1.5 ಕಿ.ಗ್ರಾಂ ಗಾಂಜಾ ಸಹಿತ ಓರ್ವನ ಬಂಧನ
Team Udayavani, Jul 29, 2019, 11:50 AM IST
ಬೆಳ್ತಂಗಡಿ: ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ಆರೋಪದಲ್ಲಿ ಕಳಿಯ ಗ್ರಾಮದ ಗೇರುಕಟ್ಟೆ ಕಜೆ ಮನೆ ನಿವಾಸಿ ಉಮ್ಮರ್ ಫಾರೂಕ್ (30) ಎಂಬಾತನನ್ನು ಬೆಳ್ತಂಗಡಿ ಪೊಲೀಸರು ರವಿವಾರ ಕುವೆಟ್ಟು ಗ್ರಾಮದ ಮದ್ದಡ್ಕ ಸಮೀಪದ ಕಿನ್ನಿಗೋಳಿ ರೇಷ್ಮೆ ರಸ್ತೆ ಜಂಕ್ಷನ್ನಲ್ಲಿ ಬಂಧಿಸಿದ್ದಾರೆ. ಆತನಿಂದ 15,000 ರೂ. ಮೌಲ್ಯದ 1.575 ಕಿ.ಗ್ರಾಂ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಈತ ಪ್ಲಾಸ್ಟಿಕ್ ಕ್ಯಾನ್ನಲ್ಲಿ ತಲಾ 45 ಗ್ರಾಂ. ತೂಕದ ತಲಾ 35 ಪ್ಲಾಸ್ಟಿಕ್ ಪ್ಯಾಕೆಟ್ಗಳಲ್ಲಿ ಗಾಂಜಾವನ್ನು ಬೀದರ್ ಮೂಲದ ವ್ಯಕ್ತಿಯಿಂದ 10,000 ರೂ.ಗೆ ಖರೀದಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳ್ತಂ ಗಡಿ ಎಸ್ಐ ರವಿ ಬಿ.ಎಸ್. ನೇತೃತ್ವದಲ್ಲಿ ಸಿಬಂದಿ ಅಶೋಕ್ ಕುಮಾರ್ ಕಾರ್ಯಾಚರಣೆ ನಡೆಸಿದ್ದಾರೆ.
ಹಲವು ಪ್ರಕರಣಗಳಲ್ಲಿ ಆರೋಪಿ
ಬಂಧಿತನ ಮೇಲೆ ಬೆಳ್ತಂಗಡಿ ಸಹಿತ ವಿವಿಧ ಠಾಣೆಗಳಲ್ಲಿ ಹಲವಾರು ಪ್ರಕರಣಗಳು ದಾಖಲಾಗಿವೆ. ಆತನ ವಿರುದ್ಧ ಇದು ಮೂರನೇ ಗಾಂಜಾ ಪ್ರಕರಣ. ಎರಡು ಪ್ರಕರಣಗಳು ಬೆಳ್ತಂಗಡಿಯಲ್ಲಿ ಹಾಗೂ ಒಂದು ಪುಂಜಾಲಕಟ್ಟೆಯಲ್ಲಿ ದಾಖಲಾಗಿದೆ. ಪೊಲೀಸರ ಮೇಲೆ ಹಲ್ಲೆ ಹಾಗೂ ಕೌಟುಂಬಿಕ ವಿವಾದ ಸಂಬಂಧಿ ದೂರುಗಳು ಕೂಡ ಈತನ ಮೇಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.