![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 20, 2022, 12:12 PM IST
ಮಂಗಳೂರು : ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅನಧಿಕೃತ, ದ್ವೇಷಾತ್ಮಕ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಫ್ಲೆಕ್ಸ್‌ಗಳನ್ನು ಹಾಕುವವರ ವಿರುದ್ಧ ಪೊಲೀಸರ ಸಹಕಾರದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾ.ಪಂ. ಮಟ್ಟದಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಡಿ.ಸಿ. ಡಾ| ರಾಜೇಂದ್ರ ಕೆ.ವಿ. ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿವಾದಾತ್ಮಕ ಅಥವಾ ದ್ವೇಷ ಸಾರುವ ಸಂದೇಶದ ಫ್ಲೆಕ್ಸ್‌ಗಳು ಕಂಡುಬಂದ ಕೂಡಲೇ ಅವುಗಳನ್ನು ಸಂಬಂಧಿಸಿದ ಸ್ಥಳದ ಅಧಿಕಾರಿಗಳು ತೆರವುಗೊಳಿಸಬೇಕು. ಇದಕ್ಕೆ ಪೊಲೀಸರ ಸಹಕಾರ ಪಡೆಯಬೇಕು. ಅಧಿಕೃತ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕುವ ಮುನ್ನ ಸಂಬಂಧಿಸಿದ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಅದನ್ನು ಮುದ್ರಿಸಿದವರ ವಿವರ ಅದರಲ್ಲಿರಬೇಕು. ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದರೆ ಕಠಿನ ಕ್ರಮ ಕೈಗೊಳ್ಳಲಾಗುವುದು, ಈ ನಿಟ್ಟಿನಲ್ಲಿ ಫ್ಲೆಕ್ಸ್ ಪ್ರಿಂಟರ್‌ಗಳ ಸಭೆ ಕರೆಯಲಾಗುವುದು ಎಂದರು.
ಹೈಕೋರ್ಟ್‌ನ ಆದೇಶ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳ ಅನ್ವಯ ಡಿಜೆ ಸೆಟ್ ಹಾಗೂ ಧ್ವನಿವರ್ಧಕಗಳನ್ನು ಬಳಸಬೇಕು. ಈ ಬಗ್ಗೆ ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ನಿಭಾಯಿಸಬೇಕಾದ ಕರ್ತವ್ಯಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು ಅವುಗಳನ್ನು ತಪ್ಪದೇ ಪಾಲಿಸಬೇಕು ಎಂದು ಸೂಚಿಸಿದರು.ಜಿ.ಪಂ. ಸಿಇಒ ಡಾ| ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಭಗವಾನ್ ಸೋನಾವಣೆ ಮತ್ತಿತರರು ಸಭೆಯಲ್ಲಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.