ದ. ಕ.: ಸೂಕ್ಷ್ಮ ಪ್ರದೇಶ ಸಮೀಕ್ಷೆ; ಗೂಂಡಾ ನಿಗ್ರಹ ಪಡೆ ರಚನೆ
Team Udayavani, Mar 10, 2018, 6:45 AM IST
ಮಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದ. ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳ ಮತ್ತು ಪೊಲೀಸರ ಸಹಯೋಗದಲ್ಲಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳ ಸಮೀಕ್ಷೆಗೆ ಚಾಲನೆ ನೀಡಲಾಗಿದ್ದು, ಮತೀಯ ಸಂಘರ್ಷ ಮತ್ತು ಅಕ್ರಮ ಚಟುವಟಿಕೆಗಳನ್ನು ಮಟ್ಟಹಾಕಲು ಗೂಂಡಾ ನಿಗ್ರಹ ಪಡೆಯನ್ನು ಹುಟ್ಟು ಹಾಕಿ ಕಾರ್ಯಾಚರಣೆ ಆರಂಭಿಸಲಾಗಿದೆ.
ಬಂದೂಕು ಲೈಸನ್ಸ್ಗಳ ಪರಿಶೀಲನೆ ಈಗಾಗಲೇ ನಡೆಸಲಾಗಿದ್ದು, ಶೇ. 99ರಷ್ಟು ಪೂರ್ತಿಗೊಂಡಿದೆ. ಅಕ್ರಮ ಮದ್ಯ ತಯಾರಿ ಮತ್ತು ಮಾರಾಟದ ವಿರುದ್ಧ ದಾಳಿ ನಡೆಸಲಾಗುತ್ತಿದೆ. ರೌಡಿಗಳು, ಮದ್ಯ ಮಾರಾಟಗಾರರು ಮತ್ತು ಮತೀಯ ಗೂಂಡಾಗಳ ವಿರುದ್ಧ ಕಾರ್ಯಾಚರಣೆ ಆರಂಭವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಬಿ.ಆರ್. ರವಿಕಾಂತೇ ಗೌಡ ಮಾಹಿತಿ ನೀಡಿದ್ದಾರೆ.
ಮೂರು ತಿಂಗಳ ಹಿಂದೆ ಜಿಲ್ಲೆಯಲ್ಲಿ ಕೋಮು ಸಂಘರ್ಷದಿಂದ ಪರಿಸ್ಥಿತಿ ಹದಗೆಟ್ಟು, ಅಶಾಂತಿಯ ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಗೂಂಡಾ ನಿಗ್ರಹ ಪಡೆಯನ್ನು ರೂಪಿಸಲಾಗಿದೆ. ಜಿಲ್ಲೆಯಲ್ಲಿ ಮತೀಯ ಸಂಘರ್ಷವನ್ನು ಕೊನೆಗಾಣಿಸುವುದೇ ಇದರ ಉದ್ದೇಶ ಎಂದು ಎಸ್.ಪಿ. ಹೇಳಿದ್ದಾರೆ.
ಈ ಹಿಂದೆ ಮಂಗಳೂರು ನಗರ ಸಿಸಿಬಿ ಇನ್ಸ್ಪೆಕ್ಟರ್ ಆಗಿದ್ದ ಸುನಿಲ್ ನಾಯ್ಕ ಈಗ ಡಿಸಿಐಬಿಗೆ ವರ್ಗಾವಣೆಗೊಂಡಿದ್ದು, ಅವರು ಈ ನಿಗ್ರಹ ಪಡೆಯ ಇನ್ಸ್ಪೆಕ್ಟರ್ ಆಗಿ ನಿಯುಕ್ತಿಗೊಂಡಿದ್ದಾರೆ. ಇನ್ನುಳಿದಂತೆ ಮೂವರು ಪಿಎಸ್ಐಗಳು ಮತ್ತು ಎಂಟು ಮಂದಿ ಸಿಬಂದಿ ಈ ತಂಡದಲ್ಲಿದ್ದಾರೆ. ಇತ್ತೀಚೆಗೆ ತಂಡದ ಸದಸ್ಯರನ್ನು ನೇಮಿಸಲಾಗಿದ್ದು, ಅಗತ್ಯ ಬಿದ್ದರೆ ಇನ್ನಷ್ಟು ಸಿಬಂದಿಯನ್ನು ಸೇರಿಸಿಕೊಳ್ಳಲಾಗುವುದು ಎಂದು ಎಸ್ಪಿ ವಿವರಿಸಿದ್ದಾರೆ.
ಪಟ್ಟಿಯಲ್ಲಿ 412 ಗೂಂಡಾಗಳು
ಜಿಲ್ಲೆಯಲ್ಲಿ ಈ ಹಿಂದೆ ನಡೆದ ಎಲ್ಲ ಕೋಮುಗಲಭೆಗಳ ಆಧಾರದಲ್ಲಿ ಒಟ್ಟು 412 ಮಂದಿ ಮತೀಯ ಗೂಂಡಾಗಳ ಪಟ್ಟಿಯನ್ನು ತಯಾರಿಸಲಾಗಿದೆ. ಅವರಲ್ಲಿ ಕೆಲವರು ಈಗ ನಿಷ್ಕ್ರಿಯರಾಗಿದ್ದಾರೆ. ಆದರೆ 300ರಷ್ಟು ಮಂದಿ ಮತೀಯ ಗೂಂಡಾಗಳು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿದ್ದು, ಅವರ ಪ್ರತ್ಯೇಕ ಪಟ್ಟಿ ತಯಾರಿಸಲಾಗಿದೆ. ಈ ಪಟ್ಟಿಯಲ್ಲಿ ಪ್ರಕರಣಗಳಲ್ಲಿ ನೇರವಾಗಿ ಭಾಗಿಯಾಗದೆ ಪರೋಕ್ಷ ಬೆಂಬಲ ನೀಡುತ್ತಿರುವವರ ಹೆಸರನ್ನು ಕೂಡ ಪರಿಗಣಿಸಲಾಗಿದೆ. ಪಟ್ಟಿ ಮಾಡಲಾದ ಮತೀಯ ಗೂಂಡಾಗಳ ಚಲನವಲನಗಳ ಮೇಲೆ ನಿಗಾ ಇರಿಸಿ, ಅವರು ಪೊಲೀಸ್ ಠಾಣೆ ಮತ್ತು ನ್ಯಾಯಾಲಯಕ್ಕೆ ಸರಿಯಾಗಿ ಹಾಜರಾಗುತ್ತಾರೆಯೇ, ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದಾರೆಯೇ ಎಂಬಿತ್ಯಾದಿ ಮಾಹಿತಿ ಪಡೆದು ವರದಿ ತರಿಸಲಾಗುತ್ತಿದೆ. ಈ ವರದಿಯ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
ಬೀಟ್ ವ್ಯವಸ್ಥೆ ಚುರುಕು
ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಬೀಟ್ ಚುರುಕುಗೊಳಿಸಿ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಹಳ್ಳಿಹಳ್ಳಿಗೂ ಪೊಲೀಸ್ ಸಿಬಂದಿ ಭೇಟಿ ನೀಡಿ, ತಮ್ಮ ಹಾಜರಾತಿ ಖಾತರಿಪಡಿಸುವುದು, ಗ್ರಾಮೀಣ ಜನರ ಜತೆ ನಿರಂತರ ಸಂಪರ್ಕ ಇರಿಸಿಕೊಂಡು ಮಾಹಿತಿ ಕಲೆ ಹಾಕಿ, ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಪ್ರತಿಯೊಂದು ಘಟನೆಗಳ ಬಗ್ಗೆ ಮಾಹಿತಿ ಕಲೆ ಹಾಕಿ ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವರದಿ ನೀಡಬೇಕೆಂದು ಸೂಚಿಸಲಾಗಿದೆ ಎಂದು ಎಸ್ಪಿ ಡಾ| ರವಿಕಾಂತೇ ಗೌಡ ಅವರು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ
Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
MUST WATCH
ಹೊಸ ಸೇರ್ಪಡೆ
Kasaragod: ಯುವತಿ ನಾಪತ್ತೆ; ದೂರು ದಾಖಲು
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.