ಲಸಿಕೆಯಲ್ಲಿ ದ.ಕ. ಉತ್ತಮ ಸಾಧನೆ: ಅಂಗಾರ
Team Udayavani, Oct 23, 2021, 5:48 AM IST
ಮಂಗಳೂರು/ ಸುಳ್ಯ: ಲಸಿಕೆ ನೀಡಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಉತ್ತಮ ಸಾಧನೆ ಮಾಡಿದೆ. ಇದುವರೆಗೆ 22,93,151 ಮಂದಿಗೆ ಲಸಿಕೆ ನೀಡಲಾಗಿದ್ದು ಬಾಕಿ ಉಳಿದಿರುವವರು ಕೂಡ ಲಸಿಕೆ ಪಡೆಯುವಂತೆ ಮನವೊಲಿಸುವ ಕೆಲಸ ನಡೆಸಲಾಗುತ್ತಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ. 88 ಮಂದಿ ಪ್ರಥಮ ಹಾಗೂ ಶೇ. 51 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. ಸರಕಾರದ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಹಕಾರದಿಂದ ಇದು ಸಾಧ್ಯವಾಗಿದೆ. ಲಸಿಕೆ ಪಡೆಯಲು ಹಿಂಜರಿಯುತ್ತಿದ್ದವರೂ ಕೂಡ ಈಗ ಪಡೆದುಕೊಳ್ಳುತ್ತಿದ್ದಾರೆ ಎಂದರು.
ಮಕ್ಕಳ ಸುರಕ್ಷತೆಗೆ ಕ್ರಮ
ಪ್ರಾಥಮಿಕ ಶಾಲೆಗಳ ಪುನರಾರಂಭ ಸಂದರ್ಭ ಜಿಲ್ಲಾಡಳಿತದಿಂದಲೇ ಶಾಲೆಗಳಿಗೆ ಸ್ಯಾನಿಟೈಸ್ ಒದಗಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳ ಲಾಗುವುದು ಎಂದರು.
ಕಾನೂನು ರೀತಿಯಲ್ಲಿ ಮರಳುಗಾರಿಕೆ
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಸುವ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಸಚಿವರೊಂದಿಗೆ ಸಭೆ ನಡೆಸಲಾಗಿದೆ. ಈಗಾಗಲೇ ನ್ಯಾಯಾಲಯವು 32 ಮಂದಿಗೆ ಮರುಳುಗಾರಿಕೆಗೆ ಅನುಮತಿ ನೀಡಿದೆ ಎಂದರು.
ಇದನ್ನೂ ಓದಿ:ಟಿ20 ವಿಶ್ವಕಪ್: ಸೂಪರ್-12 ಹಂತಕ್ಕೆ ನಮೀಬಿಯಾ
ಅಹಿತಕರ ಘಟನೆ ತಡೆಯಲು ಕ್ರಮ
ಪ್ರಶ್ನೆಗೆ ಉತ್ತರಿಸಿದ ಸಚಿವರು, ಜಿಲ್ಲೆಯಲ್ಲಿ ಅಹಿತಕರ ಘಟನೆಗೆ ಯತ್ನಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸರ ಕರ್ತವ್ಯ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಎಲ್ಲ ಇಲಾಖೆಗಳು ಕೂಡ ಉತ್ತಮ ರೀತಿಯಲ್ಲಿ ಆಡಳಿತ ನಡೆಸಲು ಮುಕ್ತ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು. ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, “ಮುಡಾ’ ಅಧ್ಯಕ್ಷ ರವಿಶಂಕರ ಮಿಜಾರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಉಪಾಧ್ಯಕ್ಷ ಈಶ್ವರ ಕಟೀಲು, ಜಿಲ್ಲಾ ವಕ್ತಾರರಾದ ಜಗದೀಶ್ ಶೇಣವ, ರಾಧಾಕೃಷ್ಣ ಉಪಸ್ಥಿತರಿದ್ದರು.
ಮೋದಿ ನಾಯಕತ್ವದಿಂದ ಯಶಸ್ವಿ ನಿರ್ವಹಣೆ
ಸುಳ್ಯ: ಮೋದಿ ನಾಯಕತ್ವದಿಂದ ದೇಶದಲ್ಲಿ ಕೋವಿಡ್ ಯಶಸ್ವಿ ನಿರ್ವಹಣೆಯಾಗಿದೆ. ಲಸಿಕೆ ಕೂಡ 100 ಕೋಟಿ ಗುರಿ ತಲುಪಿರುವುದು ಅದಕ್ಕೆ ಸಾಕ್ಷಿ ಎಂದು ಸಚಿವ ಎಸ್.ಅಂಗಾರ ಹೇಳಿದ್ದಾರೆ. ಈ ಸಾಧನೆಗೆ ಕಾರಣಕರ್ತರಾದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು, ಸಿಬಂದಿ ಮತ್ತು ಇತರ ಇಲಾಖೆಯ ಅಧಿಕಾರಿಗಳನ್ನು ಸಚಿವರ ನೇತೃತ್ವದಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಅವರು ಸಮ್ಮಾನಿಸಿದರು.
ಲಸಿಕೆಗೆ ಆರಂಭದಲ್ಲಿ ಇದ್ದ ಎಲ್ಲ ತೊಂದರೆಗಳನ್ನು ಎದುರಿಸಿಕೊಂಡು ಈ ಗುರಿ ಸಾಧಿಸಲಾಗಿದೆ. ಅಪಹಾಸ್ಯ ಮಾಡಿದವರೂ ಕೂಡ ಇಂದು ಸಾಧನೆಯನ್ನು ಹೊಗಳುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.