ನೆಪಮಾತ್ರಕ್ಕಿದೆ ಚರಂಡಿ, ರಾ. ಹೆದ್ದಾರಿಯಲ್ಲಿ ಹರಿಯುತ್ತಿದೆ ನೀರು!

Team Udayavani, May 21, 2018, 11:49 AM IST

21-may-11.jpg

ಬೆಳ್ತಂಗಡಿ : ತಾಲೂಕಿನಾದ್ಯಂತ ಇತ್ತೀಚೆಗೆ ಉತ್ತಮ ಮಳೆಯಾಗುತ್ತಿದೆ. ಹತ್ತು ದಿನದೊಳಗಾಗಿ ಮುಂಗಾರು ಪ್ರವೇಶಿಸುವ ಮುನ್ಸೂಚನೆಯೂ ಸಿಕ್ಕಿದೆ. ಆದರೆ ರಾಷ್ಟ್ರೀಯ ಹೆದ್ದಾರಿಯಲ್ಲೇ ನೀರು ಹರಿಯುತ್ತಿದ್ದರೂ ಸಮರ್ಪಕ ವ್ಯವಸ್ಥೆಗೆ ಇನ್ನೂ ಮುಂದಾಗಿಲ್ಲ.

ಬಂಟ್ವಾಳ-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ತಾಲೂಕಿನಲ್ಲಿ ಹಾದು ಹೋಗುತ್ತಿದೆ. ಆದರೆ ಈ ರಸ್ತೆಗೆ ಸಮರ್ಪಕ ರಸ್ತೆ ಚರಂಡಿ ವ್ಯವಸ್ಥೆ ಇಲ್ಲವಾಗಿದ್ದು, ರಸ್ತೆ ಪಕ್ಕವೇ ನೀರು ಹರಿದು ಹೋಗುತ್ತಿದೆ. ನೆಪ ಮಾತ್ರಕ್ಕೆ ಚರಂಡಿ ಇದ್ದರೂ ನೀರು ಮಾತ್ರ ರಸ್ತೆ ಸಮೀಪದಿಂದ ಹಾಗೂ ರಸ್ತೆಯ ಮೇಲೆ ಹರಿದು ವಾಹನ ಸವಾರರಿಗೆ ಕಂಟಕವಾಗಿ ಪರಿಣಮಿಸುತ್ತಿದೆ.

ಶನಿವಾರ ರಾತ್ರಿ ಉತ್ತಮ ಮಳೆ ಸುರಿದ್ದು, ಬೆಳಗ್ಗೆ ವೇಳೆಗೆ ಚರಂಡಿ ವ್ಯವಸ್ಥೆಯ ಆವ್ಯವಸ್ಥೆ ಬಯಲಾಗಿದೆ. ತಾಲೂಕಿನಾದ್ಯಂತ ಹೆಚ್ಚಿನ ಭಾಗಗಳಲ್ಲಿ ಮಳೆ ನೀರು ಚರಂಡಿಗಿಂತ ಹೆಚ್ಚಾಗಿ ರಸ್ತೆ ಸಮೀಪದಲ್ಲೇ ಹೋಗುವ ಮೂಲಕ ಸಮರ್ಪಕವಾಗಿಲ್ಲ ಎಂಬುದು ತಿಳಿಯುತ್ತದೆ. ಕೇವಲ ಉಜಿರೆಯಿಂದ ಬೆಳ್ತಂಗಡಿವರೆಗಿನ ರಸ್ತೆ ಗಮನಿಸಿದರೆ ಬಹುತೇಕ ಎಲ್ಲಾ ಕಡೆ ರಸ್ತೆ ಮೇಲೆ ಹಾಗೂ ರಸ್ತೆ ಬದಿ ನೀರು ಹರಿಯುವ ಪ್ರದೇಶಗಳು ಹೆಚ್ಚಾಗಿದೆ.

ರಸ್ತೆಗಳಿಗೆ ಹಾನಿ
ಶಿರಾಡಿ ಘಾಟ್‌ ಸಂಚಾರಕ್ಕೆ ನಿರ್ಬಂಧ ಹೇರಿರುವುದರಿಂದ ಹೆಚ್ಚಿನ ವಾಹನಗಳು ಚಾರ್ಮಾಡಿ ಮೂಲಕ ತೆರಳುತ್ತಿವೆ. ವಾಹನ ದಟ್ಟಣೆ ಹೆಚ್ಚಾಗಿದ್ದು, ಇದೀಗ ರಸ್ತೆಯ ಮೇಲೆ ನೀರು ಹರಿದು ಹಾಗೂ ವಾಹನಗಳ ಸಂಚಾರ ಹೆಚ್ಚಾಗಿರುವುದರಿಂದ ರಸ್ತೆಗೆ ಹಾನಿಯಾಗುವ ಸಂಭವ ಹೆಚ್ಚಾಗಿದೆ. ರಸ್ತೆಗಳ ಮೇಲೆ ಹೊಂಡ ಉಂಟಾದಲ್ಲಿ ವಾಹನ ಸವಾರರು ಇನ್ನಷ್ಟು ಕಷ್ಟಪಡಬೇಕಾದ ಸಂದರ್ಭ ಎದುರಾಗಲಿದೆ.

ಸವಾರರಿಗೆ ಅಪಾಯ
ರಸ್ತೆ ಅಂಚುಗಳು ಈಗಾಗಲೇ ಸವೆದಿದ್ದು, ಹಲವೆಡೆ ಅಪಾಯದ ಸ್ಥಿತಿಯಲ್ಲಿದೆ. ಮುಖ್ಯವಾಗಿ ಬೃಹತ್‌ ಎತ್ತರದ ಅಂಚುಗಳಿಂದ ದ್ವಿಚಕ್ರ ವಾಹನ ಸವಾರರು ಬಿದ್ದು ಏಟು ಮಾಡಿಕೊಳ್ಳುವ ಸಾಧ್ಯತೆಗಳೂ ಹೆಚ್ಚಾಗಿವೆ. ಮುಖ್ಯವಾಗಿ ವಾಹನ ದಟ್ಟಣೆ ಹೆಚ್ಚಾಗಿರುವುದರಿಂದ ದ್ವಿಚಕ್ರ ವಾಹನ ಸವಾರರು ರಸ್ತೆ ಅಂಚುಗಳಲ್ಲಿ ವಾಹನ ಹೆಚ್ಚು ಚಾಲನೆ ಮಾಡುವುದರಿಂದ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಹೊಂಡ ಅಥವಾ ಅಂಚು ತಪ್ಪಿಸಲು ವಾಹನಗಳನ್ನು ತಿರುಗಿಸಿದರೂ ಆಪಘಾತ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ.

ರಸ್ತೆ ಬದಿ ನೀರು
ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಬಹುತೇಕ ಕಡೆಗಳಲ್ಲಿ ನೀರು ರಸ್ತೆ ಬದಿ ನಿಂತಿರುತ್ತದೆ. ಮುಖ್ಯವಾಗಿ ಗುರುವಾಯನಕೆರೆ, ಸಂತೆಕಟ್ಟೆ, ಉಜಿರೆ, ಬೆಳ್ತಂಗಡಿ ಮೊದಲಾದ ಪ್ರದೇಶ ಗಳ ಇಕ್ಕೆಲಗಳಲ್ಲೂ ಇಂತಹ ಸಮಸ್ಯೆ ಸಾಮಾನ್ಯವಾಗಿದೆ. ಇವುಗಳಿಗೆ ಸಮರ್ಪಕ ಪರಿಹಾರ ಒದಗಿಸಬೇಕಿದೆ.

ನೀರು ಚರಂಡಿ ಸೇರಿದಲ್ಲಿ ಅನುಕೂಲ 
ಹೆದ್ದಾರಿಯ ಇಕ್ಕೆಲಗಳಲ್ಲಿ ಚರಂಡಿ ಇದ್ದರೂ ಸೂಕ್ತ ನಿರ್ವಹಣೆಯಿಲ್ಲದೆ ಸೊರಗುತ್ತಿರುವುದು ನೀರು ರಸ್ತೆಯ ಮೇಲೆ ಹರಿಯಲು ಕಾರಣವಾಗಿದೆ. ಕಾಶಿಬೆಟ್ಟು ಮೊದಲಾದೆಡೆ ಚರಂಡಿ ಪಕ್ಕದಲ್ಲೇ ಇದ್ದರೂ ನೀರು ಮಾತ್ರ ರಸ್ತೆ ಬದಿ ಹರಿಯುತ್ತಿದೆ. ಕೆಲವು ಪ್ರದೇಶಗಳಲ್ಲಿ ಖಾಸಗಿಯವರು ರಸ್ತೆಗಾಗಿ ಸಮರ್ಪಕ ಕೊಳವೆ ಆಥವಾ ಮೋರಿ ನಿರ್ಮಿಸದೆ ನೀರು ಹರಿಯುವ ದಿಕ್ಕು ಬದಲಾಗುತ್ತಿದೆ. ಚರಂಡಿಯನ್ನು ಸರಿಪಡಿಸಿ, ಸಮರ್ಪಕವಾಗಿ ನೀರು ಹರಿಯಲು ಸಣ್ಣ ಬದುಗಳ ವ್ಯವಸ್ಥೆ ಮಾಡಿದಲ್ಲಿ ರಸ್ತೆ ಮೇಲೆ ನೀರು ಹರಿಯುವುದನ್ನು ತಪ್ಪಿಸಬಹುದು.

ಆದಷ್ಟು ಬೇಗ ಕ್ರಮ
ಒಂದು ಮಳೆ ಬಿದ್ದ ಕೂಡಲೇ ಚರಂಡಿ ಸರಿಪಡಿಸುವ ಕಾಮಗಾರಿ ನಡೆಸಲಾಗುತ್ತದೆ. ಮಳೆ ಆರಂಭವಾಗಿರುವುದರಿಂದ ನೀರು ರಸ್ತೆ ಮೇಲೆ ಹರಿಯುತ್ತಿದೆ. ಒಂದು ತಂಡ ಚರಂಡಿ ವ್ಯವಸ್ಥೆ ಸರಿಪಡಿಸಲು ನಿಯೋಜನೆಯಾಗಿದ್ದು, ಆದಷ್ಟು ಬೇಗ ಚರಂಡಿ ವ್ಯವಸ್ಥೆ ಸಮರ್ಪಕವಾಗಿ ಮಾಡಲಾಗುವುದು.
-ಯಶವಂತ್‌
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ
ಸಹಾಯಕ ಕಾರ್ಯಪಾಲಕ
ಅಭಿಯಂತರ

ಟಾಪ್ ನ್ಯೂಸ್

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.