DC, AC, ತಹಶೀಲ್ದಾರ್ ಕೋರ್ಟ್ ಬಾಕಿ ಪ್ರಕರಣ ಇತ್ಯರ್ಥಕ್ಕೆ ದಿನ ನಿಗದಿ
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್ ನಿರ್ದೇಶನ
Team Udayavani, Aug 15, 2023, 6:10 AM IST
ಮಂಗಳೂರು: ಡಿಸಿ, ಎಸಿ ಹಾಗೂ ತಹಶೀಲ್ದಾರ್ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಇತ್ಯರ್ಥಕ್ಕೆ ವಾರದಲ್ಲಿ ದಿನವೊಂದನ್ನು ನಿಗದಿಪಡಿಸಿ ಕೊಳ್ಳಬೇಕು. ಅಂದು ಯಾವುದೇ ಕಾರಣಕ್ಕೂ ವಿಚಾರಣೆಯನ್ನು ಮುಂದೂಡಲೇ ಬಾರದು. ವಿಚಾರಣೆ ನಡೆಸಿ ಇತ್ಯರ್ಥಪಡಿಸುವ ಮೂಲಕ ಸಾರ್ವಜನಿಕರಿಗೆ ಆಡಳಿತ ಸ್ನೇಹಿ ಯಾಗಿ ಕಾರ್ಯನಿರ್ವಹಿಸಬೇಕು ಎಂದು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್ ಅಧಿಕಾರಿಗಳಿಗೆ ನಿರ್ದೇಶನ ವಿತ್ತಿದ್ದಾರೆ.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳ ಲಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಂಗಳೂರು ಸಹಾಯಕ ಆಯುಕ್ತರ ವ್ಯಾಪ್ತಿಯಲ್ಲಿ ಹೆಚ್ಚಿನ ನ್ಯಾಯಾಲಯ ಪ್ರಕರಣಗಳು ವಿಚಾರಣೆಗಾಗಿ ಬಾಕಿ ಉಳಿದಿವೆ, ಗಣಕೀಕರಣದ ಈ ಕಾಲ ದಲ್ಲೂ ಹೆಚ್ಚಿನ ಪ್ರಕರಣಗಳು ಬಾಕಿ ಉಳಿಸಿಕೊಳ್ಳಬಾರದು, ದಾಖಲಾಗುವ ಪ್ರಕರಣಗಳನ್ನು ಸ್ಥಳೀಯ ವಕೀಲರ ಸಂಘದ ಸಹಕಾರದೊಂದಿಗೆ ಆದಷ್ಟು ಬೇಗ ಇತ್ಯರ್ಥಪಡಿಸಿ, ನಿರಂತರವಾಗಿ ಅವುಗಳನ್ನು ಬಾಕಿ ಉಳಿಸಬೇಡಿ ಎಂದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.ಅವರು ಮಾತನಾಡಿ, ಕಳೆದ 7-8 ತಿಂಗಳಲ್ಲಿ ಪ್ರಕರಣಗಳ ವಿಚಾರಣೆ ಆಗದ ಕಾರಣ ಸಾಕಷ್ಟು ಬಾಕಿ ಉಳಿದಿವೆ ಎಂದರು.
ಪೇಪರ್‌ಲೆಸ್ ಕಡ್ಡಾಯ
ಜಿಲ್ಲಾ ಮಟ್ಟದ ಎಲ್ಲಾ ಕಚೇರಿಗಳು ಇನ್ನು ಮುಂದೆ ಕಡ್ಡಾಯವಾಗಿ ಇ-ಆಫೀಸ್ (ಪೇಪರ್ ಲೆಸ್) ನಲ್ಲಿಯೇ ಕಾರ್ಯ ನಿರ್ವ ಹಿಸುವಂತೆ ನಿರ್ದೇಶನ ನೀಡಿದ ಅವರು, ಯಾವ ಕಚೇರಿಯಲ್ಲಿ ಇ-ಆಫೀಸ್ ಅನುಷ್ಠಾನಕ್ಕೆ ತೊಡಕಾಗಿದೆ, ಯಾವ ಕಾರಣ ಕ್ಕಾಗಿ ಅದು ಆಗಿದೆ ಎಂದು ವಿಚಾರಿಸಿದರು.
ಸರಕಾರದ ಮಟ್ಟದಲ್ಲಿ ಎಲ್ಲಾ ಇಲಾಖೆ ಗಳು ಈಗ ಇ-ಕಚೇರಿಗಳ ಮೂಲಕವೇ ಕಾರ್ಯನಿರ್ವಹಿಸುತ್ತಿವೆ, ಆರ್ಥಿಕ ಇಲಾಖೆಯವರು ಇ-ಆಫೀಸ್ ಮೂಲಕ ಕಡತ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡುತ್ತಿ ದ್ದಾರೆ. ಸಾಮಾಜಿಕ ಭದ್ರತಾ ಯೋಜನೆಗಳಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಕ್ಯಾಂಪ್‌ಗ್ಳನ್ನು ಆಯೋಜಿಸಿ, ಅಲ್ಲಿ ಅರ್ಹರಿರುವ ಫಲಾನುಭವಿಗಳನ್ನು ಗುರುತಿಸಿ, ವಿವಿಧ ಯೋಜನೆಗಳಲ್ಲಿ ಪಿಂಚಣಿ ನೀಡಬೇಕು ಎಂದು ಹೇಳಿದರು.
ಆರೋಗ್ಯ ಇಲಾಖೆ ಜಿಲ್ಲೆಯಲ್ಲಿ ಮಲೇರಿಯಾ-ಡೆಂಗ್ಯೂ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚಿನ ಸ್ಪಚ್ಚತೆ ಕಾಪಾಡುವ ಮೂಲಕ ಈ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು, ಅದೇ ರೀತಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಬಂದರು, ಕುದ್ರೋಳಿ ಹಾಗೂ ಶಕ್ತಿನಗರದಲ್ಲಿ ಈ ಪ್ರಕರಣಗಳು ಹೆಚ್ಚು ಕಂಡುಬರುತ್ತಿದ್ದು, ಅಲ್ಲಿ ಮಹಾನಗರ ಪಾಲಿಕೆಯವರು ಸ್ವತ್ಛತೆಗೆ ಹೆಚ್ಚಿನ ಗಮನಹರಿಸಬೇಕು, ಬ್ಲಿಡ್ ಬ್ಯಾಂಕ್‌ಗಳಲ್ಲಿ ಅಗತ್ಯ ರಕ್ತ ಲಭಿಸುವಂತಿರಬೇಕು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಪ್ರಕರಣ ಕಡಿಮೆಯಾಗಿದೆ ಎಂದರು.
ಇತ್ತೀಚೆಗೆ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದಾಗ ಶಿಕ್ಷಣ ಸೂಚ್ಯಂಕ ದಲ್ಲಿ ಇಳಿಮುಖವಾದ ಬಗ್ಗೆ ಪ್ರಸ್ತಾವವಾಗಿತ್ತು, ಗುಣಮಟ್ಟದ ಶಿಕ್ಷಣ ಒದಗಿಸಲು ಶಿಕ್ಷಣ ಇಲಾಖೆಯಿಂದ ಉತ್ತಮ ಕ್ರಮಗಳನ್ನು ರೂಪಿಸಬೇಕು, ಕ್ಷೀರಭಾಗ್ಯ, ಮೊಟ್ಟೆ ವಿತರಣೆಯಲ್ಲಿ ಯಾವುದೇ ಲೋಪ ಕಂಡುಬರಬಾರದು, ಜಿಲ್ಲೆಯಲ್ಲಿನ ಶಿಥಿಲಗೊಂಡ ಶಾಲಾ ಕೊಠಡಿಗಳ ದುರಸ್ತಿಯಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಡಿಡಿಪಿಐಗೆ ತಾಕೀತು ಮಾಡಿದರು.
ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳನ್ನು ಗುರುತಿಸಿ, ಅವರನ್ನು ಒಂದೊಂದು ತಾಲೂಕುಗಳ ನೋಡಲ್ ಅಧಿಕಾರಿಗಳಾಗಿ ನೇಮಿಸಬೇಕು, ಅವರು ತಮ್ಮ ಇಲಾಖೆಯ ಕಾರ್ಯಚಟುವಟಿಕೆಯೊಂದಿಗೆ ಅವರಿಗೆ ವಹಿಸಲಾದ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಇಲಾಖೆಯ ಮೂಲಕ ನಡೆಯುವ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ, ಕಟ್ಟಡದ ಸ್ಥಿತಿಗತಿಗಳು, ಅಲ್ಲಿನ ಕುಂದುಕೊರತೆಗಳು, ಅಲ್ಲಿ ನೀಡುವ ಊಟ ಉಪಹಾರ ಸೇವಿಸುವುದು, ಅಲ್ಲಿಯ ಸ್ವತ್ಛತೆಯ ಬಗ್ಗೆ ವರದಿ ನೀಡವುದು ಹಾಗೂ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವರದಿ ನೀಡುವಂತಹ ಕೆಲಸ ಮಾಡಬೇಕು. ಪ್ರತಿ ಹಾಸ್ಟೆಲ್ ನಲ್ಲಿ ಮೆನ್ಯು ಇರಲೇಬೇಕು. ಅದೇ ರೀತಿ ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಹಾಗೂ ಆಹಾರ ಸುರಕ್ಷಿತವಾಗಿರುವ ಬಗ್ಗೆ ಖಾತ್ರಿ ಪಡಿಸಬೇಕು ಎಂದರು.
ಜಿ. ಪಂ. ಸಿಇಒ ಡಾ|ಆನಂದ್ ಕೆ., ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ, ಮಹಾನಗರ ಪಾಲಿಕೆ ಆಯುಕ್ತ ಆನಂದ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.