ಓಡಂತರ್ಯ: ಬರಿದಾಯಿತು ಗೌರಿ ಹೊಳೆ
Team Udayavani, Apr 12, 2018, 1:07 PM IST
ಸವಣೂರು: ಬೇಸಗೆ ಬಂತೆಂದರೆ ಎಲ್ಲೆಡೆಯೂ ನೀರಿಗಾಗಿ ಹಾಹಾಕಾರ ಕೇಳಿಬರುವುದು ಸಾಮಾನ್ಯ. ಸವಣೂರು ಗ್ರಾ.ಪಂ. ವ್ಯಾಪ್ತಿಯ ಪುಣ್ಚಪ್ಪಾಡಿ ಗ್ರಾಮದ ಓಡಂತರ್ಯದಲ್ಲಿ ಹರಿಯುತ್ತಿರುವ ಗೌರಿ ಹೊಳೆಯಲ್ಲಿ ಇಲ್ಲಿನ ನಿವಾಸಿಗಳಿಗೆ ಕೃಷಿ ಹಾಗೂ ಕುಡಿಯುವ ನೀರಿನ ಉದ್ದೇಶಕ್ಕಾಗಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಜಾಕ್ವೆಲ್ ನಿರ್ಮಾಣ ಮಾಡಲಾಗಿದೆ.
ಆದರೆ ಈಗ ಹೊಳೆಯ ನೀರು ಸಂಪೂರ್ಣವಾಗಿ ಬತ್ತಿಹೋಗಿದ್ದು, ಜಾಕ್ವೆಲ್ನಲ್ಲೂ ನೀರಿಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ. ಗುತ್ತಿಗೆದಾರರು ನಿಗದಿತ ಪ್ರಮಾಣದಲ್ಲಿ ಆಳ ಮಾಡದೆ ಜಾಕ್ವೆಲ್ ನಿರ್ಮಾಣ ಮಾಡಿರುವುದರಿಂದ ನೀರಿನ ಸಮಸ್ಯೆ ಎದುರಾಗಿದೆ.
ಎಂಜಿನಿಯರ್ ನಿರ್ಲಕ್ಷ್ಯ
ಗುತ್ತಿಗೆದಾರರು ಜಾಕ್ವೆಲ್ ನಿರ್ಮಾಣ ಕಾಮಗಾರಿ ಮಾಡುವ ಸಮಯದಲ್ಲಿ ಸರಿಯಾಗಿ ಆಳ ಮಾಡಿಲ್ಲ. ಕಲ್ಲು ಸಿಕ್ಕಿದ್ದು, ಅದನ್ನು ಒಡೆಯದೆ ಹಾಗೇ ಬಿಟ್ಟಿದ್ದಾರೆ. ಇದರಿಂದ ಭವಿಷ್ಯದಲ್ಲಿ ಸಮಸ್ಯೆಯಾಗಲಿದೆ ಎಂಬುದನ್ನು ಇಲಾಖೆ ಎಂಜಿನಿಯರ್ ಗಮನಕ್ಕೆ ತಂದಿದ್ದೇವೆ. ಆದರೆ ಅವರು ಕಾಮಗಾರಿಯ ಸ್ಥಳಕ್ಕೆ ಬಾರದೇ ನಿರ್ಲಕ್ಷ್ಯ ವಹಿಸಿದ್ದರಿಂದ ಈ ಸಮಸ್ಯೆಯಾಗಿದೆ ಎಂದು ಹೇಳುತ್ತಾರೆ ಗ್ರಾ.ಪಂ. ಸದಸ್ಯ ನಾಗೇಶ್ ಓಡಂತರ್ಯ.
ಕೊಳವೆ ಬಾವಿ ಕೊರೆಯಿಸಿ
ಇನ್ನು ಈ ಜಾಕ್ವೆಲ್ ನಂಬಿದರೆ ಕಷ್ಟ. ಇಲ್ಲಿ ಕೊಳವೆ ಬಾವಿ ಕೊರೆಯಿಸಿದರೆ ಮಾತ್ರ ಪರಿಹಾರ ಸಾಧ್ಯ. ಎಂಜಿನಿಯರ್ ನಿರ್ಲಕ್ಷ್ಯದಿಂದ ಈ ಸಮಸ್ಯೆಯಾಗಿದೆ ಎನ್ನುತ್ತಾರೆ ಧನರಾಜ್.
ಜಾಕ್ವೆಲ್ ನಂಬಿ ಕೆಟ್ಟೆವು
ಹೊಳೆಯಲ್ಲಿ ನಿರ್ಮಿಸಿದ ಜಾಕ್ವೆಲ್ ನಂಬಿ ನಾವು ಸ್ವತಃ 30 ಸಾವಿರ ರೂ. ಖರ್ಚು ಮಾಡಿ ಪೈಪ್ ಇತ್ಯಾದಿಗಳನ್ನು ಅಳವಡಿಸಿದ್ದೇವೆ. ಆದರೆ ಈಗ ನೀರಿಲ್ಲದೆ ಪರಿತಪಿಸುವಂತಾಗಿದೆ ಎನ್ನುತ್ತಾರೆ ಇಲ್ಲಿನ ಬಳಕೆದಾರರು.
ಪ್ರವೀಣ್ ಚೆನ್ನಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.