ಪೌರ ಕಾರ್ಮಿಕರಿಗೆ ವೇತನ ವಿಳಂಬ: ಕಸ ಸಂಗ್ರಹ ಮಾಡದೆ ಪ್ರತಿಭಟನೆ 


Team Udayavani, Jun 15, 2018, 11:13 AM IST

15-june-4.jpg

ಮಹಾನಗರ: ಇತ್ತೀಚೆಗೆ ಬೆಂಗಳೂರಿನಲ್ಲಿ ಕಸ ಸಂಗ್ರಹ ನಡೆಸುತ್ತಿರುವ ಕಾರ್ಮಿಕರು ನಡೆಸಿದ ಮುಷ್ಕರದಿಂದಾಗಿ ಒಂದೆರಡು ದಿನ ರಾಜಧಾನಿಯಲ್ಲಿ ಸಮಸ್ಯೆ ಉಂಟಾದ ಘಟನೆ ಮಾಸುವ ಮುನ್ನವೇ, ಮಂಗಳೂರಿನಲ್ಲಿ ಇದೇ ಸಮಸ್ಯೆ ಗುರುವಾರ ಕಾಣಿಸಿಕೊಂಡಿದೆ. ಕಸ ಸಂಗ್ರಹ ನಡೆಸುತ್ತಿರುವ ಕಾರ್ಮಿಕರಿಗೆ ವೇತನ ಪಾವತಿ ಮಾಡಿಲ್ಲ ಎಂದು ಆರೋಪಿಸಿ ಆ್ಯಂಟನಿ ವೇಸ್ಟ್‌ ಮ್ಯಾನೇಜ್‌ ಮೆಂಟ್‌ನ ಕಾರ್ಮಿಕರು ಗುರುವಾರ ಕಸ ಸಂಗ್ರಹ ನಡೆಸದೆ, ಪ್ರತಿಭಟಿಸಿದ್ದಾರೆ. ಈ ಮೂಲಕ ನಗರದಲ್ಲಿ ಕಸ ಸಂಗ್ರಹ ಗುರುವಾರ ನಡೆಯಲಿಲ್ಲ.

‘ಎಲ್ಲ ಕಾರ್ಮಿಕರಿಗೆ ಮಾಸಿಕ ವೇತನ ಸಮರ್ಪಕವಾಗಿ ನೀಡುವವರೆಗೆ ನಾವು ಕೆಲಸಕ್ಕೆ ಹಾಜರಾಗುವುದಿಲ್ಲ’ ಎಂದು ಆ್ಯಂಟನಿ ಸಂಸ್ಥೆಯ ಪ್ರತಿಭಟನನಿರತ ಕಾರ್ಮಿಕರು ತಿಳಿಸಿದರೆ, ‘ಆ್ಯಂಟನಿ ಸಂಸ್ಥೆಗೆ ಮನಪಾ ವತಿಯಿಂದ ಪಾವತಿಸಲು ಬಾಕಿ ಇರುವ 2.10 ಕೋ.ರೂ.ಗಳನ್ನು ಗುರುವಾರ ಮಧ್ಯಾಹ್ನವೇ ನೀಡಲಾಗಿದ್ದು, ಇದರಿಂದಾಗಿ ಶುಕ್ರವಾರದಿಂದ ಕಸ ಸಂಗ್ರಹ ಎಂದಿನಂತೆ ಆರಂಭವಾಗಲಿದೆ’ ಎಂದು ಮನಪಾ ಮೂಲಗಳು ತಿಳಿಸಿವೆ.

ಮಳೆಯೊಂದಿಗೆ ಗಬ್ಬು ನಾರುವ ತ್ಯಾಜ್ಯ
ಗುರುವಾರ ಬೆಳಗ್ಗೆ ತ್ಯಾಜ್ಯ ಸಂಗ್ರಹ ಮಾಡಲು ಹೊರಟಿದ್ದ ಕಾರ್ಮಿ ಕರು ಕೂಳೂರು ಯಾರ್ಡ್‌ನಲ್ಲಿ ವಾಹನಗಳನ್ನು ನಿಲ್ಲಿಸಿ ಕಸ ಸಂಗ್ರಹ ಮಾಡಲು ಮುಂದಾಗಲಿಲ್ಲ. ಹೀಗಾಗಿ ಮಂಗಳೂರಿ ನಾದ್ಯಂತ ಕಸದ ರಾಶಿ ಶುರುವಾಗಿದೆ. ಮಂಗಳೂರಿನ ಮಾರುಕಟ್ಟೆ ಸೇರಿದಂತೆ ವಿವಿಧ ಪ್ರದೇಶದಲ್ಲಿ ತ್ಯಾಜ್ಯ ತುಂಬಿದೆ. ಈ ಮಧ್ಯೆ ಮಂಗಳೂರಿನಲ್ಲಿ ವ್ಯಾಪಕ ಮಳೆ ಬರುತ್ತಿರುವ ಕಾರಣ ತ್ಯಾಜ್ಯವು ಮಳೆ ನೀರಿನೊಂದಿಗೆ ಸೇರಿ ಸ್ಥಳದಲ್ಲಿ ಗಲೀಜು ವ್ಯಾಪಿಸಿ, ನಾರುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ.

ಹೆಸರು ಹೇಳಲು ಇಚ್ಛಿಸದ ಕಾರ್ಮಿಕರೊಬ್ಬರು ‘ಸುದಿನ’ ಜತೆಗೆ ಮಾತನಾಡಿ, ‘ಪ್ರತಿ ತಿಂಗಳು ಕಸ ನಿರ್ವಹಣೆ ಮಾಡುವ ಕಾರ್ಮಿಕರ ಸಮಸ್ಯೆಯನ್ನು ಕೇಳುವವರೇ ಇಲ್ಲವಾಗಿದ್ದಾರೆ. ಮಾಸಿಕವಾಗಿ ಸಂಬಳವನ್ನು ನಿಗದಿತ ದಿನಾಂಕದಂದೇ ನೀಡಬೇಕು ಎಂಬ ಬೇಡಿಕೆ ಈಡೇರುವುದೇ ಇಲ್ಲ. ಎಪ್ರಿಲ್‌ ತಿಂಗಳ ಸಂಬಳ ನಮಗೆ ಮೇ 28ಕ್ಕೆ ದೊರಕಿತ್ತು. ಈ ತಿಂಗಳ ಸಂಬಳ ಜೂ. 10ರೊಳಗೆ ಸಿಗಬೇಕಿತ್ತು. ಇನ್ನೂ ಸಿಗುವ ಅಂದಾಜಿಲ್ಲ. ಕಸ ಸಂಗ್ರಹ ಮಾಡದೆ ಪ್ರತಿಭಟನೆಯ ಮೂಲಕವೇ ನಾವು ನಮ್ಮ ಬೇಸರವನ್ನು ತಿಳಿಸಬೇಕಿದೆ. ಹೀಗಾಗಿ ಗುರುವಾರ ಕಸ ಸಂಗ್ರಹ ನಡೆಸಲಿಲ್ಲ’ ಎಂದರು. ‘ಸಂಸ್ಥೆಯಲ್ಲಿ ಸುಮಾರು 600ರಷ್ಟು ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಕಂಪೆನಿಯವರಿಗೆ ಪಾಲಿಕೆ ಹಣ ನೀಡಿದ ಬಗ್ಗೆ ಮಾಹಿತಿ ಇದ್ದು, ಇದು ಕಾರ್ಮಿಕರ ಖಾತೆಗೆ ಹಂಚಿಕೆಯಾದ ಬಳಿಕವಷ್ಟೇ ಶುಕ್ರವಾರ ಕಸ ಸಂಗ್ರಹ ಆರಂಭಿಸಲಿದ್ದೇವೆ’ ಎಂದವರು ಹೇಳಿದರು.

ಕೊನೆ ಘಳಿಗೆಯಲ್ಲಿ ಪಾಲಿಕೆ ಅಲರ್ಟ್‌ !
ಮನಪಾ ಹಾಗೂ ಕಸ ವಿಲೇವಾರಿಯ ಗುತ್ತಿಗೆ ವಹಿಸಿಕೊಂಡಿರುವ ಆ್ಯಂಟನಿ ವೇಸ್ಟ್‌ ಮ್ಯಾನೇಜ್ಮೆಂಟ್‌ ಸಂಸ್ಥೆಯ ನಡುವಿನ ಬಿಕ್ಕಟ್ಟಿನಿಂದಾಗಿ ಗುತ್ತಿಗೆ ಕಾರ್ಮಿಕರಿಗೆ ಸಂಬಳ ಸಿಗದೆ ಕಾರ್ಮಿಕರು ಮುಷ್ಕರ ನಡೆಸಿರುವುದು ಇದೇ ಮೊದಲಲ್ಲ. ಕಳೆದ ವರ್ಷ ನವೆಂಬರ್‌ನಲ್ಲೂ ಇಂತಹುದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಎರಡು ದಿನ ಕಾರ್ಮಿಕರು ಕಸ ವಿಲೇವಾರಿ ನಡೆಸದೆ, ಪ್ರತಿಭಟಿಸಿದ್ದರು. 2016ರಲ್ಲೂ ಇದೇ ರೀತಿ ಕಾರ್ಮಿಕರು ಮುಷ್ಕರ ನಡೆಸಿದ ಹಿನ್ನೆಲೆಯಲ್ಲಿ ಕಸ ಸಂಗ್ರಹ ವ್ಯತ್ಯಯವಾಗಿತ್ತು. ಇನ್ನೂ ಕೆಲವು ಸಂದರ್ಭ ಇಂತಹುದೇ ಪ್ರತಿಭಟನೆ ನಡೆದಿತ್ತು. ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿ ಕಾರ್ಮಿಕರು ಮುಷ್ಕರ ನಡೆಸುತ್ತಿರುವುದನ್ನು ಅರಿತು ಕೊನೆ ಘಳಿಗೆಯಲ್ಲಿ ಮಂಗಳೂರು ಪಾಲಿಕೆಯು ಮಧ್ಯಪ್ರವೇಶಿಸಿ ಬಾಕಿ ಹಣ ಪಾವತಿಗೆ ಮುಂದಾಗುತ್ತದೆ. ಕಳೆದ ಒಂದೂವರೆ ವರ್ಷದಲ್ಲಿ ನಗರ ವ್ಯಾಪ್ತಿಯಲ್ಲಿ ಈ ರೀತಿ ಕಾರ್ಮಿಕರಿಗೆ ವೇತನ ಪಾವತಿ ವಿಳಂಬವಾಗಿದ್ದ ಹಿನ್ನೆಲೆಯಲ್ಲಿ ಐದಾರು ಬಾರಿ ಕಸ ವಿಲೇವಾರಿ ಮಾಡದೆ ಪ್ರತಿಭಟನೆ ನಡೆದಿತ್ತು.

ಇಂದಿನಿಂದ ಕಸ ಸಂಗ್ರಹ ಆರಂಭ
ಮಾಸಿಕವಾಗಿ ಪಾಲಿಕೆಯು ಆ್ಯಂಟನಿ ಸಂಸ್ಥೆಗೆ ನೀಡಬೇಕಾದ 2.10 ಕೋ.ರೂ.ಗಳನ್ನು ಗುರುವಾರ ಮಧ್ಯಾಹ್ನವೇ ಚೆಕ್‌ ಮೂಲಕ ನೀಡಲಾಗಿದೆ. ಚುನಾವಣಾ ನೀತೆ ಸಂಹಿತೆ ಸಹಿತ ಇತರ ಕಾರ್ಯದಲ್ಲಿ ಅಧಿಕಾರಿಗಳು ಒತ್ತಡದಲ್ಲಿದ್ದ ಕಾರಣದಿಂದ ಹಣ ನೀಡಲು ಸಾಧ್ಯವಾಗಿರಲಿಲ್ಲ. ಹಣ ನೀಡಿರುವ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಮತ್ತೆ ಎಂದಿನಂತೆ ಕಸ ಸಂಗ್ರಹ ನಡೆಯಲಿದೆ.
– ನವೀನ್‌ ಡಿ’ಸೋಜಾ
ಅಧ್ಯಕ್ಷರು, ಆರೋಗ್ಯ ಸ್ಥಾಯೀ ಸಮಿತಿ, ಮನಪಾ

ಟಾಪ್ ನ್ಯೂಸ್

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.