ದ.ಕ.; 957.39 ಕೋಟಿ ರೂ. ವೆಚ್ಚದ ರಾ.ಹೆ. ಅಭಿವೃದ್ಧಿ 2 ಯೋಜನೆಗಳಿಗೆ ಅನುಮೋದನೆ
Team Udayavani, Dec 28, 2023, 4:33 PM IST
ಮಂಗಳೂರು : ಕೇಂದ್ರ ಸರಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ಕುಮಾರ್ ಕಟೀಲ್ ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ 28.490 ಕಿ.ಮೀ.ದ್ವಿಪಥ ಅಭಿವೃದ್ಧಿ 613.65 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು ಸೆಕ್ಷನ್ನಲ್ಲಿ 11.20 ಕಿ.ಮೀ. ಅಭಿವೃದ್ದಿ 343.73 ಕೋಟಿ ರೂ. ವೆಚ್ಚದ ಯೋಜನೆಗೆ ಕೇಂದ್ರ ಭೂಸಾರಿಗೆ ಮಂತ್ರಾಲಯ ಅನುಮೋದನೆ ನೀಡಿದ್ದು ಟೆಂಡರ್ ಆಹ್ವಾನಿಸಿದೆ.
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿ -ಮೈಸೂರು ರಸ್ತೆ ಚತುಷ್ಪಥ ಕಾಮಗಾರಿ (ಒಟ್ಟು 71.60 ಕಿ.ಮೀ)ಯ ಸಮಗ್ರ ಯೋಜನಾ ವರದಿ ತಯಾರಿಸಲು ಟೆಂಡರ್ ಕರೆಯಲಾಗಿದೆ. ಕಾಮಗಾರಿಗೆ 1000 ಕೋಟಿ ರೂ. ಅಧಿಕ ವೆಚ್ಚ ಎಂದು ಅಂದಾಜಿಸಲಾಗಿದ್ದು, ಸಮಗ್ರ ಯೋಜನಾ ವರದಿ ಬಳಿಕ ನಿಖರ ವೆಚ್ಚ ತಿಳಿಯಬಹುದೆಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.