ಡಿಸಿ ಮನ್ನಾ ಭೂಮಿ ನೀಡಲು ಆಗ್ರಹ ಅರೆಬೆತ್ತಲೆ ಪ್ರತಿಭಟನೆ ಎಚ್ಚರಿಕೆ
Team Udayavani, Aug 8, 2017, 8:30 AM IST
ಪುತ್ತೂರು: ಪರಿಶಿಷ್ಟ ಜಾತಿ, ಪಂಗಡದ ಜನರಿಗಾಗಿ ಮೀಸಲಿಟ್ಟ ಡಿಸಿ ಮನ್ನಾ ಭೂಮಿಯನ್ನು ನೀಡುವವರೆಗೆ ಪ್ರತಿಭಟನೆ ಹಿಂದೆಗೆದುಕೊಳ್ಳುವುದಿಲ್ಲ. ಇದಕ್ಕೆ ಬಗ್ಗದೇ ಇದ್ದರೆ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಗುವುದು ಎಂದು ಅಂಬೇಡ್ಕರ್ ತಣ್ತೀರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ ಎಚ್ಚರಿಕೆ ನೀಡಿದರು. ಡಿಸಿ ಮನ್ನಾ ಭೂಮಿ ನೀಡುವಂತೆ ಆಗ್ರಹಿಸಿ
ಪುತ್ತೂರು ಮಿನಿ ವಿಧಾನಸೌಧ ಮುಂಭಾಗ ಸೋಮವಾರ ಆರಂಭಿಸಿದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದುವರೆಗೆ ಹಲವು ಬಾರಿ ಆಶ್ವಾಸನೆ ನೀಡಲಾಗಿದೆ. ಈ ಬಾರಿ ಶಾಸಕರು ಬಂದು ಲಿಖೀತ ಹೇಳಿಕೆ ನೀಡುವವರೆಗೆ ಪ್ರತಿಭಟನೆ ಹಿಂದೆಗೆದುಕೊಳ್ಳುವುದಿಲ್ಲ. ಸತ್ತರೂ ಸ್ಥಳದಿಂದ ಕದಲುವುದಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದ ದಲಿತ ಮುಖಂಡರು ನಮ್ಮ ಜತೆ ಸೇರಿಕೊಳ್ಳಲಿದ್ದಾರೆ ಎಂದರು.
ಜೆಡಿಎಸ್ ಬೆಂಬಲ
ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಜೆಡಿಎಸ್ ಮುಖಂಡ ಐ.ಸಿ. ಕೈಲಾಸ್, ಜಿಲ್ಲೆಯಲ್ಲಿ 2,400 ಎಕರೆ ಡಿಸಿ ಮನ್ನಾ ಭೂಮಿ ಇದೆ. ಇದನ್ನು ನೈಜ ಫಲಾನುಭವಿಗಳಿಗೇ ನೀಡಬೇಕು. ಹಾಗೆಂದು ಬಡವರು ಮನೆ ಕಟ್ಟಿ ಕುಳಿತಿದ್ದರೆ ಅವರನ್ನು ಬಿಟ್ಟು ಹೋಗಿ ಎಂದು ಹೇಳುವಂತಿಲ್ಲ. ಅವರ ಮನೆ ಜಾಗವನ್ನು ಬಿಟ್ಟು, ಉಳಿದ ಜಾಗವನ್ನು ದಲಿತರಿಗೆ ನೀಡಲೇಬೇಕು ಎಂದು ಆಗ್ರಹಿಸಿದರು.
ದಲಿತ ದಮನಿತ ಸ್ವಾಭಿಮಾನಿ ಹೋರಾಟ ಸಮಿತಿ ಉಪಾಧ್ಯಕ್ಷ ರಘುವೀರ್ ಪ್ರತಿಭಟನೆಯನ್ನು ಉದ್ಘಾಟಿಸಿದರು. ಮುಖಂಡರಾದ ಶೇಖರ್ ಲಾೖಲ, ಸೇಸಪ್ಪ ನೆಕ್ಕಿಲು ಮೊದಲಾದವರು ಮಾತನಾಡಿದರು.
ಅಹೋರಾತ್ರಿ ಪ್ರತಿಭಟನೆ
ಸೋಮವಾರ ಬೆಳಗ್ಗೆ ಆರಂಭವಾದ ಪ್ರತಿಭಟನೆ ರಾತ್ರಿಯೂ ಮುಂದುವರಿದಿದೆ. ಸಂಜೆ ಹೊತ್ತಿಗೆ ಮಹಿಳೆಯರನ್ನು ಕಳುಹಿಸಿ, ಪುರುಷರು ಮಾತ್ರ ಪ್ರತಿಭಟನೆಯಲ್ಲಿ ಕುಳಿತುಕೊಂಡರು. ಶಾಸಕಿ ಶಕುಂತಳಾ ಶೆಟ್ಟಿ ಬೆಂಗಳೂರಿಗೆ ತೆರಳಿರುವ ಹಿನ್ನೆಲೆಯಲ್ಲಿ, ಪ್ರತಿಭಟನ ಸ್ಥಳಕ್ಕೆ ಆಗಮಿಸಲು ಸಾಧ್ಯವಾಗಿಲ್ಲ. ಶಾಸಕಿ ಸ್ಥಳಕ್ಕೆ ಆಗಮಿಸುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪ್ರತಿಭಟನಕಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.