ದ.ಕ. ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ಗಣನೀಯ ಇಳಿಕೆ
Team Udayavani, Feb 26, 2022, 7:03 AM IST
ಸಾಂದರ್ಭಿಕ ಚಿತ್ರ.
ಮಂಗಳೂರು: ಜಾಗೃತಿ, ಸಕಾಲಿಕ ಸಲಹೆ ಮತ್ತು ನಿರಂತರ ನಿಗಾ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆರಿಗೆ ವೇಳೆ ಶಿಶು ಮರಣ ಪ್ರಮಾಣದಲ್ಲಿ ಗಣನೀಯ ಇಳಿಕೆ ಕಂಡಿದ್ದು, ರಾಜ್ಯದ ಪ್ರಮಾಣಕ್ಕೆ ಹೋಲಿಸಿದರೆ ತೀರಾ ಕನಿಷ್ಠವಾಗಿದೆ.
ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ ಶಿಶುಗಳ ಸಾವಿನ ಪ್ರಮಾಣ ಸಾವಿರಕ್ಕೆ 26 ಇದ್ದರೆ ದ.ಕ. ಜಿಲ್ಲೆಯಲ್ಲಿ ಇದು ಸಾವಿರಕ್ಕೆ 10 ಆಗಿದೆ.
ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 2020-21ರಲ್ಲಿ ಹೆರಿಗೆ ವೇಳೆ 323 ಶಿಶು ಮರಣ ಸಂಭವಿಸಿದೆ. 2010ರಿಂದ 2022ರ ಜನವರಿ ವರೆಗಿನ ಅಂಕಿ-ಅಂಶಗಳನ್ನು ಪರಿಗಣಿಸಿದರೆೆ 2017-18ನೇ ಸಾಲನ್ನು ಹೊರತು ಪಡಿಸಿ ವರ್ಷದಿಂದ ವರ್ಷಕ್ಕೆ ಶಿಶು ಮರಣ ಇಳಿಮುಖವಾಗುತ್ತಿದೆ. 11 ವರ್ಷಗಳಲ್ಲಿ 3,640 ಶಿಶು ಮರಣ ಸಂಭವಿಸಿದೆ. ಇದರಲ್ಲಿ ಬಹುಪಾಲು ಮರಣ ಅವಧಿಪೂರ್ವ ಹೆರಿಗೆಗಳಿಂದಾಗಿರುವಂಥದ್ದು.
ತಾಯಿ ಮರಣದಲ್ಲಿ ಏರಿಳಿತ
10 ವರ್ಷಗಳ ಅಂಕಿ-ಅಂಶಗಳನ್ನು ಪರಿಗಣಿಸಿದರೆ ತಾಯಿ ಮರಣದಲ್ಲಿ ಏರಿಳಿತ ಕಂಡು ಬಂದಿದೆ. 2020-21 ಸಾಲಿನಲ್ಲಿ ಜಿಲ್ಲೆಯಲ್ಲಿ 22 ತಾಯಂದಿರು ಹೆರಿಗೆ ವೇಳೆ ಮೃತಪಟ್ಟಿದ್ದರೆ 2021-22 ಸಾಲಿನ ಜನವರಿ ವರೆಗಿನ 10 ತಿಂಗಳಲ್ಲಿ 15 ತಾಯಂದರ ಮರಣ ಸಂಭವಿಸಿದೆ.
ಜಾಗೃತಿ, ನಿಗಾ
ಗರ್ಭಾವಸ್ಥೆಯಲ್ಲಿ ತಾಯಿ ವಿಟಮಿನ್‌ಯುಕ್ತ ಆಹಾರ ಸೇವಿಸದೇ ಇರುವುದರಿಂದ ಮಗುವಿನಲ್ಲಿ ಅಪೌಷ್ಟಿಕತೆ ಕಂಡುಬಂದು ಹೆರಿಗೆ ವೇಳೆ ಶಿಶು ಮರಣ ಸಾಧ್ಯತೆ ಇದೆ. ಇದಕ್ಕೆ ಕಡಿವಾಣ ಹಾಕಲು ಅಂಗನವಾಡಿಗಳ ಮುಖಾಂತರ ಸರಕಾರವೇ ವಿಟಮಿನ್‌ಯುಕ್ತ ಆಹಾರ ಪದಾರ್ಥಗಳನ್ನು ವಿತರಿಸುತ್ತಿದೆ. ಸೊಪ್ಪು ತರಕಾರಿ, ಹಣ್ಣು, ಒಣ ಹಣ್ಣು, ಮೊಟ್ಟೆ, ಮೀನು, ಹಾಲು, ಮೊಸರು ಮುಂತಾದವುಗಳ ಸೇವನೆಯಿಂದ ತಾಯಿ ಮತ್ತು ಮಗುವಿನ ದೇಹಕ್ಕೆ ವಿಟಮಿನ್ ದೊರೆಯುತ್ತದೆ.
ಗರ್ಭಿಣಿಯರ ನೋಂದಣಿಯಾದ ತತ್‌ಕ್ಷಣದಿಂದಲೇ ಅವರ ಆರೋಗ್ಯದ ಬಗ್ಗೆ ನಿಗಾ ಇಡುವ ಕೆಲಸ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ನಡೆಯುತ್ತಿದೆ. ಪ್ರತೀ ತಿಂಗಳು ಆಸ್ಪತ್ರೆಗೆ ಕರೆತಂದು ತಪಾಸಣೆ ನಡೆಸಲಾಗುತ್ತದೆ. ಅಂಗನವಾಡಿ / ಆಶಾ ಕಾರ್ಯಕರ್ತೆಯರು ಆಗಾಗ ಮನೆ-ಮನೆ ಭೇಟಿ ನೀಡುತ್ತಾರೆ.
ಹೆರಿಗೆ ಸಂದರ್ಭ ತಾಯಿ / ಮಗುವಿನ ಸಾವನ್ನು ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹೆಚ್ಚಿನ ಕಾಳಜಿ ವಹಿಸುತ್ತಿದೆ. ಹೈ ರಿಸ್ಕ್ ಪ್ರಕರಣಗಳಿದ್ದಲ್ಲಿ, ಹಿಂದೆ ಗರ್ಭಪಾತ, ಸಿಜೇರಿಯನ್ ಆಗಿದ್ದರೆ ಅಥವಾ ಈ ಮೊದಲು ನಿರ್ಜೀವ ಶಿಶು ಜನನವಾಗಿದ್ದಲ್ಲಿ ಅಂತಹ ತಾಯಂದಿರ ಬಗ್ಗೆ ವಿಶೇಷ ನಿಗಾ ಇರಿಸುವ ಕೆಲಸವೂ ನಡೆಯುತ್ತಿದೆ.
– ಡಾ| ಕಿಶೋರ್ ಕುಮಾರ್,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
– ಕೇಶವ ಕುಂದರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.