ವಾರದೊಳಗೆ ಕಾವೂರಿನಲ್ಲಿ ಜಾಗ ನೀಡಲು ನಿರ್ಧಾರ

ಮಂಗಳೂರಿಗೆ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಪ್ರಾದೇಶಿಕ ಕೇಂದ್ರ

Team Udayavani, Sep 8, 2019, 5:00 AM IST

Rajiv-Gandhi-

ಮಂಗಳೂರು: ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕೇಂದ್ರ ಮಂಗಳೂರಿನಲ್ಲಿಯೂ ನಿರ್ಮಾಣ ಗೊಳ್ಳಲಿದ್ದು, ಇದಕ್ಕಾಗಿ ವಾರದೊಳಗೆ ಜಾಗ ಅಂತಿಮಗೊಳ್ಳಲಿದೆ. ಇದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 70 ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನುಕೂಲ ಉಂಟು ಮಾಡಲಿದೆ.

ಕೇಂದ್ರ ನಿರ್ಮಾಣಕ್ಕೆ ಮೇರಿಹಿಲ್‌ ಮತ್ತು ಕಾವೂರಿನಲ್ಲಿ ನಾಲ್ಕು ತಿಂಗಳ ಹಿಂದೆಯೇ ಜಾಗ ಗುರುತಿಸಲಾಗಿತ್ತು. ಯಾವುದು ಸೂಕ್ತ ಎಂಬುದು ಅಂತಿಮವಾಗದೆ ಪ್ರಸ್ತಾವನೆ ಜಿಲ್ಲಾಧಿಕಾರಿ ಕಚೇರಿಯಲ್ಲಿತ್ತು. ಈಗ ಶಾಸಕ ಡಾ| ಭರತ್‌ ಶೆಟ್ಟಿ ಅವರ ಮುತುವರ್ಜಿಯಲ್ಲಿ ವಾರದೊಳಗೆ ನಿರ್ಧಾರವಾಗುವ ನಿರೀಕ್ಷೆ ಇದೆ. ಕಾವೂರಿನಲ್ಲಿ 1.3 ಎಕರೆ ಜಮೀನಿದ್ದು, ಅದೇ ಸೂಕ್ತ ಎಂಬ ತೀರ್ಮಾನಕ್ಕೆ ಜಿಲ್ಲಾಡಳಿತ ಬಂದಿದೆ.

ಅನುಕೂಲಗಳೇನು?
ಮಂಗಳೂರಿನಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕೇಂದ್ರ ನಿರ್ಮಾಣವಾದರೆ, ವಿವಿಯ ಯಾವುದೇ ಆವಶ್ಯಕತೆಗಳಿಗೆ ಕರಾವಳಿಯ ವಿದ್ಯಾರ್ಥಿಗಳು ಬೆಂಗಳೂರಿಗೆ ಅಲೆದಾಡ ಬೇಕಿಲ್ಲ. ದ.ಕ. ಮತ್ತು ಉಡುಪಿಯಲ್ಲಿ ಈ ವಿವಿಗೆ 70 ವೈದ್ಯಕೀಯ ಕಾಲೇಜುಗಳು ಸಂಯೋಜನೆಗೊಂಡಿವೆ. ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸೇವಾ ಕೋರ್ಸ್‌ ಕಲಿಯುವ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಸನಿಹದಲ್ಲಿಯೇ ಎಲ್ಲ ಸೇವೆಗಳನ್ನು ಕಲ್ಪಿಸುವುದು ಪ್ರಾದೇಶಿಕ ಕೇಂದ್ರ ತೆರೆಯುವ ಉದ್ದೇಶ. ಡಿಜಿಟಲ್‌ ಮೌಲ್ಯಮಾಪನ, ಪ್ರಾಧ್ಯಾಪಕರ ತರಬೇತಿ ಪ್ರಾದೇಶಿಕ ಕೇಂದ್ರದಲ್ಲಿ
ನಡೆಯುತ್ತದೆ.

ವಿದ್ಯಾರ್ಥಿಗಳಿಗೆ ಸಮಸ್ಯೆ ಇದ್ದರೂ ಇಲ್ಲಿ ದೂರು ನೀಡಬಹುದು.ನಾಲ್ಕು ಕಡೆ ಕೇಂದ್ರಮಂಗಳೂರು, ದಾವಣಗೆರೆ, ಬೆಳಗಾವಿ, ಕಲಬುರಗಿಗಳಲ್ಲಿ ಪ್ರಾದೇಶಿಕ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶವನ್ನು ಆರೋಗ್ಯ ವಿವಿ ಹೊಂದಿದ್ದು, ಕಲಬುರಗಿಯದು ಮೂರು ತಿಂಗಳುಗಳಲ್ಲಿ ಕಾರ್ಯಾರಂಭ ಮಾಡಲಿದೆ. ದಾವಣಗೆರೆಯಲ್ಲಿ ಪ್ರಾದೇಶಿಕ ಉಪಕೇಂದ್ರದ ಜತೆಗೆ ಆಡಿಟೋರಿಯಂ ಕೂಡ ನಿರ್ಮಾಣವಾಗಲಿದೆ. ಇದು ಕೂಡ ಸದ್ಯವೇ ಆರಂಭವಾಗುವ ನಿರೀಕ್ಷೆ ಇದೆ. ಬೆಳಗಾವಿಯಲ್ಲಿ ಇನ್ನಷ್ಟೇ ಆಗಬೇಕಿದೆ.

ಕ್ರೀಡಾ ಸಂಕೀರ್ಣ
ರಾಜೀವ ಗಾಂಧಿ ಆರೋಗ್ಯ ವಿವಿಯ ಕ್ರೀಡಾ ಸಂಕೀರ್ಣವನ್ನೂ ಮಂಗಳೂರಿನಲ್ಲಿ ಸ್ಥಾಪಿಸುವ ಯೋಜನೆ ಇದ್ದು, ಇದಕ್ಕಾಗಿ ಮಂಗಳೂರು ವಿವಿ ಕ್ಯಾಂಪಸ್‌ನಲ್ಲಿ 5 ಎಕರೆ ಕೇಳಲಾಗಿದೆ. ಈ ಸಂಬಂಧ ಪ್ರಕ್ರಿಯೆ ನಡೆಯುತ್ತಿದೆ ಎಂದು ರಾಜೀವಗಾಂಧಿ ಆರೋಗ್ಯ ವಿವಿಯ ಸೆನೆಟ್‌ ಸದಸ್ಯ ಯು.ಟಿ. ಇಫ್ತಿಕಾರ್‌ ತಿಳಿಸಿದ್ದಾರೆ.

ಶೀಘ್ರ ಜಾಗ ಅಂತಿಮ
ಪ್ರಾದೇಶಿಕ ಕೇಂದ್ರಕ್ಕೆ ಮೇರಿ ಹಿಲ್‌ ಮತ್ತು ಕಾವೂರಿನಲ್ಲಿ ಸ್ಥಳ ಗುರುತಿಸಲಾಗಿದೆ. ಈಗಾಗಲೇ ಎರಡೂ ಸ್ಥಳಗಳ ಬಗ್ಗೆ ಪರಿಶೀಲನೆ ನಡೆದಿದೆ. ಶೀಘ್ರ ಜಿಲ್ಲಾಧಿಕಾರಿ ಯವರೊಂದಿಗೆ ತೆರಳಿ ಇನ್ನೊಂದು ಹಂತದ ಪರಿಶೀಲನೆ ನಡೆಸಿ ಅಂತಿಮಗೊಳಿಸಲಾಗುವುದು.
-ಡಾ| ವೈ. ಭರತ್‌ ಶೆಟ್ಟಿ, ಶಾಸಕರು

ಪ್ರಾದೇಶಿಕ ಕೇಂದ್ರಕ್ಕೆ ಜಾಗ ಗುರುತಿಸುವ ಸಂಬಂಧ ಜಿಲ್ಲಾಧಿಕಾರಿಗೆ ತಿಳಿಸಲಾಗಿದೆ. ಕಾವೂರು ವ್ಯಾಪ್ತಿಯಲ್ಲಿ ಎರಡು ಜಮೀನು ತೋರಿಸಿದ್ದರು. ಸ್ಥಳೀಯ ಶಾಸಕ ಡಾ| ಭರತ್‌ ಶೆಟ್ಟಿ ಮತ್ತು ವಿವಿಯ ಸೆನೆಟ್‌ ಸದಸ್ಯರು ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಜಾಗ ಅಂತಿಮಗೊಂಡ ಬಳಿಕ ಕೇಂದ್ರ ನಿರ್ಮಾಣದ ಒಟ್ಟು ರೂಪುರೇಖೆ, ವೆಚ್ಚದ ಬಗ್ಗೆ ತೀರ್ಮಾನಿಸಲಾಗುವುದು.
-ಡಾ| ಸಚ್ಚಿದಾನಂದ, ರಾಜೀವ ಗಾಂಧಿ ಆರೋಗ್ಯ ವಿವಿ ಉಪಕುಲಪತಿ

-ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.