ಡಿ. 22 ರಿಂದ 30ರವರೆಗೆ ಕರಾವಳಿ ಉತ್ಸವ
Team Udayavani, Oct 28, 2017, 10:48 AM IST
ಮಹಾನಗರ: ಈ ಬಾರಿಯ ಕರಾವಳಿ ಉತ್ಸವವು ಡಿ.22ರಿಂದ 30ರ ವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಶಾಸಕ ಜೆ.ಆರ್. ಲೋಬೋ ನೇತೃತ್ವದಲ್ಲಿ ಸಮಾಲೋಚನ ಸಭೆ ನಡೆಯಿತು.
ಅಪರ ಜಿಲ್ಲಾಧಿಕಾರಿ ಕುಮಾರ್ ಮಾತನಾಡಿ, ಕರಾವಳಿ ಉತ್ಸವಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಒಂದು ಸಭೆ ಕರೆದಿದ್ದೆವು. ಕರಾವಳಿ ಉತ್ಸವ ನಡೆಯುವ ಮೈದಾನಕ್ಕೆ ಟೆಂಡರ್ ಕರೆದಿದ್ದೇವೆ. ಉತ್ಸವಗಳ ಸಮಿತಿಗೆ ಕ್ರಿಯಾಶೀಲ ವ್ಯಕ್ತಿಗಳನ್ನು ಸೇರಿಸಿಕೊಂಡಿಲ್ಲ ಎಂದು ಕಳೆದ ಬಾರಿ ದೂರು ಬಂದಿದ್ದು, ಈ ಬಾರಿ ಸರಿಪಡಿಸಿಕೊಂಡಿದ್ದೇವೆ ಎಂದರು.
ಕಳೆದ ಬಾರಿಯಂತೆಯೇ ಈ ಬಾರಿ ಕರಾವಳಿ ಗೌರವ ಪ್ರಶಸ್ತಿಯನ್ನು ನೀಡಲಾಗುವುದು. ಕರಾವಳಿ ಉತ್ಸವ
ನಡೆಸಲು ಸರಕಾರದಿಂದ ಈಗಾಗಲೇ 30 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. ಈ ಬಾರಿಯ ಮೆರವಣಿಗೆಯು ನೆಹರೂ ಮೈದಾನದಿಂದ ಹೊರಟು ಕರಾವಳಿ ಮೈದಾನಕ್ಕೆ ತಲುಪಲಿದೆ. ಕದ್ರಿಪಾರ್ಕ್ನಲ್ಲಿ ನಡೆಯುವ ಅನೇಕ ಕಾರ್ಯಕ್ರಮಗಳು ಕರಾವಳಿ ಮೈದಾನಕ್ಕೆ ಸ್ಥಳಾಂತರಗೊಳ್ಳಲಿವೆ ಎಂದು ವಿವರಿಸಿದರು.
ಸಾಂಸ್ಕೃತಿಕ ಸಮಿತಿ ಸದಸ್ಯರು ಮಾತನಾಡಿ, ಕರಾವಳಿ ಉತ್ಸವದ ವೇಳೆ ಕದ್ರಿಪಾರ್ಕ್ನಲ್ಲಿ ಪ್ರತಿದಿನ ಎರಡು ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತೇವೆ. ತುಳು, ಕೊಂಕಣಿ, ಬ್ಯಾರಿ ಅಕಾಡೆಮಿಯಿಂದ ಕಾರ್ಯಕ್ರಮ,
ಯಾವುದಾದರೂ ಒಂದು ದಿನ ನಗರದ ಪತ್ರಿಕೋದ್ಯಮಿಗಳ ಮುಖಾಂತರ ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮ
ನಡೆಸಲಾಗುವುದು. ಈ ಬಾರಿ ಕದ್ರಿಪಾರ್ಕ್ನಲ್ಲಿ ನಡೆಯುವ ಬಹುತೇಕ ಕಾರ್ಯಕ್ರಮಗಳು ಕರಾವಳಿ ಮೈದಾನಕ್ಕೆ
ಸ್ಥಳಾಂತರವಾಗುತ್ತದೆ ಎಂದರು.
ಬೀಚ್ ಉತ್ಸವ ಸಮಿತಿ ಸದಸ್ಯರು ಮಾತನಾಡಿ, ಈ ಬಾರಿ ಮೂರು ದಿನಗಳ ಕಾಲ ಆಹಾರಮೇಳ, ಸಾಂಪ್ರದಾಯಿಕ ಉತ್ಸವ ವನ್ನು ನಡೆಸಲಾಗುವುದು. ಅಲ್ಲದೆ, ಈ ಬಾರಿ 50 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಂದ ಸಾಸ್ಕೃತಿಕ ಕಾರ್ಯಕ್ರಮ ನಡೆಸಲು ಯೋಚಿಸಲಾಗಿದೆ ಎಂದರು.
ಹೆಚ್ಚಿನ ಅನುದಾನದ ಭರವಸೆ
ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಮಾತನಾಡಿ, ಕರಾವಳಿ ಉತ್ಸವಕ್ಕೆ ರಾಜ್ಯ ಸರಕಾರದಿಂದ ಈಗಾಗಲೇ 30 ಲಕ್ಷ ರೂ. ಬಿಡುಗಡೆ ಮಾಡಿದ್ದು, ಇನ್ನೂ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನ ನಡೆಸುತ್ತೇನೆ. ಆರ್ಥಿಕ ಸಮಿತಿಯ
ಸದಸ್ಯರು ಸ್ಥಳೀಯವಾಗಿರುವ ಅನೇಕ ಸಂಸ್ಥೆಗಳಿಗೆ ಭೇಟಿ ನೀಡಿ ಪ್ರಾಯೋಜಕತ್ವದ ವಿಚಾರಕ್ಕೆ ಸಂಬಂಧಪಟ್ಟಂತೆ ಕೆಲಸ ನಡೆಸಲಿ. ಕರಾವಳಿ ಉತ್ಸವ ನಡೆಯುವ ಸಂದರ್ಭದಲ್ಲಿಯೇ ಪಿಲಿಕುಳದಲ್ಲಿ ನಡೆಸಲು ಕಂಬಳ ಸಮಿತಿ ಜತೆ ಚರ್ಚೆ ನಡೆಸಿ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಸಮನ್ವಯದಿಂದ ಕೆಲಸ
ಈ ಬಾರಿಯ ಕರಾವಳಿ ಉತ್ಸವಕ್ಕೆ ಯಾವುದಾದರೊಂದು ಥೀಮ್ ಇಟ್ಟುಕೊಂಡರೆ ಒಳ್ಳೆಯದು. ಪ್ರತಿಯೊಂದು ಸಮಿತಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು.
– ಶಶಿಕಾಂತ್ ಸೆಂಥಿಲ್,ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.