ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
Team Udayavani, Nov 26, 2024, 8:41 PM IST
ಮಂಗಳೂರು: ವಿಶ್ವ ಆರೋಗ್ಯ ಸಂಸ್ಥೆಯು ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತು ಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ ಪ್ರಕಟಿಸಿರುವುದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಎಆರ್‌ಸಿ ವಿರುದ್ಧ ತುರ್ತು ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಸನ್ಮಾನ್ಯ ಜೆ.ಪಿ.ನಡ್ಡಾ ಅವರನ್ನು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಒತ್ತಾಯಿಸಿದ್ದಾರೆ.
ಮೂಲ ಸಂಶೋಧನಾ ವರದಿಗಳಲ್ಲಿ ತಂಬಾಕು ಸೇವನೆಯ ಪರಿಣಾಮದ ಕುರಿತು ಕೇಂದ್ರೀಕರಿಸಿ ಸಂಶೋಧನೆ ನಡೆಸಲಾಗಿತ್ತು, ಹಾಗಿದ್ದರೂ ಅಡಿಕೆ ಕ್ಯಾನ್ಸರ್ ಕಾರಕವೆಂದು ಬಿಂಬಿಸುವ ಸಲುವಾಗಿ ಮಾದರಿ ಸಂಖ್ಯೆ ಮತ್ತು ಶೀರ್ಷಿಕೆಯನ್ನು ತಿರುಚಿ ವರದಿ ಪ್ರಕಟಿಸಿರುವ ಡಬ್ಲ್ಯೂ ಎಚ್‌ಒ ಮತ್ತು ಐಎಆರ್‌ಸಿ ಕ್ರಮ ಅಕ್ಷಮ್ಯ. ಇದು ಅಡಿಕೆ ಕೃಷಿಯನ್ನೆ ಜೀವನಾಧಾರವಾಗಿ ನಂಬಿರುವ ರೈತರ ಬದುಕಿಗೆ ಬಲವಾದ ಪೆಟ್ಟು ನೀಡಿದೆ.
ವಿಶ್ವ ಆರೋಗ್ಯ ಸಂಸ್ಥೆಯು ಅಡಿಕೆಯನ್ನು ವರ್ಗೀಕರಿಸುವುದರ ಕುರಿತು ನ್ಯಾಯೋಚಿತ ವಿಮರ್ಶೆ ನಡೆಸಿ ರೈತರಿಗೆ ನ್ಯಾಯ ದೊರಕಿಸಿ ಕೊಡುವಂತೆ ಕೇಂದ್ರ ಸಚಿವರಲ್ಲಿ ವಿನಂತಿ ಮಾಡಲಾಗಿದೆ. ಅಡಿಕೆ ಲಕ್ಷಾಂತರ ಜನರ ಜೀವನದ ಆಧಾರಸ್ತಂಭ. ಅದರ ತಪ್ಪಾದ ವರ್ಗೀಕರಣದಿಂದ ಅದನ್ನೆ ನಂಬಿ ಬದುಕುತ್ತಿರುವ ಜನರ ಜೀವನ ಹಾಳಾಗುವುದಲ್ಲದೇ ,ಅಡಿಕೆಯ ವೈಜ್ಞಾನಿಕ ಉಪಯೋಗಗಳಿಂದ ಸಮಾಜ ವಂಚಿತವಾಗಲಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.