ಕಡಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗಳ ಸಾವು
Team Udayavani, Jun 12, 2019, 9:29 AM IST
ಪುಂಜಾಲಕಟ್ಟೆ: ಗಾಳಿ-ಮಳೆಯಿಂದಾಗಿ ತೋಟದಲ್ಲಿ ಕಡಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದ ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಿಲಿಮೊಗರು ಗ್ರಾಮದ ಬಾರೆಕ್ಕಿನಡಿಯಲ್ಲಿ ಮಂಗಳವಾರ ಸಂಭವಿಸಿದೆ.
ಬಾರೆಕ್ಕಿನಡಿಯ ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಶೆಟ್ಟಿ (65) ಮತ್ತು ಪುತ್ರಿ ದಿವ್ಯಶ್ರೀ (29) ಮೃತಪಟ್ಟವರು.
ಮಂಗಳವಾರ ಸಂಜೆ 4 ಗಂಟೆ ವೇಳೆಗೆ ಗೋಪಾಲಕೃಷ್ಣ ಅವರು ಮಗಳೊಂದಿಗೆ ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದು, ಆ ಸಂದರ್ಭ ಕಡಿದು ಬಿದ್ದಿದ್ದ ಹಳೆಯ ವಿದ್ಯುತ್ ತಂತಿಯನ್ನು ಆಕಸ್ಮಿಕ ತುಳಿದ ಪರಿಣಾಮ ವಿದ್ಯುತ್ ಪ್ರವಹಿಸಿ ಇಬ್ಬರೂ ಮೃತಪಟ್ಟರು. ಸಂಜೆ ಬೀಸಿದ ಗಾಳಿಗೆ ಅಡಿಕೆ ಮರದ ಸೋಗೆ ವಿದ್ಯುತ್ ತಂತಿ ಮೇಲೆ ಬಿದ್ದು, ಅದು ಕಡಿದುಬಿದ್ದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಗೋಪಾಲಕೃಷ್ಣ ಶೆಟ್ಟಿ ಅವರು ಪತ್ನಿ ಗಿರಿಜಾ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮೆಸ್ಕಾಂ ವಿರುದ್ಧ ಆಕ್ರೋಶ
ಘಟನ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಸ್ಥಳೀಯರು ಜಮಾಯಿಸಿದ್ದು, ಮೆಸ್ಕಾಂ ನಿರ್ಲಕ್ಷ Âದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೆಸ್ಕಾಂನ ಹಿರಿಯ ಅ ಧಿಕಾರಿಗಳು ಪೊಲೀಸರೊಂದಿಗೆ ಸ್ಥಳಕ್ಕೆ ಆಗಮಿಸಿದರು. ಹಳೆಯದಾದ ತಂತಿಗಳನ್ನು ಬದಲಿಸದೆ ಇರುವುದು ಈ ಘಟನೆಗೆ ಕಾರಣವೆಂದು ನಾಗರಿಕರು ಆರೋಪಿಸಿದರು.
ಗೋಪಾಲಕೃಷ್ಣ ಅವರು ಚೆನ್ನೈತ್ತೋಡಿ ಗ್ರಾ.ಪಂ. ಮಾಜಿ ಸದಸ್ಯರು. ದಿವ್ಯಶ್ರೀ ಅಂಗವೈಕಲ್ಯ ಹೊಂದಿದ್ದು, ಅವಿವಾಹಿತೆಯಾಗಿದ್ದರು. ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್., ಉಪತಹಶೀಲ್ದಾರ್ ರಾಜೇಶ್ ನಾಯ್ಕ, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ವೃತ್ತ ನಿರೀಕ್ಷಕ ಶರಣ ಗೌಡ, ಗ್ರಾಮಾಂತರ ಎಸ್‌ಐ ಸುಧಾಕರ ತೋನ್ಸೆ, ಮೆಸ್ಕಾಂ ಎಇಇ ಪ್ರಶಾಂತ್ ಪೈ ಸ್ಥಳಕ್ಕಾಗಮಿಸಿ ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ಜನತಾ ಬಝಾರ್‌ನ ನಿರ್ದೇಶಕ ಪುರುಷೋತ್ತಮ ಶೆಟ್ಟಿ ವಾಮದಪದವು ಅವರಿಂದ ಮಾಹಿತಿ ಪಡೆದುಕೊಂಡರು. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಪರಿಹಾರ ನೀಡಲುಮೆಸ್ಕಾಂಗೆ ಸೂಚನೆ
ಬೆಂಗಳೂರು ಪ್ರವಾಸದಲ್ಲಿರುವ ಶಾಸಕ ರಾಜೇಶ್ ನಾೖಕ್ ಅವರು ಮೆಸ್ಕಾಂ ಅ ಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಲ್ಲದೆ, ಮೃತರ ಕುಟುಂಬಕ್ಕೆ ಗರಿಷ್ಠ ಪ್ರಮಾಣ ಪರಿಹಾರ ನೀಡುವಂತೆ ಸೂಚನೆ ನೀಡಿದರು.
ಮಾಜಿ ಸಚಿವ ಬಿ. ರಮಾನಾಥ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅವರು ಆಸ್ಪತ್ರೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ
ಹೇಳಿ ಧೈರ್ಯ ತುಂಬಿದರು.
ಪತ್ನಿಗೆ ಆಘಾತ
ಪತಿ ಮತ್ತು ಪುತ್ರಿಯ ಸಾವಿನ ಸುದ್ದಿಗೆ ಪತ್ನಿ ಗಿರಿಜಾ ಶೆಟ್ಟಿ ಆಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದು, ಅವರನ್ನು ಪುತ್ರ ತತ್‌ಕ್ಷಣ ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಹಶೀಲ್ದಾರ್ ರಶ್ಮಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಇಬ್ಬರು ಗಂಡು ಮಕ್ಕಳ ಪೈಕಿ ಓರ್ವ ಕೆಲಸದಲ್ಲಿದ್ದು, ಮತ್ತೋರ್ವ ಮಗ ತಂದೆಯ ಕೃಷಿ ಕಾರ್ಯದಲ್ಲಿ ಸಹಕರಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.