![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 3, 2021, 9:11 PM IST
ಮಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾಲಯದಿಂದ ನಡೆಯುತ್ತಿರುವ ಎಲ್ಲಾ ಪದವಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ಮಂಗಳೂರು ವಿಶ್ವವಿದ್ಯಾಲಯದ ರಿಜೆಸ್ಟಾರ್ ಅವರಿಗೆ ಪತ್ರದ ಮೂಲಕ ಸೂಚಿಸಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಅಂತರ್ ಜಿಲ್ಲೆಯಾದ ಕೇರಳದ ಕಾಸರಗೋಡಿನಿಂದ ಆಗಮಿಸುತ್ತಾರೆ. ನೆರೆಯ ರಾಜ್ಯ \ ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಹರಡುವ ಸಾಧ್ಯತೆಗಳಿರುವುದರಿಂದ. ಸಂಭಾವ್ಯ ಅಪಾಯವನ್ನು ತಪ್ಪಿಸಲು ಗಡಿಭಾಗದಗಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕೆಂದು ಸರ್ಕಾರದ ನಿರ್ದೇಶನ ನೀಡಿದೆ. ಈ ಹಿನ್ನೆಲೆ ಜುಲೈ 31 ರಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ‍್ಳಲಾಗಿದ್ದು, ಇದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ವಿದ್ಯಾಭ್ಯಾಸಕ್ಕಾಗಿ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಕೂಡ ತೊಂದರೆಯಾಗಿದೆ.
ಪ್ರಸ್ತುತ ಸನ್ನಿವೇಶವನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಹಾಗೂ ಯಾವುದೇ ವಿನಾಯಿತಿಯನ್ನು ನೀಡಲು ಅವಕಾಶವಿಲ್ಲದಿರುವುದಿಲ್ಲ. ಹೀಗಾಗಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಪದವಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಮುಂದಿನ ಆದೇಶದವರೆಗೆ ತರಗತಿ ಹಾಗೂ ಪರೀಕ್ಷೆಗಳನ್ನು ಮುಂದೂಡುವಂತೆ ಸೂಚಿಸಿರುವ ಜಿಲ್ಲಾಧಿಕಾರಿಗಳು ಈ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಕಚೇರಿಗೆ ವರದಿಯನ್ನು ನೀಡುವಂತೆ ತಿಳಿಸಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.