ದ.ಕ: 614 ಮಂದಿಯ ತಪಾಸಣೆ
Team Udayavani, Mar 13, 2020, 6:32 AM IST
ಮಂಗಳೂರು: ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಅಂ. ವಿಮಾನ ನಿಲ್ದಾಣ ಮತ್ತು ಎನ್‌ಎಂಪಿಟಿಯಲ್ಲಿ ತಪಾಸಣೆ ಮುಂದುವರಿದಿದ್ದು, ಗುರುವಾರ 614 ಮಂದಿಯನ್ನು ತಪಾಸಣೆಗೊಳ ಪಡಿಸಲಾಗಿದೆ.
ತಪಾಸಣೆ ವೇಳೆ ಜ್ವರ, ಶೀತ, ಕೆಮ್ಮು, ತಲೆನೋವಿನಂತಹ ಲಕ್ಷಣ ಕಂಡು ಬಂದವರನ್ನು 14 ದಿನಗಳ ನಿಗಾದಲ್ಲಿರಿಸಲಾಗುತ್ತದೆ. ಈಗಾಗಲೇ 50 ಮಂದಿಯನ್ನು ವೈದ್ಯಕೀಯ ನಿಗಾದಲ್ಲಿರಿಸಿದ್ದು, ಈ ಪೈಕಿ 11 ಮಂದಿಯಲ್ಲಿ ಯಾವುದೇ ಸೋಂಕು ಕಂಡು ಬಂದಿಲ್ಲ. 5 ಮಂದಿಯ ಗಂಟಲು ದ್ರವ ತಪಾಸಣೆಗೆ ಕಳುಹಿಸಲಾಗಿದೆ. ಮೂರು ವರದಿ ಸ್ವೀಕೃತವಾಗಿದ್ದು ಕೋವಿಡ್-19 ಸೋಂಕು ಪತ್ತೆಯಾಗಿಲ್ಲ. ಉಳಿದ ಎರಡು ವರದಿ ಇನ್ನಷ್ಟೇ ಬರಬೇಕಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ಖಾಸಗಿ ವೈದ್ಯರಿಗೆ ಸೂಚನೆ
ದ.ಕ. ಜಿಲ್ಲೆಯ ಎಲ್ಲ ಖಾಸಗಿ ವೈದ್ಯರು ತಮ್ಮ ಚಿಕಿತ್ಸಾಲಯಗಳಿಗೆ ಬರುವ ರೋಗಿಯ ಪ್ರಯಾಣದ ವಿವರಗಳನ್ನು ಪಡೆದು ಮತ್ತು ಸೋಂಕಿರುವ ಪ್ರದೇಶದಿಂದ ಬರುವ ರೋಗಿಯ ಆರೋಗ್ಯ ವಿವರಗಳನ್ನು ಕಡ್ಡಾಯವಾಗಿ ಜಿಲ್ಲಾ ಆರೋಗ್ಯ ಇಲಾಖೆಗೆ ವರದಿ ಮಾಡಲು ಸೂಚಿಸಲಾಗಿದೆ. ವಿದೇಶದಿಂದ ಆಗಮಿಸಿದ ವ್ಯಕ್ತಿಗಳನ್ನು ಗುರುತಿಸಿ ಆರೋಗ್ಯ ತಪಾಸಣೆ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಂತದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ. ಲಕ್ಷದ್ವೀಪದಿಂದ ಹಡಗಿನಲ್ಲಿ ಮಂಗಳೂರಿಗೆ ಬರುವ ಸ್ಥಳೀಯ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ
ಯಾವುದೇ ರೀತಿಯ ಜ್ವರ, ಶೀತ, ಕೆಮ್ಮು ಇರುವ ವ್ಯಕ್ತಿಗಳನ್ನು ಸಂಪೂರ್ಣ ಗುಣಮುಖ ರಾಗು ವವರೆಗೆ ಜನಸಂದಣಿ ಇರುವ ಜಾಗಗಳಿಗೆ ಹೋಗದಿರುವಂತೆ ಡಿಸಿ ಮನವಿ ಮಾಡಿದ್ದಾರೆ. ಬಯೋಮೆಟ್ರಿಕ್ ನಿಲುಗಡೆ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇನ್ಫೋಸಿಸ್ ಸಹಿತ ವಿವಿಧ ಕಂಪೆನಿಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಯೋ ಮೆಟ್ರಿಕ್ ಬದಲಾಗಿ ದೈನಂದಿನ ಹಾಜರಾತಿಯನ್ನು ಪುಸ್ತಕದಲ್ಲಿ ಬರೆಯುವ ಕೆಲಸ ಕೆಲವು ಸಂಸ್ಥೆಗಳಲ್ಲಿ ನಡೆಯುತ್ತಿದೆ.
ಜಾಗೃತಿ ಫಲಕ
ಮಂಗಳೂರಿನ ಕೆಲವು ದಿನಸಿ ಅಂಗಡಿಗಳಲ್ಲಿ ಕೊರೊನಾ ಹರಡದಂತೆ ಮುಂಜಾಗ್ರತೆ ವಹಿಸುವ ಜಾಗೃತಿ ಫಲಕ ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.