ಅಡಿಕೆ ಕೊಳೆರೋಗಪರಿಹಾರಕ್ಕೆ ಕ್ಯಾಬಿನೆಟ್‌ನಲ್ಲಿ ಪ್ರಸ್ತಾವ: ದೇಶಪಾಂಡೆ
Team Udayavani, Aug 20, 2018, 12:29 PM IST
ಪುತ್ತೂರು : ಮಡಿಕೇರಿ, ಸಂಪಾಜೆ ನೆರೆಪೀಡಿತ ಪ್ರದೇಶಗಳಿಗೆ ರವಿವಾರ ಭೇಟಿ ನೀಡಿದ ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ಸಂಜೆ ಪುತ್ತೂರಿನ ಪ್ರವಾಸಿಬಂಗಲೆಗೆ ಆಗಮಿಸಿ ಅಧಿಕಾರಿಗಳು, ಪ್ರಮುಖರ ಜತೆ ಚರ್ಚೆ ನಡೆಸಿದರು. ಅಡಿಕೆ ಕೊಳೆರೋಗ, ಕೃಷಿ ನಾಶ, ಮನೆ ಹಾನಿಗೆ ತತ್‌ಕ್ಷಣ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಂಜೀವ ಮಠಂದೂರು ಹಾಗೂ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಮಾಡಿದ ಮನವಿಗೆ ಸ್ಪಂದಿಸಿದ ಸಚಿವರು, ಅಡಿಕೆ ಕೊಳರೋಗಕ್ಕೆ ಈ ಹಿಂದೆ ನೀಡಿದಂತೆ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ಯಾಬಿನೆಟ್‌ನಲ್ಲಿ ಪ್ರಸ್ತಾವಿಸುವುದಾಗಿ ಹೇಳಿದರು.
ಮಾನವೀಯವಾಗಿ ನೋಡಿ
ವ್ಯಾಪಕ ಮಳೆಯಿಂದ ಕೃಷಿ ಹಾನಿ, ಮನೆಗಳಿಗೆ ಹಾನಿ, ಧರೆ ಕುಸಿತದಿಂದ ನಷ್ಟ ಸಂಭವಿಸಿದವರಿಗೆ ಕಾನೂನನ್ನು ನೋಡದೆ ಮಾನವೀಯ ನೆಲೆಯಲ್ಲಿ ಗಮನ ಹರಿಸಿ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ಅಸಹಾಯಕರು, ಬಡವವರ ಸಂಕಷ್ಟಕ್ಕೆ ಕೂಡಲೇ ಸ್ಪಂದಿಸಬೇಕು ಎಂದರು.
ಸತಾಯಿಸಬೇಡಿ
ಸರಕಾರಿ ಜಾರಿಗೆ ತಂದಿರುವ 94ಸಿ ಹಾಗೂ 94ಸಿಸಿಗೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸಿದವರಿಗೆ ಸತಾಯಿಸುವುದು ಬೇಡ. ಹೊಸ ಮನೆ ಕಟ್ಟಿದ್ದಾರೆ ಎಂದು ತೊಂದರೆ ಕೊಡಬೇಡಿ. ಫಲಾನುಭವಿಗಳಿಗೆ ಹಕ್ಕುಪತ್ರದ ಜತೆಗೆ ಖಾತೆಯನ್ನೂ ನೀಡಲು ಕ್ರಮ ಕೈಗೊಳ್ಳಿ ಎಂದು ತಹಶೀಲ್ದಾರ್‌ಗೆ ಸಚಿವ ಆರ್.ವಿ. ದೇಶಪಾಂಡೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bollywood: ರಿಲೀಸ್‌ಗೂ ಮುನ್ನವೇ ಕಂಗನಾ ʼಎಮರ್ಜೆನ್ಸಿʼಗೆ ಬ್ಯಾನ್ ಬಿಸಿ; ಕಾರಣವೇನು
Vitla: ಮಣಿಯಾರಪಾದೆ, ಅಮೈ, ಕುದ್ದುಪದವು ರಸ್ತೆ ಅಭಿವೃದ್ಧಿ ಎಂದು?
Uppinangady: ಎಲ್ಲೆಂದರಲ್ಲಿ ಪಾರ್ಕಿಂಗ್; ದಂಡ ವಿಧಿಸಲು ನಿರ್ಣಯ
RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.