ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಿಸದಂತೆ ಡಿಸಿ ಸೂಚನೆ
Team Udayavani, Aug 27, 2021, 6:33 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 2.4ರಷ್ಟಿರುವ ಕಾರಣ ಸೆಪ್ಟಂಬರ್ 15ರ ವರೆಗೆ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್‌ಲೈನ್ ಮೂಲಕ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗೆ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿ ಗಳನ್ನು ಪ್ರಾರಂಭಿಸುವ ಕುರಿತು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಪಾಸಿಟಿವಿಟಿ ಸೂಚ್ಯಂಕ ಸೆ. 15ರೊಳಗೆ ಕಡಿಮೆಯಾದಲ್ಲಿ ಮತ್ತೂಮ್ಮೆ ಕಾಲೇಜು ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಭೌತಿಕ ತರಗತಿ ಪ್ರಾರಂಭಿಸಲು ಚರ್ಚಿಸಿ ಕ್ರಮಗಳನ್ನು ಕೈಗೊಳ್ಳಲಾಗುವುದು. ವಿಜ್ಞಾನ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳನ್ನು ಬ್ಯಾಚ್ ಪ್ರಕಾರ ಕೋವಿಡ್ ಮಾರ್ಗಸೂಚಿಗಳ ಅನುಸಾರವೇ ನಡೆಸಬೇಕು, ವಿಜ್ಞಾನ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ವಿಭಾಗಗಳ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕವೇ ತರಗತಿಗಳನ್ನು ನಡೆಸಬೇಕು ಎಂದು ಸೂಚನೆ ನೀಡಿದರು.
ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬಂದಿ ಕಡ್ಡಾಯವಾಗಿ ಕೋವಿಡ್ ನಿರೋಧಕ ಲಸಿಕೆ ಪಡೆದಿರಬೇಕು. ಪಡೆಯದ ಸಿಬಂದಿಯ ಮಾಹಿತಿಯನ್ನು ಕಾಲೇಜು ಶಿಕ್ಷಣಾಧಿಕಾರಿಗಳು ನೀಡಬೇಕು ಎಂದು ಸೂಚಿಸಿದ ಅವರು, ನೆಟ್‌ವರ್ಕ್ ಸಮಸ್ಯೆಯಿಂದ ಗ್ರಾಮೀಣ ಕೆಲವು ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳಿಗೆ ಹಾಜರಾಗುವುದು ಸಮಸ್ಯೆಯಾಗಿದೆ. ಜಿಲ್ಲಾಡಳಿತದಿಂದ ಪರ್ಯಾಯ ಮಾರ್ಗ ಹುಡುಕಿ ಅಂತಹವರಿಗೆ ತರಗತಿಗಳಿಗೆ ಹಾಜರಾಗುವ ವ್ಯವಸ್ಥೆ ಮಾಡಲಾಗುವುದು ಎಂದರು.
ಎಡಿಸಿ ಡಾ| ಪ್ರಜ್ಞಾ ಅಮ್ಮೆಂಬಳ, ಮಂಗಳೂರು ವಿ.ವಿ. ಕುಲಸಚಿವ ಕಿಶೋರ್ ಕೆ., ಕಾಲೇಜು ಶಿಕ್ಷಣ ವಿಶೇಷ ಅಧಿಕಾರಿ ಜಯಕರ ಭಂಡಾರಿ, ನಿಟ್ಟೆ ವಿ.ವಿ. ನೋಡಲ್ ಅಧಿಕಾರಿ ಡಾ| ದಾನೇಶ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.