ಸಿಎಂ ಭೇಟಿ ಮಾಡಿದ ದ.ಕ ಶಾಸಕರ ನಿಯೋಗ; ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ
Team Udayavani, May 20, 2021, 12:29 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಚಿವ ಎಸ್.ಅಂಗಾರ ಅವರ ನೇತೃತ್ವದಲ್ಲಿ ಶಾಸಕರ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿ ಮನವಿ ಸಲ್ಲಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕ್ರಮ, ಹೆಚ್ಚುವರಿ ಆರೋಗ್ಯಮಿತ್ರ ಕಾರ್ಯನಿರ್ವಾಹಕರನ್ನು ನೇಮಕ, ಕೋವಿಡ್ ಆರ್ ಟಿ ಪಿಸಿಆರ್ ಪರೀಕ್ಷೆ ಮಾಡಲು ಕೆವಿಜಿ ಮೆಡಿಕಲ್ ಕಾಲೇಜಿಗೆ ಅನುಮತಿ, ದಕ್ಷಿಣ ಕನ್ನಡ ಜಿಲ್ಲೆಗೆ ಆಕ್ಸಿಜನ್ ಟ್ಯಾಂಕರ್, 50 ಮತ್ತು 1 ಲಕ್ಷ ಪ್ರಮಾಣದಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಸರಬರಾಜು ಮುಂತಾದ ಬೇಡಿಕೆಯನ್ನು ಈಡೇರಿಸಬೇಕೆಂದು ಮನವಿ ಸಲ್ಲಿಸಲಾಗಿದೆ.
ಮಾತ್ರವಲ್ಲದೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಚಂಡಮಾರುತದಿಂದ ಅಪಾರ ಹಾನಿ ಸಂಭವಿಸಿದ್ದು, ಪ್ರಕೃತಿ ವಿಕೋಪ ನಿಧಿಯಿಂದ ರೂ. 100.00 ಕೋಟಿಗಳನ್ನು ಮಂಜೂರು ಮಾಡುವಂತೆ ಹಾಗೂ ಗ್ರಾ.ಪಂ ಮತ್ತು ನಗರಾಡಳಿತ ಸಂಸ್ಥೆಯ ಸ್ಥಳೀಯಾಡಳಿತ ಪ್ರತಿನಿಧಿಗಳನ್ನು ಕೋವಿಡ್ ವಾರಿಯರ್ಸ್ ಎಂದು ಗುರುತಿಸುವಂತೆ ಮತ್ತು ಎಲ್ಲಾ ಸ್ಥಳೀಯಾಡಳಿತ ಜನಪ್ರತಿನಿಧಿಗಳಿಗೆ ಮೊದಲ ಹಂತದ ವ್ಯಾಕ್ಸಿನ್ ನೀಡುವಂತೆಯೂ ಮನವಿ ಸಲ್ಲಿಸಲಾಗಿದೆ.
ಇದನ್ನೂ ಓದಿ: ಪ್ಲೀಸ್…ಎರಡು ವರ್ಷದ ಮಗನನ್ನು ನನ್ನ ಜೊತೆ ಕರೆದೊಯ್ಯಲು ಅನುಮತಿ ಕೊಡಿ: ಸಾನಿಯಾ ಮಿರ್ಜಾ
ಈ ವೇಳೆ ಕೊರೋನಾ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಬಂದು ಸರ್ವರಿಗೆ ಸುಖ, ಆರೋಗ್ಯ,ಸಮೃದ್ಧಿ ಕರುಣಿಸಲೆಂದು ಶ್ರೀ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ನಡೆಸಲಾದ ಧನ್ವಂತರಿ ಹೋಮ,ಕ್ರಿಮಿಹಾರ ಸೂಕ್ತ ಹೋಮ, ಚಂಡಿಕಾ ಯಾಗ, ಶ್ರೀ ಸುಬ್ರಮಣ್ಯ ದೇವರ ಪ್ರಸಾದವನ್ನು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ರವರಿಗೆ ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಯವರು ನೀಡಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ಸಚಿವರಾದ ಅಂಗಾರ, ಪುತ್ತೂರು ಶಾಸಕರಾದ ಸಂಜೀವ ಮಟಂದೂರು ಮತ್ತು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.
ಇದನ್ನೂ ಓದಿ: ಸ್ಕೂಟರ್ ಗೆ ಢಿಕ್ಕಿ ಹೊಡೆದ ಕಾರು: ಫ್ಲೈ ಓವರ್ ನಿಂದ ಕೆಳಗೆ ಬಿದ್ದು ತಾಯಿ ಸಾವು,ಮಗಳು ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.