ಡಿ. 12-21: ದತ್ತಮಾಲಾ ಅಭಿಯಾನ
Team Udayavani, Dec 11, 2018, 10:02 AM IST
ಮಂಗಳೂರು: ಹಿಂದೂಗಳ ಶ್ರದ್ಧಾ ಕೇಂದ್ರವಾದ ಚಿಕ್ಕಮಗಳೂರಿನ ದತ್ತಪೀಠದಲ್ಲಿ ದತ್ತಜಯಂತಿ ಅಂಗವಾಗಿ ದತ್ತ ಮಾಲಾ ಅಭಿಯಾನ ಡಿ. 12ರಿಂದ 21ರ ವರೆಗೆ ನಡೆಯಲಿದ್ದು, ಡಿ. 22ರಂದು ಮಾಲಾಧಾರಿಗಳು ದತ್ತ ಪೀಠಕ್ಕೆ ತೆರಳಿ ದತ್ತ ಪಾದುಕೆ ದರ್ಶನ ಅಭಿಯಾನ ಕೈಗೊಳ್ಳಲಿದ್ದಾರೆ.
ಈ ಅಭಿಯಾನದಲ್ಲಿ ರಾಜ್ಯದಿಂದ 50 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಜರರಂಗದಳ ದಕ್ಷಿಣ ಪ್ರಾಂತದ ಪ್ರಾಂತ ಸಂಯೋಜಕ್ ಸುನೀಲ್ ಕೆ.ಆರ್. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಡಿ. 20ರಂದು ದತ್ತಪೀಠದಲ್ಲಿ ಅನುಸೂಯ ದೇವಿ ಪೂಜೆ, ಗಣಪತಿ ಹೋಮ ಮತ್ತು ದುರ್ಗಾಹೋಮ, ಬೆಳಗ್ಗೆ 9.30ಕ್ಕೆ ಮಹಿಳೆಯರಿಂದ ಸಂಕೀರ್ತನಾಯಾತ್ರೆ ಮತ್ತು ದತ್ತಪೀಠ ದರ್ಶನ ನಡೆಯಲಿದೆ. ಡಿ. 21ರಂದು ಗಣಪತಿ ಹೋಮ, ರುದ್ರಹೋಮ ಹಾಗೂ ಚಿಕ್ಕಮಗಳೂರು ನಗರದಲ್ಲಿ ಶೋಭಾಯಾತ್ರೆ, ಸಾರ್ವಜನಿಕ ಸಭೆ, ಡಿ. 22ರಂದು ದತ್ತಜಯಂತಿಯಂದು ಗಣಪತಿ ಹೋಮ, ದತ್ತಹೋಮ ಹಾಗೂ ದತ್ತಪೀಠ, ದತ್ತಪಾದುಕೆ ದರ್ಶನ ನಡೆಯಲಿದೆ ಎಂದರು.
ಬಜರಂಗದಳ ದಕ್ಷಿಣ ಪ್ರಾಂತದ ಪ್ರಾಂತ ಸಹಸಂಯೋಜಕ ಮುರಳಿ ಹಸಂತ್ತಡ್ಕ ಮಾತನಾಡಿ, ದತ್ತಮಾಲಾ ಅಭಿಯಾನದಲ್ಲಿ ಮಂಗಳೂರು, ಉಡುಪಿ, ಪುತ್ತೂರು, ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳಿಂದ ಒಟ್ಟು 15 ಸಾವಿರ ದತ್ತಮಾಲಾಧಾರಿಗಳು ಪಾಲ್ಗೊಳ್ಳಲಿದ್ದಾರೆ. ಡಿ. 12ಕ್ಕೆ ನೂರಾರು ಕಾರ್ಯಕರ್ತರು ಮಾಲಾಧಾರಣೆ ಮಾಡುವ ಮೂಲಕ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮಂಗಳೂರಿನ ವಿಶ್ವಶ್ರೀ ಕಾರ್ಯಾಲಯ, ಉಡುಪಿ ಜಿಲ್ಲೆಯಲ್ಲಿ ಕೃಷ್ಣ ಮಠದಲ್ಲಿ, ಪುತ್ತೂರು ಮಹಾಲಿಂಗೇಶ್ವರ ಸನ್ನಿಧಾನ, ಕೊಡಗಿನ ಓಂಕಾರೇಶ್ವರ ಸನ್ನಿಧಾನ, ಕಾಸರಗೋಡಿನ ಹೊಸಂಗಡಿ ಕಾರ್ಯಾಲಯದಲ್ಲಿ ಬಜರಂಗದಳ ಕಾರ್ಯಕರ್ತರು ಮಾಲೆ ಧಾರಣೆ ಮಾಡಲಿದ್ದಾರೆ ಎಂದರು. ಬಜರಂಗದಳ ವಿಭಾಗ ಸಂಯೋಜಕ್ ಭುಜಂಗ ಕುಲಾಲ್, ಜಿಲ್ಲಾ ಸಂಯೋಜಕ್ ಪ್ರವೀಣ್ ಕುತ್ತಾರ್, ಜಿಲ್ಲಾ ಸಹಸಂಯೋಜಕ್ ಪುನೀತ್ ಅತ್ತಾವರ, ಮುಖಂಡ ಶ್ರೀಧರ್ ತೆಂಕಿಲ ಉಪಸ್ಥಿತರಿದ್ದರು.
ಆಗ್ರಹಗಳು
ದತ್ತಪೀಠಕ್ಕೆ ಒಬ್ಬ ಶಾಶ್ವತ ಹಿಂದೂ ಕಾರ್ಯನಿರ್ವಹಣಾಧಿಕಾರಿಯನ್ನು ನೇಮಿಸಬೇಕು, ದತ್ತಪೀಠದಲ್ಲಿ ಇಸ್ಲಾಂನ ಯಾವುದೇ ಚಟುವಟಿಕೆ ಗಳಿಗೆ ಅವಕಾಶ ನೀಡಬಾರದು, ಇಸ್ಲಾಂ ವಿಧಾನಗಳು ಮತ್ತು ಗೋರಿ ಗಳನ್ನು ನಾಗೇಹಳ್ಳಿಯಲ್ಲಿರುವ ಮೂಲ ಬಾಬಾಬುಡಾನ್ ದರ್ಗಾಕ್ಕೆ ವರ್ಗಾಯಿಸಬೇಕು, ಗುರು ದತ್ತಾತ್ರೇಯ ಪೀಠ ಮತ್ತು ಪರಿಸರವನ್ನು ಹಿಂದೂಗಳ ಪುಣ್ಯಕ್ಷೇತ್ರವೆಂದು ಘೋಷಿಸಬೇಕು, ದತ್ತಪೀಠದಲ್ಲಿದ್ದ ಅಮೂಲ್ಯ ವಿಗ್ರಹಗಳು, ಕಾಣೆಯಾಗಿರುವ ಕಾಣಿಕೆ ವಸ್ತುಗಳು ಮತ್ತು ಆಸ್ತಿಪಾಸ್ತಿ ಅಕ್ರಮ ಹಸ್ತಾಂತರ ಹಾಗೂ ಮಾರಾಟವಾಗಿದ್ದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಂಡು ಅವುಗಳನ್ನು ಮರುಸ್ಥಾಪಿಸಬೇಕು, ದತ್ತಪೀಠಕ್ಕೆ ಬರುವ ಹಿಂದೂ ಭಕ್ತರಿಗೆ, ಸ್ವಾಮೀಜಿಗಳಿಗೆ ಪೂಜೆಗೆ ಸೂಕ್ತ ಅವಕಾಶ ಕಲ್ಪಿಸಿಕೊಡಬೇಕು ಎಂದು ಸರಕಾರಕ್ಕೆ ಆಗ್ರಹದೊಂದಿಗೆ ದತ್ತಮಾಲಾ ಅಭಿಯಾನ ನಡೆಯಲಿದೆ ಎಂದು ಸುನೀಲ್ ಕೆ.ಆರ್. ಹೇಳಿದರು.
ಅರ್ಚಕರ ನೇಮಕ, ತ್ರಿಕಾಲ ಪೂಜೆ ನಡೆಯಲಿ
ಹಿಂದೂಗಳ ಶ್ರದ್ಧಾ ಕೇಂದ್ರವಾದ ದತ್ತಪೀಠದಲ್ಲಿ ಹಿಂದೂ ಅರ್ಚಕರನ್ನು ನೇಮಿಸುವಂತೆ ಕೋರ್ಟ್ ಸರಕಾರಕ್ಕೆ ಸೂಚಿಸಿತ್ತು. ಆದರೆ ಸರಕಾರ ಈವರೆಗೆ ಅರ್ಚಕರನ್ನು ನೇಮಿಸಿಲ್ಲ. ಶಾಖಾದ್ರಿಯವರೇ ತೀರ್ಥ, ಪ್ರಸಾದ ನೀಡುತ್ತಿದ್ದಾರೆ. ಇದು ಬದಲಾಗಬೇಕು. ಸರಕಾರ ಅರ್ಚಕರನ್ನು ನೇಮಿಸಿ ಪ್ರತಿದಿನ ತ್ರಿಕಾಲ ಪೂಜೆ ನಡೆಯುವಂತಾಗಬೇಕು ಎಂದು ಸುನೀಲ್ ಕೆ.ಆರ್. ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.