ಜನ ಪ್ರೀತಿಯೇ ನನ್ನ ಸಂಪತ್ತು: ಡಾ| ಹೆಗ್ಗಡೆ


Team Udayavani, Dec 3, 2018, 12:23 PM IST

heggade-3-12.jpg

ಬೆಳ್ತಂಗಡಿ: ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ ಹಾಗೂ ಪೂರ್ವದ ಪುಣ್ಯದ ಫಲದಿಂದ ಹೆಗ್ಗಡೆ ಸ್ಥಾನ ಲಭಿಸಿದ್ದು, ಎಲ್ಲ ಅವಕಾಶಗಳನ್ನು ಬಳಸಿಕೊಂಡು ಜನರಿಗೆ ಸೇವೆ ನೀಡುತ್ತಿದ್ದೇವೆ. ಸಮಸ್ತ ಜನತೆ ತೋರಿಸುವ ಪ್ರೀತಿಯೇ ನನ್ನ ಪಾಲಿನ ಸಂಪತ್ತು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಧರ್ಮಸ್ಥಳದ ಲಕ್ಷದೀಪೋತ್ಸವದ ಮೊದಲ ದಿನವಾದ ರವಿವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಭಕ್ತರನ್ನುದ್ದೇಶಿಸಿ ಅವರು ಮಾತನಾಡಿದರು.

ಜನಸೇವೆಯ ಸಂದರ್ಭ ಹಿಂಜರಿಯಬಾರದು. ಅದರಂತೆ ನಾನು ಎಲ್ಲ ಕ್ಷೇತ್ರಗಳಲ್ಲೂ ಹೊಸ ಪ್ರಯೋಗಗಳನ್ನು ಮಾಡಿದ್ದು, ಅದಕ್ಕೆ ಕುಟುಂಬ ವರ್ಗ, ಕ್ಷೇತ್ರದ ಸಿಬಂದಿ ಹೆಗಲು ನೀಡಿದ್ದಾರೆ. ಜನತೆ ಅದನ್ನು ಒಪ್ಪಿಕೊಂಡು ನಡೆದಿದ್ದಾರೆ. ಎಲ್ಲ ಯೋಜನೆಗಳನ್ನು ಮೊದಲು ಬೆಳ್ತಂಗಡಿಯಲ್ಲೇ ಅನುಷ್ಠಾನಗೊಳಿಸಿದ್ದು, ಇಂದು ಎಲ್ಲರೂ ಅಸೂಯೆಪಡುವ ರೀತಿಯಲ್ಲಿ ತಾಲೂಕು ಅಭಿವೃದ್ಧಿಯತ್ತ ಮುನ್ನಡೆದಿದೆ ಎಂದರು. ಜಾತಿ, ಧರ್ಮದ ಭೇದವಿಲ್ಲದೆ ಸಂಘಟಿತರಾಗಿ ದುಡಿಯುವುದೇ ಯಶಸ್ಸಿನ ಲಕ್ಷಣ. ಕ್ಷೇತ್ರದ ಮೇಲಿನ ಭಕ್ತಿಯಿಂದ ಎಲ್ಲ ವರ್ಗದ ಜನರೂ ಬೇರೆ ಬೇರೆ ರೀತಿಯಲ್ಲಿ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುವುದಕ್ಕೆ ಮುಂದೆ ಬರುತ್ತಿದ್ದಾರೆ ಎಂದರು.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ, ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ, ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ಅತಿಥಿಗಳಾಗಿದ್ದರು. ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್‌, ಸುಪ್ರಿಯಾ ಹರ್ಷೇಂದ್ರ ಕುಮಾರ್‌, ಡಾ| ಬಿ. ಯಶೋವರ್ಮ ಉಪಸ್ಥಿತರಿದ್ದರು. ಪಾದಯಾತ್ರೆ ಸಮಿತಿ ಸಂಚಾಲಕ ಕೆ. ಪ್ರತಾಪಸಿಂಹ ನಾಯಕ್‌ ಸ್ವಾಗತಿಸಿದರು. ಶ್ರೀನಿವಾಸ ರಾವ್‌ ನಿರ್ವಹಿಸಿದರು. ಉಜಿರೆ ದೇವಸ್ಥಾನದಿಂದ ಆರಂಭಗೊಂಡ ಪಾದಯಾತ್ರೆಯಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದರು.

ವಸ್ತು ಪ್ರದರ್ಶನ ಉದ್ಘಾಟನೆ
ಲಕ್ಷದೀಪೋತ್ಸವ ಸಂದರ್ಭ ಪ್ರೌಢಶಾಲಾ ವಠಾರದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ರವಿವಾರ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಮಂಗಳೂರಿನ ಶೋಭಾಕರ ಬಲ್ಲಾಳ್‌, ಕೆ. ರಾಜವರ್ಮ ಬಲ್ಲಾಳ್‌ ಮತ್ತು ನಿವೃತ್ತ ಪ್ರಾಂಶುಪಾಲ ಎ. ರಾಜೇಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಪ್ರದರ್ಶನದಲ್ಲಿ ಸರಕಾದ ವಿವಿಧ ಇಲಾಖೆಗಳ ಮಳಿಗೆಗಳು ಹಾಗೂ ಕೃಷಿ, ವಾಣಿಜ್ಯ, ಕೈಗಾರಿಕೆ, ಉದ್ಯಮ, ಗ್ರಾಮೀಣ ಗುಡಿಕೈಗಾರಿಕೆಗೆ ಸಂಬಂಧಪಟ್ಟ 300ಕ್ಕೂ ಮಿಕ್ಕಿ ಮಳಿಗೆಗಳಿದ್ದು, ಪ್ರವೇಶ ಉಚಿತ. ಲಕ್ಷದೀಪೋತ್ಸವದಲ್ಲಿ ರವಿವಾರ ರಾತ್ರಿ ಹೊಸಕಟ್ಟೆ ಉತ್ಸವ ನಡೆಯಿತು. ಮೊದಲ ದಿನವೇ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ಅಧಿಕವಾಗಿತ್ತು.

ಟಾಪ್ ನ್ಯೂಸ್

Gautam Adani on work-life balance

Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್‌ ಅದಾನಿ

KTR Formula Race Case Abolished: High Court Reserves Verdict

KTR ಫಾರ್ಮುಲಾ ರೇಸ್‌ ಕೇಸ್‌ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Uppinangady: ತ್ಯಾಜ್ಯ ಸರಿಯಾಗಿ ವಿಂಗಡಿಸಿ ಕೊಡದಿದ್ದರೆ ಕ್ರಮಕ್ಕೆ ಸದಸ್ಯರ ಸಲಹೆ

Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು

Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು

1

Bantwal: ಅಭಿವೃದ್ಧಿ ಕಾರ್ಯಕ್ಕಿಂತಲೂ ಸಮಸ್ಯೆಗಳ ಸರಮಾಲೆ ಪ್ರಸ್ತಾವಿಸಿದ ಸಾರ್ವಜನಿಕರು

1-ptt

Puttur: ಮುಖ್ಯ ರಸ್ತೆಯ ಚರಂಡಿ ಮೇಲಿನ ಪೈಪ್‌ನಲ್ಲಿ ಸಿಲುಕಿದ ಮಹಿಳೆ!

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2025; May the mantra of peace and coexistence resonate throughout the world

Editorial; ಜಗತ್ತಿನೆಲ್ಲೆಡೆ ಅನುರಣಿಸಲಿ ಶಾಂತಿ, ಸಹಬಾಳ್ವೆಯ ಮಂತ್ರ

Gautam Adani on work-life balance

Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್‌ ಅದಾನಿ

KTR Formula Race Case Abolished: High Court Reserves Verdict

KTR ಫಾರ್ಮುಲಾ ರೇಸ್‌ ಕೇಸ್‌ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.