೈಬರ್‌ ಪೊಲೀಸ್‌ ಠಾಣೆಯಲ್ಲಿ 2019ರಲ್ಲಿ 122 ಪ್ರಕರಣಗಳು(ಎಫ್ಐಆರ್‌) ದಾಖ ಲಾಗಿದ್ದರೆ, 2020ರಲ್ಲಿ 67 ಎಫ್ಐಆರ್‌, 1,025 ಎನ್‌ಸಿಆರ್‌ ದಾಖಲಾಗಿವೆ. 2021ರಲ್ಲಿ ಜನವರಿಯಿಂದ ಮಾರ್ಚ್‌ 22ರ ವರೆಗೆ ಕೇವಲ ಎರಡೂವರೆ ತಿಂಗಳಲ್ಲಿ 32 ಎಫ್ಐಆರ್‌, 320 ಎನ್‌ಸಿಆರ್‌ಗಳು ದಾಖಲಾಗಿವೆ.

55ಕ್ಕೂ ಅಧಿಕ ಪ್ರಕರಣ ದಾಖಲು :

ದ.ಕ ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ಸೈಬರ್‌ ಅಪರಾಧ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುವ ಸೆನ್‌ ಪೊಲೀಸ್‌ ಠಾಣೆಯಲ್ಲಿ 2020ರಲ್ಲಿ 200ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. 2021ರ ಜನವರಿಯಿಂದ ಮಾರ್ಚ್‌ವರೆಗೆ 55ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಎನ್‌ಸಿಆರ್‌ (ಗಂಭೀರವಲ್ಲದ) ಪ್ರಕರಣಗಳನ್ನು ಪೊಲೀಸ್‌ ಠಾಣಾ ಮಟ್ಟದಲ್ಲಿಯೇ ತನಿಖೆ ನಡೆಸಿ ಇತ್ಯರ್ಥ ಮಾಡಲಾಗುತ್ತದೆ.

ಅಮೆರಿಕಗೆ ನಿರಂತರ ಇ-ಮೇಲ್‌  :

ಸೈಬರ್‌ ಅಪರಾಧಗಳಿಗೆ ಸಂಬಂಧಿಸಿದ ಕೆಲವು ಪ್ರಕರಣಗಳನ್ನು ಭೇದಿಸಲು ಸ್ಥಳೀಯ ಪೊಲೀಸರಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ನಂತಹ ಅಂತರ್ಜಾಲ ಸಂಸ್ಥೆಗಳ ಸಹಕಾರ ಅತ್ಯವಶ್ಯ. ಆದರೆ ಸಕಾಲದಲ್ಲಿ ಸಹಕಾರ ದೊರೆಯುತ್ತಿಲ್ಲ ಎನ್ನುತ್ತಾರೆ ಪೊಲೀಸ್‌ ಅಧಿಕಾರಿಗಳು. ವಾಟ್ಸ್‌ಆ್ಯಪ್‌ಗೆ ಸಂಬಂಧಿಸಿದ ಪ್ರತೀ ಪ್ರಕರಣಕ್ಕೂ ಅಮೆರಿಕದಲ್ಲಿರುವ ವಾಟ್ಸ್‌ ಆ್ಯಪ್‌ ಸಂಸ್ಥೆಗೆ ಇ-ಮೇಲ್‌ ಮೂಲಕ ಕೋರಿಕೆ ಸಲ್ಲಿಸಬೇಕು. ಅಲ್ಲಿಂದ ಉತ್ತರ ಬರುತ್ತದೆ. ಕೆಲವೊಮ್ಮೆ ಉತ್ತರ ಬರುವುದಿಲ್ಲ, ಬದಲಾಗಿ ಪ್ರಶ್ನೆಯೇ ಬರುತ್ತದೆ. ಮತ್ತೆ ಅದಕ್ಕೆ ಪ್ರತಿಕ್ರಿಯೆ ನೀಡಬೇಕು. ಇದು ಹಲವು ದಿನಗಳ ಸಮಯ ತೆಗೆದುಕೊಳ್ಳುತ್ತದೆ. ಕ್ಲಪ್ತ ಸಮಯಕ್ಕೆ ಸರಿಯಾದ ಮಾಹಿತಿ ದೊರೆಯುವುದಿಲ್ಲ. ಇದು ತನಿಖೆಗೆ ತೊಡಕಾಗಿದೆ. ಕೆಲವು ಬಾರಿ ವಾಟ್ಸ್‌ಆ್ಯಪ್‌ ಸಂಸ್ಥೆಯವರು ಪೊಲೀಸರ ಎಫ್ಐಆರ್‌ನ್ನು ಪರಿಗಣಿಸದೆ ನ್ಯಾಯಾಲಯದ ಆದೇಶ ಕೇಳುತ್ತಾರೆ. ಇದರಿಂದಾಗಿಯೂ ವಿಳಂಬವಾಗುತ್ತದೆ ಎನ್ನುವುದು ಅಧಿಕಾರಿಗಳ ದೂರು.

ಸೈಬರ್‌ ಪ್ರಕರಣಗಳನ್ನು ಕೂಡ ಇಲಾಖೆ ಗಂಭೀರವಾಗಿ ಪರಿಗಣಿಸಿ ಹಲವು ಪ್ರಕರಣಗಳನ್ನು ಭೇದಿಸಿದೆ. ಸೈಬರ್‌ ಠಾಣೆಗೆ ಲ್ಯಾಬ್‌ನ್ನು ಒದಗಿಸಲಾಗಿದೆ. ಅಲ್ಲದೆ ಕೆಲವು ಸಿಬಂದಿಗೆ ಲೆವೆಲ್‌ 3 ತರಬೇತಿ ಕೂಡ ನೀಡಲಾಗಿದ್ದು ಅವರು ಪರಿಣತರಾಗಿದ್ದಾರೆ. ಬಿ.ಎಂ. ಲಕ್ಷ್ಮೀಪ್ರಸಾದ್‌,  ಪೊಲೀಸ್‌ ವರಿಷ್ಠಾಧಿಕಾರಿಗಳು, ದ.ಕ. ಜಿಲ್ಲೆ

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Kulai: ನೀರುಪಾಲಾದವರ ಶವ ಹಸ್ತಾಂತರ

Kulai: ನೀರುಪಾಲಾದವರ ಶವ ಹಸ್ತಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.