Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ
Team Udayavani, Apr 16, 2024, 12:58 AM IST
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡುವ ಪ್ರಕ್ರಿಯೆಗೆ ಸೋಮವಾರ ಚಾಲನೆ ದೊರಕಿದೆ.
ಎ. 17ರ ವರೆಗೆ ಅಂಚೆ ಮತಪತ್ರದ ಮೂಲಕ ಮತದಾನ ನಡೆಯಲಿದೆ.
ದ.ಕ.ದಲ್ಲಿ 85 ವರ್ಷ ಮೇಲ್ಪಟ್ಟ 6,053 ಮತದಾರರಿಗೆ ಹಾಗೂ ಶೇ. 40ಕ್ಕಿಂತ ಮೇಲ್ಪಟ್ಟು ಅಂಗವೈಕಲ್ಯ ಹೊಂದಿರುವ 1,957 ಮತದಾರರು ಸಹಿತ 8,010 ಮಂದಿಯ ಮನೆಮನೆ ಭೇಟಿ ಮಾಡಿ ಅಂಚೆ ಮತಪತ್ರದ ಮೂಲಕ ಮತದಾನ ಸೌಲಭ್ಯ ಒದಗಿಸಲಾಗಿದೆ.
ಈ ಪೈಕಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 975, ಬೆಳ್ತಂಗಡಿ 812, ಮಂಗಳೂರು 515, ಮಂಗಳೂರು ದಕ್ಷಿಣ 1401, ಮಂಗಳೂರು ಉತ್ತರ 976, ಪುತ್ತೂರು 1127, ಸುಳ್ಯ 1038, ಮೂಡುಬಿದಿರೆ 1166 ಮತದಾರರಿಗೆ ಮತಪತ್ರದ ಮೂಲಕ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.ಮೊದಲ ದಿನ ದ.ಕ. ಜಿಲ್ಲೆಯಲ್ಲಿ ಒಟ್ಟು 4,678 ಮಂದಿ ಮನೆಯಿಂದ ಮತದಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.