ಸೈಬರ್‌ ಕ್ರೈಂ: ಸಿಆರ್‌ಪಿಸಿ, ಐಪಿಸಿಯಲ್ಲಿ ಪೂರಕ ಬದಲಾವಣೆ ಅಗತ್ಯ


Team Udayavani, May 31, 2017, 12:34 PM IST

3005mlr31.jpg

ಮಂಗಳೂರು: ಸೈಬರ್‌ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಿಆರ್‌ಪಿಸಿ ಹಾಗೂ ಐಪಿಸಿ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಸಿಐಡಿಯ ಪೊಲೀಸ್‌ ಮಹಾನಿರ್ದೇಶಕ ಕಿಶೋರ್‌ ಚಂದ್ರ ಅಭಿಪ್ರಾಯಪಟ್ಟರು.

ನಗರದ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಮಂಗಳವಾರ ಆಯೋಜಿಸಲಾದ ಸೈಬರ್‌ ಅಪರಾಧಗಳ ಕುರಿತ ಜಾಗೃತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸೈಬರ್‌ ಕ್ರೈಂ ಇಂದು ಪ್ರತ್ಯೇಕವಾಗಿ ಉಳಿದಿಲ್ಲ. ಪ್ರತಿಯೊಂದು ಪ್ರಕರ ಣದ ತನಿಖೆಯಲ್ಲೂ ಸೈಬರ್‌ ಕ್ರೈಂನ ಅಂಶ ಕಾಣಬಹುದು. ಇತ್ತೀಚೆಗೆ ದಾಖಲಾಗುತ್ತಿರುವ ಕೆಲವು ಪ್ರಕರಣಗಳು ಇವೆಲ್ಲವನ್ನೂ ಮೀರಿ ಪೊಲೀಸ್‌ ಇಲಾಖೆಗೆ ಸವಾಲಾ ಗುತ್ತಿವೆ. ಈ ನಿಟ್ಟಿನಲ್ಲಿ ಸೈಬರ್‌ ಕ್ರೈಂಗೆ ಪೂರಕವಾದ ಕಾನೂನಿನಲ್ಲಿ ಬದಲಾವಣೆ ಮಾಡಬೇಕಾಗಿದೆ. ಎಲ್ಲ ರೀತಿಯ ಸೈಬರ್‌ ಕ್ರೈಂಗಳನ್ನು ಭೇದಿಸುವಲ್ಲಿ ಕೆಲವೊಮ್ಮೆ ತಜ್ಞರೂ ವಿಫಲರಾಗುತ್ತಾರೆ. ತಂತ್ರಜ್ಞಾನ ಬಳಸಿಕೊಂಡು ತನಿಖೆಯ ಕಾರ್ಯ ವಿಧಾನದಲ್ಲಿ ಬದಲಾವಣೆಯಾಗ ಬೇಕು ಎಂದರು.

ಜನ ಜಾಗೃತರಾಗಿ
ಕೆಲವು ಅಪರಾಧಿಗಳು ಸುಳ್ಳು ಮಾಹಿತಿ ನೀಡಿ ಜನರ ಹಣ ದೋಚುತ್ತಾರೆ. ಇಂತಹ ಪ್ರಕರಣಗಳು ನಡೆದಾಗ ಕಾಲ್‌ ಡಾಟಾ ರೆಕಾರ್ಡ್‌ ಮೂಲಕ ಪರಿಶೀಲನೆ ನಡೆಸಿ ಅಪರಾಧಿಗಳ ಸಂಪೂರ್ಣ ಮಾಹಿತಿ ಕಲೆ ಹಾಕಲಾಗುತ್ತದೆ. ಇನ್ನು ವಾಟ್ಸ್‌ಆ್ಯಪ್‌ ಹಾಗೂ ಐಫೋನ್‌ಗಳಲ್ಲಿ ಡೇಟಾ ಪಡೆಯಲು ಸಾಧ್ಯವಾಗದೆ ತನಿಖೆಗೆ ಸವಾಲಾಗಿ ಪರಿಣಮಿಸುವ ಪ್ರಕರಣಗಳು ಕೂಡ ಇವೆ. ಸೈಬರ್‌ ಕ್ರೈಂಗಳನ್ನು ಪತ್ತೆ ಹಚ್ಚಿ ಸಾಬೀತು ಪಡಿಸುವಲ್ಲಿ ಡಿಜಿಟಲ್‌ ಸಾಕ್ಷ್ಯವನ್ನು ನ್ಯಾಯಾಲಯಕ್ಕೆ ಒದಗಿಸುವುದು ಹೇಗೆ ಎಂಬ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಿದೆ. ಇಂತಹ ಪ್ರಕರಣಗಳ ಬಗ್ಗೆ ಜನರೂ ಜಾಗೃತರಾಗಬೇಕು ಎಂದರು.

ಪತ್ತೆ ಸುಲಭವಲ್ಲ
ಸಿಐಡಿ ಎಡಿಜಿಪಿ ಪ್ರತಾಪ್‌ ರೆಡ್ಡಿ ಮಾತನಾಡಿ, ಸೈಬರ್‌ ಅಪರಾಧ ಪತ್ತೆಹಚ್ಚುವುದು ಅನ್ಯ ಅಪರಾಧಗಳನ್ನು ಭೇದಿಸುವಷ್ಟು ಸುಲಭವಲ್ಲ. ಹೊಸ ಹೊಸ ಆವಿಷ್ಕಾರಗಳು ಹೆಚ್ಚಾಗುತ್ತಿದ್ದಂತೆ ಸೈಬರ್‌ ಅಪ ರಾಧಗಳು ಕೂಡಹೆಚ್ಚಾಗುತ್ತಿವೆ. ಯಾವುದೇ ಸೈಬರ್‌ ಅಪರಾಧ ನಡೆದಾಗ ತತ್‌ಕ್ಷಣ ಪೊಲೀಸ್‌ ಇಲಾಖೆಯನ್ನು ಸಂಪರ್ಕಿಸಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ಕಾರ್ಯಗಳನ್ನು ಕೂಡಲೇ ಸ್ಥಗಿತಗೊಳಿ
ಸಲು ಸಂಬಂಧಪಟ್ಟ ವರಿಗೆ ಸೂಚನೆ ನೀಡಬೇಕು. ಇಂತಹ ಪ್ರಕರಣಗಳಿಗೆ ಸಂಬಂಧಿಸಿ ಇಲಾಖಾಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ದೊರೆತಲ್ಲಿ ಪ್ರಕರಣ ಭೇದಿಸಲು ಸಹಾಯಕ ವಾಗುವು ದಲ್ಲದೆ, ಕೌಶಲವೂ ಬೆಳೆಯುತ್ತದೆ ಎಂದರು.

ಮಕ್ಕಳಿಗೆ ಮಾಹಿತಿ ನೀಡಿ
ಪಶ್ಚಿಮ ವಲಯ ಐಜಿಪಿ ಹರಿಶೇಖರನ್‌ ಮಾತನಾಡಿ, ತಂತ್ರಜ್ಞಾನ ಬೆಳೆಯುತ್ತಿರುವಂತೆ ನಮ್ಮ ಸಾಮಾನ್ಯ ಜ್ಞಾನ ವೃದ್ಧಿಸಿಕೊಂಡಲ್ಲಿ ನಾವೂ ಬೆಳೆಯಲು ಸಾಧ್ಯ. ಶಾಲೆಗಳಲ್ಲಿ 8ನೇ ತರಗತಿಯಿಂದಲೇ ಸಾಮಾಜಿಕ ಜಾಲತಾಣಗಳಿಂದಾಗುವ ಸಮಸ್ಯೆ ಕುರಿತು ಮಾಹಿತಿ ನೀಡುವ ಕೆಲಸಗಳು ನಡೆಯಬೇಕಾಗಿದೆ ಎಂದರು.

ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಚಂದ್ರಶೇಖರ್‌ ಮಾತ ನಾಡಿ, ಹೆಚ್ಚುತ್ತಿರುವ ಸೈಬರ್‌ ಅಪರಾಧ ಕೃತ್ಯ ತಡೆಗಟ್ಟುವ ನಿಟ್ಟಿನಲ್ಲಿ ಈ ಕಾರ್ಯಾಗಾರ ಉಪ ಯುಕ್ತವಾಗಿದೆ ಎಂದರು.

ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಡಾ| ಸಂಜೀವ್‌ ಪಾಟೀಲ್‌ ವಂದಿಸಿದರು.

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.