ಕಠಿನ ಕ್ರಮ ಕೈಗೊಳ್ಳಲು ಆದೇಶ
Team Udayavani, Jan 10, 2018, 10:59 AM IST
ನಾಟೆಕಲ್ : ಇಲ್ಲಿನ ಮಸೀದಿ ಮತ್ತು ಅಂಗಡಿಗೆ ಹಾನಿ ಮಾಡಿದ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಕೃತ್ಯ ಎಸಗಿದ್ದಾರೋ ಅಥವಾ ಇದರ ಹಿಂದೆ ಯಾರದಾದರೂ ಕೈವಾಡ ಇದೆಯಾ ಎನ್ನುವ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದು, ಜನರು ಯಾವುದೇ ವದಂತಿಗಳಿಗೆ ಕಿವಿಕೊಡದೆ ಸಂಯಮದಿಂದ ವರ್ತಿಸಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ತಿಳಿಸಿದರು.
ಅವರು ನಾಟೆಕಲ್‌ನಲ್ಲಿ ಹಾನಿಗೀಡಾದ ಮಸೀದಿ ಮತ್ತು ಅಂಗಡಿಗಳಿಗೆ ಭೇಟಿ ನೀಡಿದ ಬಳಿಕ ಮಾತನಾಡಿ, ಈ ವ್ಯಾಪ್ತಿಯಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಕೃತ್ಯಗಳು ನಡೆಯುತ್ತಿವೆ. ಊರಿನವರು ಅಹಿತಕರ ಘಟನೆಗೆ ಆಸ್ಪದ ನೀಡದೆ ಆರೋಪಿಗಳ ಪತ್ತೆಗೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿರುವುದು ಶ್ಲಾಘನೀಯವಾಗಿದ್ದು, ಈಗಾಗಲೇ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಇಂತಹ ಘಟನೆಗಳಿಗೆ ಕಾರಣವಾದವ ಮೇಲೆ ಕಠಿನ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮಸೀದಿಯ ಮುಖ್ಯಸ್ಥರು, ನಾಟೆಕಲ್‌ನ ವರ್ತಕರು, ಉಳ್ಳಾಲ ಇನ್ಸ್‌ಪೆಕ್ಟರ್ ಗೋಪಿಕೃಷ್ಣ, ಕೊಣಾಜೆ ಇನ್ಸ್‌ಪೆಕ್ಟರ್ ಅಶೋಕ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ
Mangaluru ಕಂಬಳಕ್ಕೆ ನೆರವು: ಇಂದು ಸಿಎಂಗೆ ಅಹವಾಲು
ವಿಶಿಷ್ಟ ವಿಚಾರ ಚಿಂತನ ಮಂಥನ: ಮಂಗಳೂರು ಲಿಟ್‌ಫೆಸ್ಟ್ ಇಂದಿನಿಂದ
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 153: ವೈಯಕ್ತಿಕ ಅಭಿಪ್ರಾಯ ಬೇರೆ, ಕರ್ತವ್ಯ ಬೇರೆ
BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
Chandan Shetty: ಕಾಟನ್ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.