ದಕ್ಷಿಣ ಕನ್ನಡ: 2023ರ ಕರಡು ಮತದಾರರ ಪಟ್ಟಿ ಪ್ರಕಟ; ವಿಶೇಷ ನೋಂದಣಿ ಕಾರ್ಯ ಆರಂಭ

ದ.ಕ. ಜಿಲ್ಲೆ : 17,08,955 ಮತದಾರರು

Team Udayavani, Nov 12, 2022, 6:10 AM IST

ದಕ್ಷಿಣ ಕನ್ನಡ: 2023ರ ಕರಡು ಮತದಾರರ ಪಟ್ಟಿ ಪ್ರಕಟ; ವಿಶೇಷ ನೋಂದಣಿ ಕಾರ್ಯ ಆರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ 17,08,955 ಮತದಾರರಿದ್ದು, 8,71,364 ಮಹಿಳಾ ಮತ್ತು 8,37,527 ಪುರುಷ ಮತದಾರರಿದ್ದಾರೆ.

ಡಿ. 8ರ ವರೆಗೆ ಮತದಾರರ ಪಟ್ಟಿ ಪರಿಷ್ಕರಣೆಯ ಹಿನ್ನೆಲೆಯಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್‌ ಎಂ.ಆರ್‌. ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯ ಹಿನ್ನೆಲೆಯಲ್ಲಿ ವಿಶೇಷ ನೋಂದಣಿ ಅಭಿಯಾನ ನ. 12, ನ. 20, ಡಿ. 3 ಮತ್ತು ಡಿ. 4ರಂದು ನಡೆಯಲಿದೆ. 2023ರ ಜ. 3ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.

ದ.ಕ. ಜಿಲ್ಲಾ ವಿಧಾನಸಭಾ ಕ್ಷೇತ್ರ ಗಳ ಪೈಕಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರವು 2,39,534 ಮತದಾರರೊಂದಿಗೆ ಅತೀ ಹೆಚ್ಚು ಮತದಾರರನ್ನು ಹೊಂದಿದ್ದು, ಮಂಗಳೂರು (ಉಳ್ಳಾಲ) 1,92,315 ಮತದಾರರೊಂದಿಗೆ ಅತೀ ಕಡಿಮೆ ಮತದಾರನ್ನು ಹೊಂದಿರುವ ಕ್ಷೇತ್ರ ವಾಗಿದೆ. 2022ರ ಜ. 13ರಂದು ಪ್ರಕಟಗೊಂಡ ಅಂತಿಮ ಮತದಾರರ ಪಟ್ಟಿಯಂತೆ ದ.ಕ. ಜಿಲ್ಲೆಯಲ್ಲಿ ಒಟ್ಟು 17,53,328 ಮತದಾರರಿದ್ದರು. ಪರಿಷ್ಕರಣೆಯ ಸಂದರ್ಭ 73,782 ಮಂದಿಯ ಹೆಸರನ್ನು ತೆಗೆದು ಹಾಕ ಲಾಗಿದೆ. 29,410 ಹೊಸ ಮತದಾರರ ಸೇರ್ಪಡೆಯಾಗಿದೆ. ಹೀಗಾಗಿ ಈ ಹಿಂದಿನ ಅಂತಿಮ ಮತದಾರರ ಪಟ್ಟಿಗಿಂತ 44,373 ಮತದಾರರು ಕಡಿಮೆಯಾಗಿದ್ದಾರೆ.

ಈಗಾಗಲೇ ಪ್ರಕಟವಾಗಿರುವ ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಗೊಂಡಿರುವ, ತೆಗೆದು ಹಾಕಿರುವ ಹೆಸರು ಹಾಗೂ ಉಂಟಾಗಿ ರುವ ಇತರ ಬದಲಾವಣೆಗಳ ಬಗ್ಗೆ ಮತದಾರರು ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು. ಸಾರ್ವ ಜನಿಕರು ತಮ್ಮ ವ್ಯಾಪ್ತಿಯ ಮತ ದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದ ಣಾಧಿಕಾರಿ ಕಚೇರಿಗೆ ಭೇಟಿಗೆ ನೀಡಿ ಪರಿಶೀಲಿಸಬಹುದು. ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿ ಗಳಲ್ಲಿಯೂ ಪರಿಶೀಲಿಸ ಬಹುದು. ವೆಬ್‌ ಪೋರ್ಟಲ್‌ http://www.ceokarnataka.kar.nic.in, www.nvsp.in, www.dk.nic.in ಅಥವಾ ಜಿಲ್ಲಾ ಸಹಾಯವಾಣಿ ಸಂಖ್ಯೆ 1950ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಡಿಸಿ ತಿಳಿಸಿದರು.

ಬೂತ್‌ ಮಟ್ಟದ
ಏಜೆಂಟ್‌ ನೇಮಕಾತಿ
ಪ್ರತೀ ವಿಧಾನಸಭಾ ಕ್ಷೇತ್ರದ ಪ್ರತೀ ಮತಗಟ್ಟೆಗೆ ಒಬ್ಬರಂತೆ ಬೂತ್‌ ಲೆವೆಲ್‌ ಏಜೆಂಟ್‌ (ಬಿಎಲ್‌ಎ) ನೇಮಕಾತಿ ಮಾಡಿ ಮತಗಟ್ಟೆ ಅಧಿಕಾರಿಗಳಿಗೆ ಅರ್ಹ ಮತದಾರರ ನೋಂದಣಿ ಕಾರ್ಯದಲ್ಲಿ ಸಹಕಾರ ನೀಡಲು ಕೋರಲಾಗಿದೆ. ಎಲ್ಲ ಅರ್ಹ ಮತದಾರರನ್ನು ಪಟ್ಟಿಯಲ್ಲಿ ಸೇರಿಸಲು ಹಾಗೂ ದೋಷ ರಹಿತ ಮತದಾರರ ಪಟ್ಟಿಯನ್ನು ತಯಾರಿಸಲು ವಿಧಾನಸಭಾ ಕ್ಷೇತ್ರಗಳಲ್ಲಿ ಅಗತ್ಯ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್‌ ಮೋಹನ್‌ ಉಪಸ್ಥಿತರಿದ್ದರು.

ಸೇರ್ಪಡೆಗೆ ವರ್ಷಕ್ಕೆ ನಾಲ್ಕು ಹೆಚ್ಚು ಅವಕಾಶ
ಈ ಹಿಂದೆ ಮತದಾರರ ಪಟ್ಟಿ ಸೇರ್ಪಡೆಗೆ ಪರಿಷ್ಕರಣೆ ಸಂದರ್ಭ ಜ. 1ರೊಳಗೆ ಒಂದು ಬಾರಿ 18 ವರ್ಷ ಪೂರ್ಣಗೊಳಿಸಿದವರನ್ನು ನೋಂದಾಯಿಸಲು ಅವಕಾಶವಿತ್ತು. ಇದೀಗ 17 ವರ್ಷ ದಾಟಿದ ಯುವ ಮತದಾರರು ಒಂದು ವರ್ಷ ಮುಂಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೂರು ತಿಂಗಳಿಗೊಮ್ಮೆ ಅಂದರೆ ಜ. 1, ಎ. 1, ಜುಲೈ 1 ಹಾಗೂ ಅ. 1 ಅರ್ಹತಾ ದಿನಾಂಕವಾಗಿದ್ದು ಆ ದಿನಗಳಂದು 18 ವರ್ಷ ಪೂರ್ಣಗೊಳಿಸುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗುತ್ತದೆ. ಈ ಪ್ರಕಾರ 17 ವರ್ಷ ದಾಟಿದ ಅರ್ಜಿದಾರರು ನ. 9ರಿಂದ ನಮೂನೆ 6ರ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಒಂದು ಮತಗಟ್ಟೆ ಇಳಿಕೆ
ದ.ಕ. ಜಿಲ್ಲೆಯಲ್ಲಿ ಈ ಹಿಂದೆ ಒಟ್ಟು ಮತಗಟ್ಟೆಗಳ ಸಂಖ್ಯೆ 1,861 ಆಗಿತ್ತು. ಕರಡು ಮತದಾರರ ಪಟ್ಟಿಯ ಅನುಸಾರ ಜಿಲ್ಲೆಯಲ್ಲಿ ಒಟ್ಟು ಮತಗಟ್ಟೆಗಳ ಸಂಖ್ಯೆ 1,860ಕ್ಕೆ ಇಳಿಕೆಯಾಗಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿನ ಮತಗಟ್ಟೆ ಸಂಖ್ಯೆ 6ರಲ್ಲಿ 29 ಮತದಾರರಿದ್ದು, ಅದನ್ನು ಮತಗಟ್ಟೆ 5ರಲ್ಲಿ ವಿಲೀನಗೊಳಿಸಲಾಗಿದೆ. ಪ್ರಸ್ತುತ ಮತಗಟ್ಟೆ ಸಂಖ್ಯೆ 5ರಲ್ಲಿ ಒಟ್ಟು 456 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.