D.K. ,Udupi ;ಮರಳು ಆ್ಯಪ್ ಮರುಸ್ಥಾಪನೆ
Team Udayavani, Jan 3, 2024, 12:26 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಮರಳಿನ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಈ ಹಿಂದೆ ಜಾರಿಯಲ್ಲಿದ್ದ https://dksandbazar.comತಂತ್ರಾಂಶವನ್ನು ಮರು ಸ್ಥಾಪಿಸಲಾಗಿದೆ.
ಸಾರ್ವಜನಿಕರು ಈ ಆ್ಯಪ್ ಮೂಲಕ ಸಾಮಾನ್ಯ ಮರಳನ್ನು ನೇರವಾಗಿ ಖರೀದಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ ಮರಳಿನ ಕೊರತೆ ಎದುರಾಗಿದ್ದು, ಇ-ಸ್ಯಾಂಡ್‌ನಲ್ಲಿ ಮರಳು ಲಭ್ಯವಾಗುತ್ತಿಲ್ಲ. ಕೆಲದಿನಗಳ ಹಿಂದೆ ಕುಂದಾಪುರ ಭಾಗದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಲಭ್ಯವಿದ್ದ ಮರಳು ಬೇಡಿಕೆ ಹೆಚ್ಚಿದಂತೆ ಕಾದಿರಿಸಿದವರಿಗೆ ಮರಳು ಪೂರೈಕೆಯಾಗುತ್ತಿದ್ದು, ಇ-ಸ್ಯಾಂಡ್ ವೆಬ್‌ಸೈಟ್‌ನಲ್ಲಿ ಸದ್ಯಕ್ಕೆ ಆನ್ ಲೈನ್ ಬುಕ್ಕಿಂಗ್‌ಗೆ ತೆರೆದುಕೊಳ್ಳುತ್ತಿಲ್ಲ. ಮತ್ತೆ ಮರಳು ಲಭ್ಯವಾದಲ್ಲಿ ಬುಕ್ಕಿಂಗ್ ಆಪ್ಶನ್ ತೆರೆದುಕೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮ ಕಂಡುಬಂದರೆ ದೂರು ನೀಡಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಗಾರಿಕೆಗೆ ಕಡಿವಾಣಕ್ಕೆ ಕಠಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅನಧಿಕೃತ ಮರಳುಗಾರಿಕೆ ಕಂಡುಬಂದಲ್ಲಿ ಸಾರ್ವಜನಿಕರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದೂರವಾಣಿ ಸಂಖ್ಯೆ: 8762339932ಗೆ ತಿಳಿಸುವಂತೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.