ಡಿಜಿಪಿ ದತ್ತ ಬಿ.ಸಿ.ರೋಡ್‌ಗೆ; ಶರತ್ ಹತ್ಯೆ ಸ್ಥಳ ಪರಿಶೀಲನೆ
Team Udayavani, Jul 15, 2017, 10:41 AM IST
ಬಂಟ್ವಾಳ: ಬಿ.ಸಿ.ರೋಡಿಗೆ ಶುಕ್ರವಾರ ಆಗಮಿಸಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ ಕೆ.ಆರ್. ದತ್ತ ಅವರು ದುಷ್ಕರ್ಮಿಗಳಿಂದ ಹತನಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶರತ್ ಅವರ ಉದಯ ಲಾಂಡ್ರಿಯನ್ನು ಪರಿಶೀಲಿಸಿದರು. ಸಮೀಪದ ಅಂಗಡಿಯ ಪ್ರವೀಣ್ ಅವರಿಂದ ಪ್ರಕರಣದ ಮಾಹಿತಿ ಪಡೆದುಕೊಂಡರು. ಮಾಧ್ಯಮ ಪ್ರತಿನಿಧಿಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು ಬಳಿಕ ಲಾಂಡ್ರಿಯ ಒಳಗೆ ಹೋಗಿ, ಹೊರ ಪ್ರದೇಶವನ್ನು ವೀಕ್ಷಿಸಿದರು. ಆರೋಪಿಗಳು ದ್ವಿಚಕ್ರ ವಾಹನವನ್ನು ನಿಲ್ಲಿಸಿದ್ದ ಸ್ಥಳವನ್ನು ಅವರಿಗೆ ಎಸ್‌ಪಿ ಅವರು ತೋರಿಸಿದರು. ಯಾವು ದಿಕ್ಕಿನಿಂದ ಬಂದು ಪುನಃ ಹೇಗೆ ಹೋದರು ಎಂಬ ವಿವರಗಳನ್ನು ಹೇಳಿದರು.
ಇದಕ್ಕೂ ಮೊದಲು ಅವರು ಬೆಂಜನಪದವಿನಲ್ಲಿ ಜೂ. 21ರಂದು ಮಹಮ್ಮದ್ ಅಶ್ರಫ್ ಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪ್ರದೇಶ ಪರಿಶೀಲನೆ ಮಾಡಿದರು. ಅವರ ಜತೆಗೆ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಆಲೋಕ್ ಮೋಹನ್, ಪಶ್ಚಿಮ ವಲಯ ಐಜಿಪಿ ಹರಿಶೇಖರನ್, ಜಿಲ್ಲಾ ಎಸ್‌ಪಿ ಸುಧೀರ್ ಕುಮಾರ್ ರೆಡ್ಡಿ, ಹೆಚ್ಚುವರಿ ಎಸ್‌ಪಿ ವಿಷ್ಣುವರ್ಧನ್, ಬಂಟ್ವಾಳ ಉಪವಿಭಾಗ ಎಎಸ್‌ಪಿ ಡಾ| ಅರುಣ್, ಬಂಟ್ವಾಳ ವೃತ್ತ ನಿರೀಕ್ಷಕ ಬಿ.ಕೆ. ಮಂಜಯ್ಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.