“ಮಕ್ಕಳ ಮನಃಸ್ಥಿತಿಯನ್ನರಿತು ವ್ಯವಹರಿಸಿ’
ಉಜಿರೆ: ದರ್ಪಣ -ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ
Team Udayavani, Apr 24, 2019, 5:25 AM IST
ಬೆಳ್ತಂಗಡಿ: ಶಿಕ್ಷಕ ವೃತ್ತಿ ಪವಿತ್ರವಾದುದು ಮತ್ತು ಶ್ರೇಷ್ಠವಾದುದು. ಶಿಕ್ಷಕರು ಕೇವಲ ಮಕ್ಕಳ ಕಲಿಕಾ ಸಾಧನೆ ಯನ್ನು ಮಾತ್ರ ಗುರುತಿಸದೆ ಮಕ್ಕಳ ಸೃಜನಶೀಲತೆಯನ್ನು ಗುರುತಿಸುವುದರೂಂದಿಗೆ ಮಕ್ಕಳ ಮನಃಸ್ಥಿತಿಯನ್ನರಿತು ವ್ಯವ ಹರಿಸಬೇಕು ಎಂದು ಗೋಳಿತೊಟ್ಟು ಸ.ಹಿ.ಪ್ರಾ. ಶಾಲೆಯ ಪದವೀಧರ ಸಹಶಿಕ್ಷಕ ಮಹಮ್ಮದ್ ಲತೀಫ್ ಅಭಿಪ್ರಾಯಪಟ್ಟರು.
ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ದರ್ಪಣದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಅತಿಥಿ, ಕಾಲೇಜಿನ ಹಿರಿಯ ವಿದ್ಯಾರ್ಥಿ ವರ್ಣನ್ ಮೆಂಡೋನ್ಸ ಮಾತನಾಡಿ, ಶಿಕ್ಷಕರು ಕೇವಲ ಹಣ ಗಳಿಕೆಗಾಗಿ ತಮ್ಮ ವೃತ್ತಿಯನ್ನು ಮಾಡದೆ ವೃತ್ತಿಗೌರವಕ್ಕೆ ಪೂರಕವಾಗಿ ವ್ಯವಹರಿಸಿ ಮಕ್ಕಳನ್ನು ಸಮಾಜದ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ| ನಿತ್ಯಾನಂದ ಕೆ. ಅವರು, ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ನಿಜಕ್ಕೂ ಆನಂದದ ಅನುಭವಗಳನ್ನು ಮೆಲುಕು ಹಾಕುವಂತೆ ಮಾಡಿದೆ. ಈಗಿನ ಹೊಸ ವಿದ್ಯಾರ್ಥಿಗಳಿಗೆ ಕಲಿಯಲು ಹೊಸ ಹುಮ್ಮಸ್ಸು, ಪ್ರೋತ್ಸಾಹವನ್ನು ನೀಡುತ್ತದೆ. ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾಲೇಜಿನಲ್ಲಿ ಉಪಯುಕ್ತವಾದ ಕಾರ್ಯಕ್ರಮ ಹಮ್ಮಿಕೊಳ್ಳುವಂತಾಗಲಿ ಎಂದು ಹಾರೈಸಿದರು.
ಹಿರಿಯ ವಿದ್ಯಾರ್ಥಿ ಸಂಘದ ಸಂಯೋ ಜಕ ಸಂತೋಷ್ ಸಾಲ್ದಾನಾ ಸಂಘದ ಗುರಿ ಉದ್ದೇಶಗಳನ್ನು ಹಾಗೂ ಅದು ಬೆಳೆದು ಬಂದ ಬಗೆಯನ್ನು ವಿವರಿಸಿದರು. ಸಂಘದ ಅಧ್ಯಕ್ಷ ಅನಿಲ್ ಪಿರೇರಾ ಉಪಸ್ಥಿತರಿದ್ದರು. ಕಾರ್ಯದರ್ಶಿ ವಿದ್ಯಾಶ್ರೀ ಸ್ವಾಗತಿಸಿ, ಹಿರಿಯ ವಿದ್ಯಾರ್ಥಿ ಶ್ರೀಜಾ ವಂದಿಸಿ, ಸಹನಾ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.