ದ.ಕ.: 12 ದಿನ; 124 ಮಂದಿಯಲ್ಲಿ ಡೆಂಗ್ಯೂ
Team Udayavani, Jul 13, 2019, 10:24 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.1ರಿಂದ 12ರ ವರೆಗೆ 124 ಮಂದಿಯಲ್ಲಿ ಡೆಂಗ್ಯೂ ಜ್ವರ ದೃಢಪಟ್ಟಿದೆ. ಈ ಪೈಕಿ 30 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.
ಜಿಲ್ಲೆಯಲ್ಲಿ ಸುಮಾರು 400 ಮಂದಿಯಲ್ಲಿ ಡೆಂಗ್ಯೂ ಮಾದರಿಯ ಜ್ವರ ಕಾಣಿಸಿಕೊಂಡಿದ್ದು, ಈ ಪೈಕಿ 124 ಮಂದಿಯಲ್ಲಿ ದೃಢಪಟ್ಟಿದೆ. ಗುರುವಾರದವರೆಗೆ 39 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ 9 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಉಳಿದ 30 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ ಗುಣಮುಖ ರಾಗುತ್ತಿದ್ದಾರೆ ಎಂದು ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ| ನವೀನ್‌ಚಂದ್ರ ಕುಲಾಲ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಡೆಂಗ್ಯೂ?
ನಗರದ ಖಾಸಗಿ ಪ್ರೌಢಶಾಲೆಯೊಂದರ ಮೂವರು ವಿದ್ಯಾರ್ಥಿಗಳಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿರುವುದಾಗಿ ಸಂದೇಶಗಳು ಹರಿದಾಡುತ್ತಿವೆ. ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ವಿಚಾರಣೆ ಮಾಡಲಾಗುತ್ತಿದೆ ಎಂದು ಡಾ| ನವೀನ್‌ಕುಮಾರ್ ತಿಳಿಸಿದ್ದಾರೆ.
ನೀರು ನಿಲ್ಲದಂತೆ ನೋಡಿಕೊಳ್ಳಿ
ಮಂಗಳೂರಿನ ಕದ್ರಿ, ಬೆಂಗ್ರೆ, ಬಂದರು ಮುಂತಾದೆಡೆ ಸೊಳ್ಳೆ ಉತ್ಪತ್ತಿ ತಾಣ ಹೆಚ್ಚುತ್ತಿದೆ. ಇದರಿಂದ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಅಧಿಕವಾಗಿರುತ್ತದೆ. ಜನ ಆದಷ್ಟು ಸುತ್ತಮುತ್ತಲಿನ ಪ್ರದೇಶ, ಮನೆಯ ಮಹಡಿಗಳಲ್ಲಿ ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು. ಶುದ್ಧ ನೀರು ಮತ್ತು ಕೊಳಚೆ ನೀರು ಎರಡರಲ್ಲೂ ಸೊಳ್ಳೆ ಉತ್ಪತ್ತಿಗೆ ಪೂರಕ ವಾಗಿರುವುದರಿಂದ ನೀರು ನಿಲ್ಲಿಸದೆ ಶುಚಿಗೊಳಿಸಬೇಕು. ರಾತ್ರಿ ಮಲಗುವಾಗ ಸೊಳ್ಳೆ ಪರದೆ ಬಳಕೆ ಮಾಡಬೇಕು. ಬೇವಿನ ಎಣ್ಣೆ ಮುಂತಾದವನ್ನು ಹಚ್ಚಿ ಮಲಗಬೇಕು ಎಂದು ವೈದ್ಯಾಧಿಕಾರಿಗಳು ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಮಲೇರಿಯಾ ಸಂಖ್ಯೆ ಕಡಿಮೆ ಇದೆ.
ನಿಯಂತ್ರಣಕ್ಕೆ ಕ್ರಮ: ಜಿ.ಪಂ. ಸಿಇಒ
ಮಲೇರಿಯಾ, ಡೆಂಗ್ಯೂ ಹೆಚ್ಚುತ್ತಿರುವ ಪ್ರದೇಶಗಳಿಗೆ ನಗರ ಪಾಲಿಕೆಯಿಂದ ನಿರಂತರ ಸಮೀಕ್ಷೆ ಮತ್ತು ಸೊಳ್ಳೆಗಳ ಉತ್ಪತ್ತಿ ಪ್ರದೇಶಗಳನ್ನು ನಾಶಪಡಿಸಲು ಕ್ರಮ ಕೈಗೊಳ್ಳುವಂತೆ ಜಿ.ಪಂ. ಸಿಇಒ ಡಾ| ಸೆಲ್ವಮಣಿ ಮಂಗಳೂರು ಮನಪಾಗೆ ನಿರ್ದೇಶನ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.