ರಾಷ್ಟ್ರೀಯ ಧರ್ಮಸಂಸದ್‌ಗೆ ಕನ್ಯಾಡಿ ಸಿದ್ಧ: ನಳಿನ್‌

Team Udayavani, Sep 2, 2018, 9:42 AM IST

samsad.jpg

ಮಂಗಳೂರು: ಕನ್ಯಾಡಿ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದಲ್ಲಿ ಸೆ. 2 ಮತ್ತು 3ರಂದು ನಡೆಯುವ ರಾಷ್ಟ್ರೀಯ ಧರ್ಮಸಂಸದ್‌ನಲ್ಲಿ ಭಾಗಿಗಳಾಗಲು ದೇಶದ ವಿವಿಧ ಭಾಗಗಳಿಂದ ಸಾಧು ಸಂತರು ಆಗಮಿಸುತ್ತಿದ್ದು, ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ. 30 ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸಲಿದ್ದಾರೆ ಎಂದು ಸಂಸದ ಹಾಗೂ ರಾಷ್ಟ್ರೀಯ ಧರ್ಮ ಸಂಸದ್‌ ಸ್ವಾಗತ ಸಮಿತಿ ಗೌರವಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಉತ್ತರ ಭಾರತದಿಂದ 2 ಸಾವಿರಕ್ಕೂ ಅಧಿಕ ಸಾಧು ಸಂತರು ಪಾಲ್ಗೊಳ್ಳಲಿದ್ದಾರೆ. ಉಜಿರೆ, ಧರ್ಮಸ್ಥಳ ಮುಂತಾದೆಡೆ ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಸಾಧು ಸಂತರ ಭೋಜನ, ಉಪಾಹಾರಕ್ಕೆ ಪ್ರತ್ಯೇಕ ಅನ್ನಛತ್ರ ತೆರೆಯಲಾಗಿದೆ.  108 ಮಂದಿ ಸ್ವಾಮೀಜಿಗಳು ಮತ್ತು 9 ಮಂದಿ ಮುಖ್ಯ ಅತಿಥಿಗಳು ಕುಳಿತುಕೊಳ್ಳಲು ಆತ್ಮಾನಂದ ವೇದಿಕೆ ಸಿದ್ಧಗೊಂಡಿದೆ ಎಂದರು.

ಸೆ. 2ರಂದು ಸಂಜೆ 4 ಗಂಟೆಗೆ ಉಜಿರೆ ಜನಾರ್ದನ ದೇವಸ್ಥಾನದಿಂದ ಸಾಧು ಸಂತರನ್ನು, ಮಹಾಮಂಡ
ಲೇಶ್ವರರನ್ನು ಮತ್ತು ಮಠಾಧೀಶರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಶೋಭಯಾತ್ರೆಯಲ್ಲಿ ಶ್ರೀರಾಮ ಕ್ಷೇತ್ರಕ್ಕೆ
ಕರೆ ತರಲಾಗುವುದು. 5 ರಥದಲ್ಲಿ ಪ್ರಮುಖ ಸಾಧು ಸಂತರು ಇರಲಿದ್ದಾರೆ. ರಾತ್ರಿ 8 ಗಂಟೆಗೆ ಧರ್ಮ ಸಂಸದ್‌ನ ನಿರ್ಣಯಗಳನ್ನು ಸಂತ ಶ್ರೇಷ್ಠರು ಕೈಗೊಳ್ಳಲಿದ್ದಾರೆ ಎಂದು ನಳಿನ್‌ ಕುಮಾರ್‌ ವಿವರಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ, ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ, ಸಾರ್ವಜನಿಕರಿಗೆ ಕನ್ಯಾಡಿಯ ಸರಕಾರಿ ಶಾಲೆಯ ಮೈದಾನದಲ್ಲಿ ಅನ್ನದಾನ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ 1,000 ಸ್ವಯಂ ಸೇವಕರ ತಂಡ ನಿಯೋಜಿಸಲಾಗಿದೆ. ಮಂಗಳೂರಿನಿಂದ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಶಾಸಕ ಡಾ| ವೈ. ಭರತ್‌ ಶೆಟ್ಟಿ, ರಾಷ್ಟ್ರೀಯ ಧರ್ಮ ಸಂಸದ್‌ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಚಿತ್ತರಂಜನ್‌, ಸಹ ಸಂಚಾಲಕ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಕಾರ್ಯದರ್ಶಿ ವಸಂತ ಪೂಜಾರಿ, ಸಹ ಪ್ರಧಾನ ಕಾರ್ಯದರ್ಶಿ ನವೀನ್‌ ಸುವರ್ಣ ಉಪಸ್ಥಿತರಿದ್ದರು.

ಗಣ್ಯರ ಭೇಟಿ
ಶನಿವಾರ ಕ್ಷೇತ್ರಕ್ಕೆ ಶಾಸಕರಾದ ಸುನಿಲ್‌ ಕುಮಾರ್‌, ಹರೀಶ್‌ ಪೂಂಜಾ ಮತ್ತು ಹರೀಶ್‌ ಕುಮಾರ್‌ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಮುಖ್ಯಮಂತ್ರಿ ಉದ್ಘಾಟನೆ
3ರಂದು ಬೆಳಗ್ಗೆ 9.15ಕ್ಕೆ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ ದಶಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. 10.30ಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸುವರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವರಾದ ಪ್ರಕಾಶ್‌ ಜಾವಡೇಕರ್‌, ಡಿ.ವಿ. ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್‌, ಸಂಸದರಾದ ನಳಿನ್‌ ಕುಮಾರ್‌ ಕಟೀಲು, ಶೋಭಾ ಕರಂದ್ಲಾಜೆ, ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಪರಿಷತ್‌ ನಿರ್ದೇಶಕ ಡಾ| ಎಸ್‌.ಸಿ. ಶರ್ಮಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ  2ರಿಂದ ಸಂತರಿಂದದಿವ್ಯ ಸಂದೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಳಿನ್‌ ವಿವರಿಸಿದರು.

ಟಾಪ್ ನ್ಯೂಸ್

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

ಬಡ ದಂಪತಿಗೆ ಮಾಜಿ ಮೇಯರ್‌ ಸುಧೀರ್‌ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

4

Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.