Kerala ಚುನಾವಣ ಕಾರ್ಯ ನಿರತ ದ.ಕ. ಅರ್ಹ ಮತದಾರರಿಗೆ ಅವಕಾಶ
ಅಂಚೆ ಮತಕ್ಕೆ ಅನುಮತಿ
Team Udayavani, Apr 22, 2024, 1:11 AM IST
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುವ ಎ. 26ರಂದೇ ಕೇರಳ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಲೋಕಸಭೆಗೆ ಮತದಾನ ನಡೆಯಲಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅರ್ಹ ಮತದಾರರಾಗಿರುವ ಕೆಲವು ಅಧಿಕಾರಿಗಳು ಹಾಗೂ ಸಿಬಂದಿ ಕೇರಳದ ಯಾವುದೇ ಜಿಲ್ಲೆಯಲ್ಲಿ ಚುನಾವಣ ಕರ್ತವ್ಯಕ್ಕೆ ನಿಯೋಜಿತರಾಗಿದ್ದಲ್ಲಿ ಅವರಿಗೆ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಲು ವಿಒಇಡಿ (ವೋಟರ್ ಆನ್ ಎಲೆಕ್ಷನ್ ಡ್ನೂಟಿ)ಯಡಿ ಅವಕಾಶ ಕಲ್ಪಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಅಂತಹ ವಿಒಇಡಿ ವೋಟರ್‌ಗಳು ಕೇರಳದ ಸಕ್ಷಮ ಪ್ರಾಧಿಕಾರಿಗಳಾಗಿರುವ ಜಿಲ್ಲಾ ಚುನಾವಣಾಧಿಕಾರಿ ನೀಡಿರುವ ಚುನಾವಣೆ ಕರ್ತವ್ಯದ ಆದೇಶ ಹಾಗೂ ನಮೂನೆ 12ರೊಂದಿಗೆ ಖುದ್ದಾಗಿ ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಯವರ ಕಚೇರಿಯ 3ನೇ ಮಹಡಿ ಯಲ್ಲಿರುವ ಮೀಸಲಾಗಿರುವ ಕೊಠಡಿಗೆ ಆಗಮಿಸಿದಲ್ಲಿ ಅಲ್ಲಿ ಅವರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಮಾಡುವ ಅವಕಾಶ ಒದಗಿಸಲಾಗುತ್ತದೆ.
ಈ ಅಂಚೆ ಮತದಾನ ಪ್ರಕ್ರಿಯೆ ಎ. 22ರಿಂದ 24ರ ವರೆಗೆ ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೂ ಲಭ್ಯ ವಿರುತ್ತದೆ. ಇದೇ ರೀತಿಯ ಸವಲತ್ತನ್ನು ದ.ಕ. ಜಿಲ್ಲೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ನಿಯೋಜಿತ ರಾಗಿರುವ ಕೇರಳ ರಾಜ್ಯದ ವಿಒಇಡಿ ವೋಟರ್ಸ್‌ಗಳಿಗೂ ಕಲ್ಪಿಸಲಾಗಿದ್ದು, ಈ ಬಗ್ಗೆ ಅಲ್ಲಿನ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮನವಿ ಮಾಡಲಾಗಿದೆ.
ಕೇರಳ ರಾಜ್ಯದ ವಿಒಇಡಿ ಮತದಾರರು ಅಂಚೆ ಮತದಾನ ಮಾಡಲು ಸಂಬಂಧಿಸಿದ ಸಕ್ಷಮ ವ್ಯಾಪ್ತಿಯ ಜಿಲ್ಲಾ ಚುನಾವಣಾಧಿ ಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ದ.ಕ. ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಎಂ.ಪಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
“ಉದಯವಾಣಿ’ ವರದಿ
ದ.ಕ. ಜಿಲ್ಲೆಯಲ್ಲಿ ನೆಲೆಸಿದ್ದು, ಕೇರಳದಲ್ಲಿ ಸರಕಾರಿ ಉದ್ಯೋಗಿಗಳಾಗಿದ್ದು, ಚುನಾವಣ ಕರ್ತವ್ಯ ನಿರ್ವಹಿಸುತ್ತಿರುವವರು ಮತದಾನದಿಂದ ವಂಚಿತರಾಗುವ, ಅಂಚೆ ಮತದಾನವನ್ನೂ ಮಾಡಲು ಸಾಧ್ಯವಾಗದ ಸನ್ನಿವೇಶ ಎದುರಾಗಿರುವ ಕುರಿತಂತೆ “ಉದಯವಾಣಿ’ ಪತ್ರಿಕೆ ಎ. 14ರಂದು “ಕೇರಳದಲ್ಲಿ ಚುನಾವಣ ಕಾರ್ಯನಿರತ ಜಿಲ್ಲೆಯ ಮತದಾರರಿಗೆ ಮತದಾನ ತಪ್ಪುವ ಆತಂಕ’ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿತ್ತು. ಈ ವೇಳೆ ಪ್ರತಿಕ್ರಿಯೆ ನೀಡಿದ್ದ ಜಿಲ್ಲಾಧಿಕಾರಿ ಈ ವಿಚಾರವನ್ನು ಚುನಾವಣ ಆಯೋಗದ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದರು. ಪ್ರಸ್ತುತ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್
Hukkeri: ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.