ದೀಪಕ್‌ ರಾವ್‌ ಹತ್ಯೆ ಖಂಡಿಸಿ ವಿವಿಧೆಡೆ ಪ್ರತಿಭಟನೆ 

Team Udayavani, Jan 5, 2018, 11:05 AM IST

5-Jan-9.jpg

ಬೆಳ್ತಂಗಡಿ: ಬಜರಂಗದಳ ಕಾರ್ಯಕರ್ತ ದೀಪಕ್‌ ರಾವ್‌ ಅವರ ಹತ್ಯೆ ಖಂಡಿಸಿ ವಿವಿಧೆಡೆ ಪ್ರತಿಭಟನೆ ನಡೆಯಿತು.

ಬೆಳ್ತಂಗಡಿ
ಪೊಲೀಸರು ಆಳುವ ಪಕ್ಷದ ಗುಲಾಮರಾಗಬಾರದು. ನ್ಯಾಯನಿಷ್ಠರಾಗಿರಬೇಕು ಎಂದು ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ಹೇಳಿದರು. ಅವರು ಗುರುವಾರ ಇಲ್ಲಿನ ಮೂರು ಮಾರ್ಗ ಬಳಿ ತಾ| ಬಿಜೆಪಿ ವತಿಯಿಂದ ದೀಪಕ್‌ ರಾವ್‌ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ, ರಸ್ತೆ ತಡೆಯಲ್ಲಿ ಮಾತನಾಡಿದರು.

ಇದಕ್ಕೂ ಮುನ್ನ ತಾಲೂಕು ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಹರೀಶ್‌ ಪೂಂಜ, ಹತ್ಯೆಗಳ ಹಿಂದೆ ಸರಕಾರದ ಪ್ರಚೋದನೆ ಇದೆ. ಸಚಿವ ರಮಾನಾಥ ರೈ ಅವರ ತುಷ್ಟೀಕರಣದ ಮಾತುಗಳೇ ಕಾರಣ. ಇಂತಹದ್ದಕ್ಕೆ ಪ್ರತಿಕ್ರಿಯಿಸದೇ ಸುಮ್ಮನಿರಬಾರದು. ಮೃತನ ಶವ ಯಾತ್ರೆಗೆ
ಅವಕಾಶ ಕೊಡದ ಸರಕಾರದ ಶವಯಾತ್ರೆ ನಡೆಸಬೇಕು ಎಂದರು. ತಾ| ಬಿಜೆಪಿ ಅಧ್ಯಕ್ಷ ರಂಜನ್‌ ಜಿ. ಗೌಡ, ಹಿಂದೂಗಳ ಹತ್ಯೆ ನಿರಂತರವಾಗಿ ನಡೆಯುತ್ತಿದೆ. ಇದು ಸರಕಾರದ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ನಿದರ್ಶನ ಎಂದರು.

ಜಿಲ್ಲಾ ಬಿಜೆಪಿ ಸಹಪ್ರಭಾರಿ ಪ್ರತಾಪಸಿಂಹ ನಾಯಕ್‌ ಮಾತ ನಾಡಿ, ಜಾತ್ಯತೀತರು ಎಂದು ಹೇಳಿಕೊಳ್ಳುವವರು ಜಾತಿಗಳನ್ನು ವಿಭಜಿಸಿ ಹಿಂದೂಗಳು ಹಾಗೂ ಅಲ್ಪಸಂಖ್ಯಾಕರ ನಡುವೆ ತಾರತಮ್ಯ ಮಾಡುವುದೇಕೆ. ಹಿಂದೂಗಳ ಹತ್ಯೆಗೆ ಕುಮ್ಮಕ್ಕು ಕೊಡುವುದೇಕೆ. ಇದನ್ನೆಲ್ಲ ಹಿಂದೂ ಸಮಾಜ ನೋಡುತ್ತಾ ಕೂರಬೇಕೆ ಎಂದರು.

ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿ ಅನಂತರ ಮೂರು ಮಾರ್ಗವರೆಗೆ ಮೆರವಣಿಗೆ ಬರಲಾಯಿತು. ಮೂರು ಮಾರ್ಗದಲ್ಲಿ ರಾ.ಹೆ.ಗೆ ತಡೆ ಉಂಟು ಮಾಡಲಾಯಿತು. ಬಜರಂಗ ದಳ ಜಿಲ್ಲಾ ಸಂಚಾಲಕ ಭಾಸ್ಕರ ಧರ್ಮಸ್ಥಳ ಅವರು ಭಾಷಣ ನಡೆಸುತ್ತಿದ್ದಾಗ ಪೊಲೀಸರು ರಸ್ತೆಯಿಂದ ಏಳುವಂತೆ ಸೂಚಿಸಿದರು. ಪ್ರತಿಭಟನೆಯಲ್ಲಿ ಜಿ.ಪಂ. ಸದಸ್ಯರಾದ ಕೊರಗಪ್ಪ ನಾಯ್ಕ, ಮಮತಾ ಎಂ. ಶೆಟ್ಟಿ, ತಾ.ಪಂ. ಸದಸ್ಯರಾದ ಧನಲಕ್ಷ್ಮೀ, ಸುಧೀರ್‌ ಸುವರ್ಣ, ಶಶಿಧರ ಕಲ್ಮಂಜ, ವೇದಾವತಿ, ಲಕ್ಷ್ಮೀ ನಾರಾಯಣ ಮತ್ತಿತರರಿದ್ದರು.

ಬಂಟ್ವಾಳ
ಬಿ.ಸಿ. ರೋಡ್‌ ಬಸ್‌ ನಿಲ್ದಾಣದಲ್ಲಿ ಬಂಟ್ವಾಳ ಬಿಜೆಪಿ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು. ಕುಟುಂಬದ ನಿರ್ವಹಣೆಯನ್ನು ಮಾಡುತ್ತಿದ್ದ ದೀಪಕ್‌ ಕೊಲೆಯಾದುದರಿಂದ ಆ ಕುಟುಂಬ ನಿರ್ಗತಿಕವಾಗಿದೆ. ಈ ಕೃತ್ಯಕ್ಕೆ ನೇರ ಕಾರಣರಾದ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಯನ್ನು ಸರಕಾರ ನಿಷೇಧಿಸಬೇಕು ಎಂದು ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ ಆಗ್ರಹಿಸಿದರು. ಜಿ.ಪಂ. ಸದಸ್ಯ ತುಂಗಪ್ಪ ಬಂಗೇರ, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಚೆನ್ನಪ್ಪ ಆರ್‌. ಕೋಟ್ಯಾನ್‌, ದಿನೇಶ್‌ ಅಮ್ಟೂರು, ಜಿ. ಆನಂದ, ರಾಮ್‌ದಾಸ ಬಂಟ್ವಾಳ, ಮತ್ತಿತರರಿದ್ದರು.

ಪುತ್ತೂರು
ಬಿಜೆಪಿ ವತಿಯಿಂದ ನಗರದ ಬಸ್‌ ನಿಲ್ದಾಣದ ಸಮೀಪ ಮುಖ್ಯ ರಸ್ತೆಯನ್ನು ಗುರುವಾರ ಬೆಳಗ್ಗೆ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಎಂ.ಟಿ. ರಸ್ತೆ, ಬಸ್‌ ನಿಲ್ದಾಣ ಸಂಪರ್ಕ ರಸ್ತೆ ಹಾಗೂ ದರ್ಬೆ, ಬೊಳುವಾರು ರಸ್ತೆಗೆ ಅಡ್ಡಲಾಗಿ ಕುಳಿತು, ಕಾಂಗ್ರೆಸ್‌ ಸರಕಾ ರದ ವಿರುದ್ಧ ಧಿಕ್ಕಾರ ಕೂಗಿದರು. ಪೊಲೀಸ್‌ ಇಲಾಖೆಯ ನಿರ್ಲಕ್ಷದ ಕುರಿತು ಆಕ್ರೋಶ ವ್ಯಕ್ತಪಡಿಸಿ, ಮುಖ್ಯ ಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ, ಗೃಹ ಸಚಿವರು ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

ತೆರವಿಗೆ ಯತ್ನ
ಹಠಾತ್‌ ರಸ್ತೆ ತಡೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್‌ ಠಾಣೆ ಇನ್‌ ಸ್ಪೆಕ್ಟರ್‌ ಮಹೇಶ್‌ ಪ್ರಸಾದ್‌, ರಸ್ತೆಯಿಂದ ಪ್ರತಿಭಟನೆ ತೆರವುಗೊಳಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಮಂಡಲ ಸಮಿತಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರ ಮನವೊಲಿಸಲು ಯತ್ನಿಸಿದರು. ಇದಕ್ಕೆ ಬಗ್ಗದ ಪ್ರತಿಭಟನಕಾರರು, ನಮಗೆ ನ್ಯಾಯ ಸಿಗಬೇಕು. ಸರಕಾರ ಉತ್ತರ ಕೊಡಬೇಕು. ಅಲ್ಲಿಯ ತನಕ ನಮ್ಮ ಧ್ವನಿಯನ್ನು ಅಡಗಿ ಸಲು ಸಾಧ್ಯವಿಲ್ಲ ಎಂದು ಘೋಷಣೆ ಮುಂದುವರಿಸಿದರು. ಕೆಲ ಕಾಲ ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಸುಳ್ಯ
ರಾಜ್ಯದಲ್ಲಿ ಹಿಂದೂ ವಿರೋಧಿ ಸರಕಾರ ಅಧಿಕಾರದಲ್ಲಿದೆ. ಜಿಲ್ಲಾ ಉಸ್ತುವಾರಿಗಳೂ ನೀಚ ರಾಜಕೀಯ ಮಾಡು ತ್ತಾರೆ ಎಂದು ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್‌ ವಳಲಂಬೆ ಆರೋಪಿಸಿದ್ದಾರೆ.

ಹಿಂದೂ ಕಾರ್ಯಕರ್ತ ದೀಪಕ್‌ ರಾವ್‌ ಅವರ ಹತೆ ಖಂಡಿಸಿ ಸುಳ್ಯದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರಗಳ ವತಿಯಿಂದ ಗುರುವಾರ ಏರ್ಪಡಿಸಿದ್ದ ಪ್ರತಿಭಟನ ಸಭೆಯಲ್ಲಿ ಮಾತನಾಡಿದ ಅವರು, ಹಿಂದುಗಳ ವಿರುದ್ಧ ನಡೆಯುವ ಆಕ್ರಮಣಕ್ಕೆ ಪ್ರತಿಭಟನೆ ಸಲ್ಲಿಸಲು ಯಾವುದೇ ಕಾಲಕ್ಕೂ ಸಿದ್ದರಾಗಿರಬೇಕು ಎಂದು ಕರೆ ನೀಡಿದರು.

ಟಾಪ್ ನ್ಯೂಸ್

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

1

Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.