ನೇತ್ರಾವತಿ ಸೇತುವೆಯಲ್ಲಿ ಸಿಸಿ ಕೆಮರಾ ಅಳವಡಿಕೆಗೆ ನಿರ್ಧಾರ
Team Udayavani, Jan 19, 2020, 12:47 AM IST
ಮಹಾನಗರ: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನೇತ್ರಾವತಿ ಸೇತುವೆಯ ಎರಡೂ ಕಡೆಗಳಲ್ಲಿ ಸುರಕ್ಷತಾ ತಡೆಗೋಡೆ ಅಳವಡಿಕೆಗೆ ಕ್ರಿಯಾ ಯೋಜನೆ ರೂಪಿಸಲು ಹಾಗೂ ತತ್‌ಕ್ಷಣ ಸಿಸಿ ಕೆಮರಾ ಅಳವಡಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಶನಿವಾರ ಜರಗಿದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಂಗಳೂರು – ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನೇತ್ರಾವತಿ ಸೇತುವೆಯಲ್ಲಿ ಹೆಚ್ಚುತ್ತಿರುವ ಅಹಿತಕರ ಘಟನೆಗಳನ್ನು ತಡೆಯವ ನಿಟ್ಟಿನಲ್ಲಿ ಸೇತುವೆಯ ಎರಡು ಕಡೆಗಳಲ್ಲಿ ತತ್‌ಕ್ಷಣ ಸಿಸಿ ಕೆಮರಾ ಅಳವಡಿಸಲು ಹಾಗೂ ಸುರಕ್ಷತಾ ತಡೆಗೋಡೆ ಅಳವಡಿಸುವ ಕಾಮಗಾರಿಗೆ ಕ್ರಿಯಾ ಯೋಜನೆ ತಯಾರಿಸಿ ಮುಂದಿನ ತಿಂಗಳು ನಡೆಯುವ ಸಭೆಯಲ್ಲಿ ಅನುಮೋದನೆ ನೀಡುವ ಕುರಿತು ನಿರ್ಧರಿಸಲಾಗಿದೆ ಎಂದರು.
ವೆಲೆನ್ಸಿಯಾ ಜಂಕ್ಷನ್‌ನಲ್ಲಿರುವ ಪಾರ್ಕ್ ಅನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕರದ ವತಿಯಿಂದ ಕೂಡಲೇ ಅಭಿ ವೃದ್ಧಿಪಡಿಸಲು ನಿರ್ಧರಿಸಲಾಗಿದೆ. ನಗರದ ಸೌಂದರ್ಯ ಹೆಚ್ಚಿಸಲು ಸಹಕಾರಿಯಾಗುವಂತೆ ಪಾರ್ಕ್ ಅಭಿವೃದ್ಧಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕಾಂತ್ ರಾವ್, ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.