ಕನ್ನಡ ನಾಡು- ನುಡಿಯ ಸಾಹಿತ್ಯ ಸಂಭ್ರಮಕ್ಕೆ ಚಾಲನೆ
Team Udayavani, Feb 12, 2021, 10:15 PM IST
ಕೊಡಿಯಾಲಬೈಲ್: ಕನ್ನಡ ನಾಡು, ನುಡಿಯ ಸಾಹಿತ್ಯ ಸಂಭ್ರಮ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ಚಾಲನೆ ದೊರಕಿದೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಂಗಳೂರಿನ ಕೊಡಿಯಾಲಬೈಲ್‌ನಲ್ಲಿರುವ ಶಾರದಾ ವಿದ್ಯಾಲಯದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ 24ನೇ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಆಯೋಜನೆಯಾಗಿದ್ದು, ಉದ್ಘಾಟನೆಯ ಹಿನ್ನೆಲೆಯಲ್ಲಿ ಮೊದಲನೇ ದಿನ ನೂರಾರು ಮಂದಿ ಸಾಹಿತ್ಯಾಸಕ್ತರು ಆಗಮಿಸಿ, ಸಮ್ಮೇಳನದಲ್ಲಿ ಭಾಗಿಯಾದರು.
ಬೆಳಗ್ಗೆ ಧ್ವಜಾರೋಹಣದ ಬಳಿಕ ಮಧ್ಯಾಹ್ನ ಕನ್ನಡ ಭುವನೇಶ್ವರಿ ದಿಬ್ಬಣ ನಡೆ ಯಿತು. ಬಳಿಕ ಹಿರಿಯ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಷಿ ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನಕ್ಕೆ ಚಾಲನೆ ದೊರಕಿತು.
ಸಮ್ಮೇಳನದ ಅಂಗಣದಲ್ಲಿರುವ ಜಾರ್ಜ್ ಫೆರ್ನಾಂಡಿಸ್ ಪ್ರದರ್ಶನಾಂಗಣದಲ್ಲಿ ಕರಾವಳಿ ಚಿತ್ರಕಲಾ ಚಾವಡಿ ಮಂಗಳೂರು ಇವರಿಂದ ಚಿತ್ರಕಲಾ ಪ್ರದರ್ಶನ, ಮಾರಾಟ ಮಳಿಗೆ, ಶಾರದಾ ಆಯುರ್ವೇದ ಕಾಲೇಜು, ನ್ಯಾಚುರೋಪತಿ ಕಾಲೇಜಿನ ಆಶ್ರಯದಲ್ಲಿ “ವೈದ್ಯಕೀಯ ಮಾಹಿತಿ ಮಳಿಗೆ’ ಹಾಗೂ ಕೋವಿಡ್ ಅನಂತರದ ಸ್ವಾಸ್ಥ Âದ ಕುರಿತು ಅರಿವು ಮೂಡಿಸುವ ಪ್ರಾತ್ಯಕ್ಷಿಕೆ, ಪುಸ್ತಕ ಮಳಿಗೆಗಳ ಸಹಿತ ವಿವಿಧ ಗೃಹೋಪಯೋಗಿ, ಗುಡಿ ಕೈಗಾರಿಕ ವಸ್ತುಗಳ ಮಳಿಗೆ ಇದ್ದವು.
ಕನ್ನಡ ಭುವನೇಶ್ವರಿ ದಿಬ್ಬಣಕ್ಕೆ ಚಾಲನೆ :
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಭುವನೇಶ್ವರಿ ದಿಬ್ಬಣಕ್ಕೆ ಶಾರದಾ ವಿದ್ಯಾಲಯದ ಮಹಾದ್ವಾರದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.
ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿ ಗೋಡು ಅವರು ದಿಬ್ಬಣ ಉದ್ಘಾಟಿಸಿ, ಕನ್ನಡ ಭಾಷೆ ಉಳಿಸಲು ಕನ್ನಡ ಸಾಹಿತ್ಯ ಸಮ್ಮೇಳನಗಳು ಸಹಕಾರಿಯಾಗುತ್ತದೆ ಎಂದರು. ಶ್ರೀ ಶರವು ಮಹಾಗಣಪತಿ ದೇವ ಸ್ಥಾನದ ಆಡಳಿತ ಮೊಕ್ತೇಸರ ರಾಘವೇಂದ್ರ ಶಾಸ್ತ್ರಿ ದೀಪ ಪ್ರಜ್ವಲನೆ ಮಾಡಿದರು.
ಇದೇ ವೇಳೆ ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಸಮ್ಮೇಳನಾಧ್ಯಕ್ಷ ಡಾ| ಎಂ. ಪ್ರಭಾಕರ ಜೋಷಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ, ಶ್ರೀನಿವಾಸ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ರಾಘವೇಂದ್ರ ರಾವ್, ಕರ್ಣಾಟಕ ಬ್ಯಾಂಕ್ ಸಿಇಒ ಮಹಾಬಲೇಶ್ವರ ಎಂ.ಎಸ್., ತುಳುನಾಡು ಎಜುಕೇಶನ್ ಟ್ರಸ್ಟ್ ವಿಶ್ವಸ್ಥ ಸೀತಾರಾಮ ಆಚಾರ್, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಸಾಹಿತಿ ಡಾ| ಬಿ.ಎ. ವಿವೇಕ ರೈ, ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಬಿ. ಪುರಾಣಿಕ್, ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಮನಪಾ ಸದಸ್ಯೆ ಜಯಶ್ರೀ ಕುಡ್ವ, ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ, ಎಂಸಿಎಫ್ ಆಡಳಿತ ನಿರ್ದೇಶಕ ಕೆ. ಪ್ರಭಾಕರ ರಾವ್ ಸಹಿತ ಮತ್ತಿತರರು ಇದ್ದರು. ಕಾರ್ಯಕ್ರಮವನ್ನು ಗೋಪಾಲಕೃಷ್ಣ ನಿರ್ವಹಿಸಿದರು.
ಇಂದಿನ ಕಾರ್ಯಕ್ರಮ :
ಕನ್ನಡ ಸಾಹಿತ್ಯ ಸಮ್ಮೇಳದಲ್ಲಿ ಫೆ. 13ರಂದು ವಿವಿಧ ಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯ ಕ್ರಮಗಳು ನಡೆಯಲಿವೆ. ಬೆಳಗ್ಗೆ 7.30ರಿಂದ 9 ಗಂಟೆಯವರೆಗೆ ವಾದ್ಯಗೋಷ್ಠಿ- ಚಿಂತನ-ಉದಯರಾಗ-ಯೋಗ ಪ್ರಾತ್ಯಕ್ಷಿಕೆ, ಬೆಳಗ್ಗೆ 9 ಗಂಟೆಯಿಂದ 10 ಗಂಟೆಯ ವರೆಗೆ ಪ್ರಕೃತಿ-ಪ್ರಗತಿ-ಅನುಸಂಧಾನ ಎಂಬ ವಿಷಯದ ಬಗ್ಗೆ ಗೋಷ್ಠಿ, 10 ಗಂಟೆ ಯಿಂದ 11.15ರ ವರೆಗೆ ದಕ್ಷಿಣ ಕನ್ನಡ: ಬಹುಭಾಷಾ ಪಂಡಿತ ಪರಂಪರೆ ವಿಷಯದಲ್ಲಿ ಗೋಷ್ಠಿ, 11.15ರಿಂದ 11.45ರ ವರೆಗೆ ನವರಸ ಗಾಯನ, ಮಧ್ಯಾಹ್ನ 11.45ರಿಂದ 1 ಗಂಟೆಯವರೆಗೆ ಆತ್ಮ ನಿರ್ಭರ ಭಾರತ ಸಂವಾದ ಗೋಷ್ಠಿ ನಡೆಯಲಿದೆ. ಮಧ್ಯಾಹ್ನ 1 ಗಂಟೆಯಿಂದ 1.30ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ, ಅಗಲಿದ ಸಾಧಕರ ಸಂಸ್ಮರಣೆ 1.30ರಿಂದ 2 ಗಂಟೆಯವರೆಗೆ ನಡೆಯಲಿದೆ. ಮಧ್ಯಾ ಹ್ನ 2 ಗಂಟೆಯಿಂದ 2.30ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ, 2.30ರಿಂದ 3.30ರ ವರೆಗೆ ಕವಿಗೋಷ್ಠಿ-1, 3.30ರಿಂದ 4.30ರ ವರೆಗೆ ಮೌಖೀಕ ಪರಂಪರೆ ಮತ್ತು ತೌಳವ ಜೀವನ ವಿಷಯದ ಬಗ್ಗೆ ಗೋಷ್ಠಿ, ಸಂಜೆ 4.30ರಿಂದ 5.30ರ ವರೆಗೆ ಲಲಿತ ಪ್ರಬಂಧ ಗೋಷ್ಠಿ, ಸಂಜೆ 5.30ರಿಂದ ಡಾ| ಶಿವರಾಮ ಕಾರಂತರ ಚೋಮನ ದುಡಿ ಕಾದಂಬರಿ ಆಧಾರಿತ ಚೋಮನ ದುಡಿ ತುಳು ನಾಟಕ ಪ್ರದರ್ಶನಗೊಳ್ಳಲಿದೆ. ಸಂಜೆ 4ರಿಂದ ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ರಾಗ ಸುಧಾರಸ ರಾಷ್ಟ್ರೀಯ ಸಂಗೀತೋತ್ಸವ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.