ಡೆಂಗ್ಯೂ ಜ್ವರ: ಮಹಿಳೆ ಸಾವು
Team Udayavani, Aug 9, 2019, 5:24 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಮಂಗಳೂರಿನ ಮಹಿಳೆಯೋರ್ವರು ಗುರುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅಮರ್ ಆಳ್ವ ರಸ್ತೆ ಬಳಿಯ ನಿವಾಸಿ ಲೀಲಾವತಿ ಸದಾಶಿವ (45) ಮೃತಪಟ್ಟವರು. ಮಂಚದಿಂದ ಬಿದ್ದು ತಲೆಗೆ ಗಾಯವಾದ ಹಿನ್ನೆಲೆಯಲ್ಲಿ ಅವರನ್ನು ಕಳೆದ ನಾಲ್ಕು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಜ್ವರವೂ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೊಳಪಡಿಸಿದಾಗ ಡೆಂಗ್ಯೂ ಪಾಸಿಟಿವ್ ಬಂದಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ನವೀನ್‌ಕುಮಾರ್ ತಿಳಿಸಿದ್ದಾರೆ. ಮೃತರು ಪತಿ, ಮೂವರು ಮಕ್ಕಳನ್ನು ಅಗಲಿದ್ದಾರೆ.
ಡೆಂಗ್ಯೂ ಜ್ವರದಿಂದ ಬಲಿಯಾಗುವವರ ಸಂಖ್ಯೆ ದಿನಂಪ್ರತಿ ಹೆಚ್ಚಾಗುತ್ತಿದ್ದು, ಈ ಬಗ್ಗೆ ಹೆಚ್ಚಿನ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಐವನ್ ಡಿ’ಸೋಜಾ ಸರಕಾರವನ್ನು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.