500 ಹಣತೆ ಬೆಳಗಿ ಸೌಹಾರ್ದ ದೀಪಾವಳಿ
Team Udayavani, Nov 13, 2018, 3:10 AM IST
ಮಹಾನಗರ : ತಿರುವೈಲು ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಚಿಣ್ಣರ ಅಂಗಳ ಉದ್ಯಾನವನದಲ್ಲಿ ಸೌಹಾರ್ದ ದೀಪಾವಳಿಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ತಿರುವೈಲು ವಾರ್ಡ್‌ನ ಕಾರ್ಪೊರೇಟರ್ ಹೇಮಲತಾ ರಘು ಸಾಲ್ಯಾನ್, ಮಕ್ಕಳ ಪೋಷಕ ಹಸನಬ್ಬ ಅಮೃತನಗರ ಮತ್ತು ಹಳೆ ವಿದ್ಯಾರ್ಥಿ ಹಾಗೂ ಉದ್ಯಮಿ ಸ್ಟ್ಯಾನಿ ಕುಟಿನ್ಹೊ ಅವರು ಹಣತೆಯನ್ನು ಬೆಳಗಿಸುವುದರ ಮೂಲಕ ದೀಪಾವಳಿ ಆಚರಣೆಗೆ ಚಾಲನೆ ನೀಡಿದರು. ಭಾಗವಹಿಸಿದ್ದ ಎಲ್ಲರೂ ಸೇರಿ ಒಟ್ಟು ಸುಮಾರು 500 ಹಣತೆಗಳನ್ನು ಬೆಳಗಿಸಿ ಬೆಳಕಿನ ಹಬ್ಬದ ಸಂತೋಷದಲ್ಲಿ ಸಂಭ್ರಮಿಸಿದರು.
ಶಾಲೆಯ ಮುಖ್ಯೋಪಾಧ್ಯಾಯ ಶಂಕರ್ ಎ., ಎಸ್‌ಡಿಎಂಸಿ ಅಧ್ಯಕ್ಷ ಜನಾರ್ದನ ಸುವರ್ಣ, ವಿದ್ಯಾಬೋಧಿನಿ ಟ್ರಸ್ಟ್‌ನ ಅಧ್ಯಕ್ಷ ರಘು ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ರಾಜೀವ ಎಸ್. ಕೊಳಕೆಬೈಲು ಮೊದಲಾದವರು ಉಪಸ್ಥಿತರಿದ್ದರು. ಆಕರ್ಷಕ ಸುಡುಮದ್ದು ಪ್ರದರ್ಶನ ನಡೆಯಿತು. ಶಾಲಾ ಮಕ್ಕಳು ಹಾಗೂ ವಿವಿಧ ಧರ್ಮಗಳ ನೂರಾರು ಜನರು ಭಾಗವಹಿಸಿ ಪರಸ್ಪರ ದೀಪಾವಳಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.