ನಾಳೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತಿ ಆಚರಣೆ
Team Udayavani, Oct 23, 2021, 5:18 AM IST
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ ಆಚರಣೆ ಅ. 24ರಂದು ರವಿವಾರ ಸರಳವಾಗಿ ನಡೆಯಲಿದೆ.
ಆ ದಿನ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಲಿದೆ. ಸಂಜೆ 5ಕ್ಕೆ ಮಹೋತ್ಸವ ಸಭಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ತುಮಕೂರಿನ ನಿವೃತ್ತ ಜಿಲ್ಲಾಧಿಕಾರಿ ಸಿ. ಸೋಮಶೇಖರ್ ಅಭಿನಂದನ ಭಾಷಣ ಮಾಡುವರು. ಆ ಬಳಿಕ ಡಾ| ಹೆಗ್ಗಡೆಯವರು ಮುಂದಿನ ವರ್ಷದ ಹೊಸ ಯೋಜನೆಗಳನ್ನು ಪ್ರಕಟಿಸುವರು.
ಹಿರಿಯ ನೌಕರರಾದ ಶುಭಚಂದ್ರರಾಜ ಮತ್ತು ತೋಟಗಾರಿಕಾ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಪೂಜಾರಿ ಅವರನ್ನು ಹೆಗ್ಗಡೆಯವರು ಸಮ್ಮಾನಿಸುವರು.
ಇದನ್ನೂ ಓದಿ:ಕೇರಳದಲ್ಲಿ ಇನ್ನೂ 2 ವಾರ ಮಳೆ; 9 ಆಣೆಕಟ್ಟಿಗೆ ರೆಡ್, 7 ಜಿಲ್ಲೆಗೆ ಯೆಲ್ಲೋ ಅಲರ್ಟ್
ಅಪೂರ್ವ ಸಾಧನೆಗಳ ಸರದಾರ 1968ರ ಅ. 24ರಂದು ನೆಲ್ಯಾಡಿಬೀಡಿನಲ್ಲಿ 21ನೇ ಧರ್ಮಾಧಿಕಾರಿಯಾಗಿ ತನ್ನ 20ನೇ ವರ್ಷದಲ್ಲಿ ಪಟ್ಟಾಭಿಷಿಕ್ತರಾದ ಡಾ| ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ. ವಿನೂತನ ಯೋಜನೆಗಳ ಮೂಲಕ ಡಾ| ಹೆಗ್ಗಡೆಯವರ ಚಿಂತನ-ಮಂಥನದಿಂದ ಯಶಸ್ವಿಯಾಗಿ ಲೋಕಕಲ್ಯಾಣಕ್ಕಾಗಿ ಅನೇಕಾನೇಕ ಸೇವಾ ಕಾರ್ಯಗಳು ಮೂಡಿಬಂದಿವೆ. ಅವರ ಕೆಲವುಯೋಜನೆಗಳಿಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಮಾನ್ಯತೆ ನೀಡಿ ಅನುಷ್ಠಾನಗೊಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.