ಉಡುಪಿ-ಕುಂದಾಪುರಕ್ಕೆ ಮಂಗಳೂರಿನಿಂದ ದಸರಾ ದರ್ಶನ ಪ್ರವಾಸ
Team Udayavani, Oct 1, 2022, 4:34 PM IST
ಮಂಗಳೂರು: ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದಿಂದ ಉಡುಪಿ ಜಿಲ್ಲೆಯ ವಿವಿಧ ದೇವಸ್ಥಾನಗಳಿಗೆ “ದಸರಾ ದರ್ಶನ’ ಒಂದು ದಿನದ ಪ್ಯಾಕೇಜ್ ಪ್ರವಾಸವನ್ನು ಅ.1 ರಿಂದ 4ರ ವರೆಗೆ ಆಯೋಜಿಸುತ್ತಿದೆ.
ಈ ಪ್ಯಾಕೇಜ್ ಪ್ರವಾಸವು ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 8ಕ್ಕೆ ಹೊರಟು ಉಡುಪಿ-ಕುಂದಾಪುರ ಮಾರ್ಗವಾಗಿ ಮಾರಣಕಟ್ಟೆ ಶ್ರೀ ಮಹಾಲಿಂಗೇಶ್ವರ, ಕೊಲ್ಲೂರು ಶ್ರೀ ಮೂಕಾಂಬಿಕೆ, ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ಮತ್ತು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದೇವರ ದರ್ಶನ ಮುಗಿಸಿ ಸಂಜೆ 6.30ಕ್ಕೆ ಮಂಗಳೂರು ಬಸ್ ನಿಲ್ದಾಣಕ್ಕೆ ಬರಲಿದೆ.
ಬಸ್‌ಗೆ ಮುಂಗಡ ಕಾಯ್ದಿರಿಸಲು http://www.ksrtc.in ನಲ್ಲಿ ಆನ್‌ಲೈನ್ ಮುಂಗಡ ಬುಕ್ಕಿಂಗ್ ಸೌಲಭ್ಯ ಇದೆ. ಪ್ರತೀ ಪ್ರಯಾಣಿಕರಿಗೆ ವಯಸ್ಕರಿಗೆ 450 ರೂ. ಮತ್ತು ಮಕ್ಕಳಿಗೆ (6 ವರ್ಷದಿಂದ 12 ವರ್ಷದೊಳಗೆ) 400 ರೂ. ದರ ನಿಗದಿಪಡಿಸಲಾಗಿದೆ ಎಂದು ಕೆಎಸ್ಸಾರ್ಟಿಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.