ಇರಿತಕ್ಕೆ ಒಳಗಾಗಿದ್ದ ದೀಕ್ಷಾ ಜನರಲ್ ವಾರ್ಡ್‌ಗೆ ಶಿಫ್ಟ್
Team Udayavani, Jul 25, 2019, 10:12 AM IST
ಉಳ್ಳಾಲ: ಬಗಂಬಿಲ ಬಳಿ ಚೂರಿ ಇರಿತಕ್ಕೊಳಗಾಗಿ ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಗಂಬಿಲ ನಿವಾಸಿ ದೀಕ್ಷಾ(20) ಚೇರಿಸಿಕೊಂಡಿದ್ದು, ತೀವ್ರ ನಿಗಾ ಘಟಕದಿಂದ ಸಾಮಾನ್ಯ ರೋಗಿಗಳ ಘಟಕಕ್ಕೆ ಸ್ಥಳಾಂತರಿಸಲಾಗಿದೆ.
ಕಾರ್ಕಳದ ಖಾಸಗಿ ಕಾಲೇಜಿನ ಮೊದಲ ವರ್ಷದ ಎಂಬಿಎ ವಿದ್ಯಾರ್ಥಿನಿಯಾಗಿರುವ ಈಕೆಯ ಮೇಲೆ ಸ್ನೇಹಿತ, ಶಕ್ತಿನಗರ ನಿವಾಸಿ ಸುಶಾಂತ್ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ್ದ. ಸುಮಾರು 25 ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಈಗ ಚೇತರಿಸಿಕೊಂಡಿದ್ದಾಳೆ.
ಇರಿತದಿಂದ ಕುತ್ತಿಗೆಯ ಭಾಗದಲ್ಲಿ ಶ್ವಾಸನಾಳಕ್ಕೆ ಹಾನಿಯಾಗಿದ್ದು. ಎದೆ, ಹೊಟ್ಟೆ, ಎಡಗೈಯ ತೋಳಿನ ಭಾಗದಲ್ಲಿ ಚುಚ್ಚಿದ ಗಾಯಗಳಾಗಿವೆ. ಆಸ್ಪತ್ರೆಯ ತಜ್ಞ ವೈದ್ಯರ ತಂಡದ ಸಹಕಾರದಿಂದ ಸೂಕ್ತ ಸಮಯದಲ್ಲಿ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಮಾಡಲಾಗಿದೆ. ತೀವ್ರ ನಿಗಾ ಘಟಕದಲ್ಲಿರುವ ದೀಕ್ಷಾಳಿಗೆ ಹೊಲಿಗೆ ಮತ್ತು ಪ್ಲಾಸ್ಟಿಕ್ ಸರ್ಜರಿ ಮಾಡಿದ ಗಾಯಗಳಲ್ಲಿ ಯಾವುದೇ ರೀತಿಯ ಸೋಂಕುಗಳಾಗದೆ ಇದ್ದಲ್ಲಿ ಪ್ರಾಣಾಪಾಯದಿಂದ ಪಾರಾಗಲಿದ್ದಾಳೆ ಎಂದು ಈ ಹಿಂದೆಯೇ ದೀಕ್ಷಾಳಿಗೆ ಚಿಕಿತ್ಸೆ ನೀಡುತ್ತಿರುವ ಡಾ|ನರೇಶ್ ರೈ ತಿಳಿಸಿದ್ದರು.
ಸ್ಪಂದಿಸಿದ್ದ ಕ್ಷೇಮದ ತಜ್ಞ ವೈದ್ಯರ ತಂಡ
ದೀಕ್ಷಾಳಿಗೆ ಆಸ್ಪತ್ರೆಯ ವಿವಿಧ ವಿಭಾಗಗಳ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡಿತ್ತು. ಈಕೆಯ ಎಲ್ಲ ವೈದ್ಯಕೀಯ ವೆಚ್ಚವನ್ನು ಭರಿಸುವ ಮೂಲಕ ಕೆ.ಎಸ್.ಹೆಗ್ಡೆ ಆಸ್ಪತ್ರೆ ಮಾನವೀಯತೆ ಮೆರೆದಿದೆ.
ದಾದಿಗೆ ಪ್ರಶಸ್ತಿ
ಚೂರಿ ಇರಿತದ ಘಟನೆ ಆಸ್ಪತ್ರೆಯ ಹಿಂಬದಿಯ ರಸ್ತೆಯಲ್ಲಿ ನಡೆದಿದ್ದು ಈ ಸಂದರ್ಭ ಕರ್ತವ್ಯದಲ್ಲಿದ್ದ ದಾದಿ, ಕೇರಳದ ಮೂಲದ ನಿಮ್ಮಿ ಅವರು ಆ್ಯಂಬುಲೆನ್ಸ್ ಚಾಲಕ ಪ್ರವೀಣ್ ಅವರ ಸಹಕಾರದೊಂದಿಗೆ ಘಟನಾ ಸ್ಥಳಕ್ಕೆ ತಲುಪಿದ್ದು, ದಿಟ್ಟತನದಿಂದ ದೀಕ್ಷಾಳನ್ನು ರಕ್ಷಿಸಿದ್ದರು. ಈ ಹಿನ್ನೆಲೆಯಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ನಗದು ಬಹುಮಾನ ನೀಡಿ ಗೌರವಿಸಲಾಗಿತ್ತು. ಈಗ ಅವರು ದಾದಿಯರಿಗೆ ನೀಡಲ್ಪಡುವ ನ್ಯಾಷನಲ್ ಫ್ಲೋರೆನ್ಸ್ ನೈಟಿಂಗೇಲ್ ನರ್ಸಸ್ ಅವಾರ್ಡ್ 2019ಕ್ಕೆ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.