ಇಂದಿನಿಂದ ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ವಸ್ತುಪ್ರದರ್ಶನ, ಅಂಗಡಿ ಮಳಿಗೆಗಳು; ವಿದ್ಯುತ್‌ ದೀಪಗಳಿಂದ ಅಲಂಕಾರ

Team Udayavani, Nov 22, 2019, 1:45 AM IST

pp-62

ಬೆಳ್ತಂಗಡಿ: ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂಭ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಸಜ್ಜುಗೊಂಡಿದೆ. ನಾಡಿನ ಪವಿತ್ರ ಕ್ಷೇತ್ರ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನ. 22ರಿಂದ 26ರ ವರೆಗೆ ನಡೆಯಲಿರುವ ದೀಪೋತ್ಸವದಲ್ಲಿ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.

ಈಗಾಗಲೇ ದೇವಸ್ಥಾನ, ಬೀಡು, ರಸ್ತೆಗಳು, ವಸತಿಗೃಹ ಸಹಿತ ರಸ್ತೆಗಳು, ಸುತ್ತಮುತ್ತಲಿನ ಕಟ್ಟಡಗಳು ವಿದ್ಯುದ್ದೀಪಗಳಿಂದ ಅಲಂಕಾರಗೊಂಡು, ಸಾಲು ಸಾಲು ವಿಭಿನ್ನ ಮಳಿಗೆಗಳಿಂದ ಜನಾಕರ್ಷಣೆ ಪಡೆದಿದೆ.
ನೇತ್ರಾವತಿ ಸ್ನಾನಘಟ್ಟದಿಂದ ಮುಖ್ಯ ದ್ವಾರದವರೆಗೆ ವಿದ್ಯುದ್ದೀಪಗಳು, ರಸ್ತೆ ಕೆರೆಗಳಲ್ಲಿ ಆಲಂಕಾರಿಕ ವಸ್ತುಗಳನ್ನು ಜೋಡಿಸಲಾಗಿದೆ. ಮುಖ್ಯದ್ವಾರ ಸಹಿತ ದೇವಸ್ಥಾನದ ಸಮೀಪದವರೆಗೂ ಸಾಲು ಸಾಲು ವಿವಿಧ ಬಗೆಯ ತಿಂಡಿ-ತಿನಿಸು, ಬಟ್ಟೆಬರೆಗಳು, ಕಾಫಿ – ಟೀ ಸ್ಟಾಲ್‌ ಮಳಿಗೆ ಗಳು ಭಕ್ತರನ್ನು ಸೆಳೆಯುವಂತಿದೆ.

ಧರ್ಮಸ್ಥಳ ಪ್ರೌಢಶಾಲೆ ಮುಂಭಾಗದ ಆವರಣದಲ್ಲಿ ರಾಷ್ಟ್ರಮಟ್ಟದ 42ನೇ ವಸ್ತುಪ್ರದರ್ಶನ ಮಳಿಗೆಗಳು ಸಜ್ಜು ಗೊಂಡಿವೆ. ಲಕ್ಷ ದೀಪೋತ್ಸವ ಪ್ರಯುಕ್ತ ಸಾವಿರಾರು ಸ್ವಚ್ಛತಾ ಸೇನಾನಿಗಳು ಕ್ಷೇತ್ರದ ಸ್ವತ್ಛತೆ ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ದೇವಸ್ಥಾನದ ಮುಂಭಾಗ ವಿವಿಧ ವಿನ್ಯಾಸವನ್ನು ಒಳಗೊಂಡಿರುವ ವಿದ್ಯುದ್ದೀಪಗಳನ್ನು ಜೋಡಿಸಲಾಗಿದೆ. ಗೂಡುದೀಪಾಕೃತಿಯ ಬಣ್ಣ ಬಣ್ಣದ ಬಲುºಗಳು ಮನಮೋಹಕವಾಗಿವೆ. ನಾಡಿನೆಲ್ಲೆಡೆಯಿಂದ ಬರುವ ಭಕ್ತರ ಸೇವೆಗಾಗಿ ಕ್ಷೇತ್ರದ ಸಿಬಂದಿ ಪೊಲೀಸರು, ವಿದ್ಯಾರ್ಥಿಗಳು, ಸ್ವತ್ಛತಾ ಸೇನಾನಿಗಳು, ಸ್ವಯಂ ಸೇವಕರು, ಗೃಹರಕ್ಷಕ ದಳ ಸರ್ವ ರೀತಿಯಲ್ಲಿ ತಯಾರಿ ನಡೆಸಿದೆ.

ಲಕ್ಷದೀಪೋತ್ಸವ ಸಂಭ್ರಮ ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧ ಕಡೆಗಳಿಂದ ಬರುವ ಭಕ್ತರನ್ನು ಕರೆತರಲು ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಶುಕ್ರವಾರ ಅಪರಾಹ್ನ 3 ಗಂಟೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳಕ್ಕೆ ಸಾವಿರಾರು ಮಂದಿ ಪಾದಯಾತ್ರಿಗಳು ಆಗಮಿಸಲಿದ್ದಾರೆ.

197 ಮಳಿಗೆಗಳು
ರಾಜ್ಯಮಟ್ಟದ 42ನೇ ವಸ್ತುಪ್ರದರ್ಶನದಲ್ಲಿ ಜ್ಞಾನ-ವಿಜ್ಞಾನ ಸಮ್ಮಿಳಿತದ 197 ವಿವಿಧ ಪ್ರಕಾರದ ಮಳಿಗೆಗಳು ಆಕರ್ಷಿಸಲಿವೆ. ಸರಕಾರಿ ಮಳಿಗೆಗಳು, ಎಲೆಕ್ಟ್ರಾನಿಕ್‌ ವಸ್ತುಗಳು, ಪುಸ್ತಕ ಮಳಿಗೆ, ಸಿರಿ ಉತ್ಪನ್ನಗಳು, ತರಕಾರಿ ಬೀಜಗಳು, ರುಡ್ಸೆಟ್‌ ಮಳಿಗೆ, ಎಸ್‌ಕೆಡಿಆರ್‌ ಡಿಪಿ ಮಳಿಗೆ, ಕೃಷಿ ಉಪಕರಣಗಳು, ನಾಟಿ ಔಷಧ, ಕರಕುಶಲ ವಸ್ತು, ಗೋಬರ್‌ ಗ್ಯಾಸ್‌, ವಸ್ತ್ರ ಮಳಿಗೆಗಳು, ವಾಹನ ಮಳಿಗೆ, ನೀರು ಶುದ್ಧೀಕರಣ ಸಹಿತ ವಿವಿಧ ಬಗೆಯ ಮಳಿಗೆಗಳು ಸಿದ್ಧಗೊಂಡಿವೆ.

ಸರ್ವಸಿದ್ಧತೆ
ಲಕ್ಷದೀಪೋತ್ಸವ ಸಂದರ್ಭ ಬರುವ ಭಕ್ತರಿಗೆ ಊಟದ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಇತ್ಯಾದಿಗಳ ಸಿದ್ಧತೆ ಪೂರ್ಣಗೊಳಿಸಲಾಗಿದೆ. ಸ್ವತ್ಛತಾ ಸೇನಾನಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಭಕ್ತರಿಗೆ ಯಾವುದೇ ಕೊರತೆ ಬಾರದ
ರೀತಿಯಲ್ಲಿ ಸಿದ್ಧಗೊಳಿಸಲಾಗಿದೆ.
– ಹರ್ಷೇಂದ್ರ ಕುಮಾರ್‌, ಶ್ರೀಕ್ಷೇತ್ರ ಧರ್ಮಸ್ಥಳದ ಆಡಳಿತ ಮೇಲುಸ್ತುವಾರಿ

ಟಾಪ್ ನ್ಯೂಸ್

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.