ಬಾಹುಬಲಿಯ ತ್ಯಾಗ ಬದುಕಿಗೆ ಮಾದರಿ: ನಟ ರಮೇಶ್
Team Udayavani, Feb 10, 2019, 12:30 AM IST
ಬೆಳ್ತಂಗಡಿ: ಭಗವಾನ್ ಬಾಹುಬಲಿ ಸ್ವಾಮಿಯು ಜಗತ್ತಿಗೆ ತೋರಿದ ತ್ಯಾಗವನ್ನು ಎಲ್ಲರೂ ಬದುಕಿ ನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಚಿತ್ರ ನಟ ರಮೇಶ್ ಅರವಿಂದ್ ಅವರು ಹೇಳಿದರು.
ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ರತ್ನಗಿರಿ ಬೆಟ್ಟದಲ್ಲಿ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಬಾಹುಬಲಿ ಚರಿತೆ 3ಡಿ ಪ್ರೊಜೆಕ್ಷನ್ ಶೋವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಾಹುಬಲಿಯ ತ್ಯಾಗವನ್ನು ನೆನಪಿಸುವಂತೆ ಇಂತಹ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸ ಲಾಗುತ್ತದೆ. ನಮ್ಮ ಯೋಚನೆ, ಪ್ರೀತಿಯೂ ಅಷ್ಟೇ ಎತ್ತರಕ್ಕೆ ಬೆಳೆಯ ಬೇಕಿದೆ ಎಂದರು.
ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವೆ ಡಾ| ಜಯಮಾಲಾ ಅವರು ಮಾತನಾಡಿ, ಧರ್ಮಸ್ಥಳ ಕಲೆ-ಕಲಾವಿದರಿಗೆ ನೆಲೆ ಕೊಟ್ಟ ಭೂಮಿ. ಇಲ್ಲಿ ಕಲಾಸೇವೆ ಮಾಡಿದವರು ಉನ್ನತಿಗೇರಿದ್ದಾರೆ ಎಂದು ತಿಳಿಸಿದರು. ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಅತಿಥಿಗಳನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ| ಎಸ್. ಪ್ರಭಾಕರ್ ಅವರು ವಾಸ್ತುಶಿಲ್ಪಿ ರೆಂಜಾಳ ಗೋಪಾಲಕೃಷ್ಣ ಶೆಣೈ ಅವರ ಮೂರ್ತಿ ಅನಾವರಣ ಗೊಳಿಸಿದರು.
ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಕ್ಷೇತ್ರದ ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹಷೇìಂದ್ರ ಕುಮಾರ್, ಸುಪ್ರಿಯಾ ಹಷೇìಂದ್ರ ಕುಮಾರ್, ಡಿ. ರಾಜೇಂದ್ರ ಕುಮಾರ್, ಶ್ರದ್ಧಾ ಅಮಿತ್ ಹಾಗೂ ಡಾ| ಹೆಗ್ಗಡೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಪ್ರೊ| ಎಂ. ರಾಮಚಂದ್ರ ಸ್ವಾಗತಿಸಿದರು.
ಆಕರ್ಷಕ 3ಡಿ ಶೋ
ಬಾಹುಬಲಿಯ ಚರಿತ್ರೆಯನ್ನೊಳಗೊಂಡ ಧ್ವನಿ ಹಾಗೂ ಬೆಳಕಿನ 3ಡಿ ಪೊ›ಜೆಕ್ಷನ್ ಶೋ ಅತ್ಯಂತ ಆಕರ್ಷಕವಾಗಿ ಮೂಡಿ ಬಂತು. ಕ್ಷೇತ್ರದ ಶ್ರೇಯಸ್ ಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಸಂಸ್ಥೆ ಇದನ್ನು ನಿರ್ಮಾಣಗೊಳಿಸಿದ್ದು, ಬಾಹುಬಲಿಯ ವಿಗ್ರಹದ ಮೇಲೆಯೇ 17 ನಿಮಿಷಗಳ ಫೆ. 18ರ ವರೆಗೆ ಪ್ರತಿದಿನ ರಾತ್ರಿ 7ರಿಂದ ಮೂರು ಶೋ ಪ್ರದರ್ಶನಗೊಳ್ಳಲಿದೆ.
ಇಂದು ಕ್ಷುಲ್ಲಕ ದೀಕ್ಷೆ
ಬೆಳ್ತಂಗಡಿ: ಮಹಾಮಸ್ತಕಾಭಿಷೇಕದ 2ನೇ ದಿನವಾದ ಫೆ. 10ರಂದು ಬೆಳಗ್ಗೆ 8ಕ್ಕೆ ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ಆಚಾರ್ಯ ಶ್ರೀ 108 ಪುಷ್ಪ ದಂತಸಾಗರ ಮುನಿಮಹಾರಾಜರಿಂದ ಶ್ರೀ ಸತೀಶ್ ಜೀ ಬೈಯಾಜಿ, ಶ್ರೀ ಪೂರನ್ ಬೈಯ್ನಾಜಿ ಹಾಗೂ ಶ್ರೀಪ್ರಭು ಬೈಯ್ನಾಜಿ ಅವರಿಗೆ ಕ್ಷುಲ್ಲಕ ದೀಕ್ಷಾ ಮಹಾಮಹೋತ್ಸವ ನೆರವೇರಲಿದೆ.
ಸಂಜೆ 4ಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ಜನ ಮಂಗಲ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. ರಾಜ್ಯ ವಸತಿ ಸಚಿವ ಎನ್. ನಾಗರಾಜು ಉದ್ಘಾಟಿಸಲಿದ್ದು, ಅಂಗವಿಕಲರಿಗೆ ಗಾಲಿ ಕುರ್ಚಿಗಳನ್ನು ವಿತರಿಸಲಿದ್ದಾರೆ. ಅತಿಥಿಗಳಾಗಿ ರಾಜ್ಯ ಗೃಹ ಸಚಿವ ಎಂ.ಬಿ. ಪಾಟೀಲ್, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕ ಹರೀಶ್ ಪೂಂಜ, ಜಿ.ಪಂ.ಸದಸ್ಯ ಕೊರಗಪ್ಪ ನಾಯ್ಕ, ತಾ.ಪಂ.ಸದಸ್ಯೆ ಧನಲಕ್ಷ್ಮೀ ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜೆ 7ಕ್ಕೆ ಚಿತ್ರರಂಗದ ಪ್ರಸಿದ್ಧ ಗಾಯಕರಿಂದ ಗಾನ ತರಂಗ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮ ಫೆ. 10ರಂದು ಬಾಹುಬಲಿ ಬೆಟ್ಟದಲ್ಲಿ ಬೆಳಗ್ಗೆ 8ಕ್ಕೆ ನಿತ್ಯವಿಧಿ ಸಹಿತ ವಾಸ್ತು ಪೂಜಾ ವಿಧಾನ, ನವಗ್ರಹ ಮಹಾಶಾಂತಿ, ದಿಕಾ³ಲಕ ಬಲಿ, ಯಜ್ಞ ಶಾಲೆಯಲ್ಲಿ ಯûಾರಾಧನೆ ಪೂರ್ವಕ ಯಕ್ಷ ಪ್ರತಿಷ್ಠೆ, ಮಧ್ಯಾಹ್ನ 12.35ಕ್ಕೆ ಧ್ವಜಾರೋಹಣ ವಿಧಿ, 54 ಕಲಶಗಳಿಂದ ಪಾದಾಭಿಷೇಕ, ಅಪರಾಹ್ನ 3ರಿಂದ ಶ್ರೀ ಪೀಠ ಯಂತ್ರಾರಾಧನೆ, ಸಂಜೆ ಭೇರಿತಾಡನ, ಧ್ವಜಪೂಜೆ, ಶ್ರೀ ಬಲಿವಿಧಾನ, ಮಹಾಮಂಗಳಾರತಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Karkala: ಇಳಿಜಾರಿನಲ್ಲಿ ಯು-ಟರ್ನ್; ಅತ್ತೂರು ರಸ್ತೆಯಲ್ಲಿ ಅಪಾಯ
BBK11: ಸತ್ಯಕ್ಕೆ ಸೋಲಿಲ್ಲ.. ರಜತ್ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು
Kundapura: ಚೋರಾಡಿ; ಕರೆ ಬಂದರೆ ಬೆಟ್ಟ ಹತ್ತಬೇಕು!
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.