Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Team Udayavani, Nov 22, 2024, 1:08 AM IST
ಮಂಗಳೂರು: ರಾಜ್ಯ ದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿದಾಗ ಮಾತ ನಾಡುವವರು ಕೇಂದ್ರ ಸರಕಾರ ರದ್ದು ಮಾಡಿದ್ದರ ಬಗ್ಗೆ ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ 5.80 ಕೋಟಿ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿರುವುದಾಗಿ ಘೋಷಿಸಿದ್ದರೂ ಈ ಬಗ್ಗೆ ಯಾಕೆ ಮಾತನಾಡುತ್ತಿಲ್ಲ? ರಾಜ್ಯದಲ್ಲಿ ತೆರಿಗೆ ಕಟ್ಟು ವವರು ಹಾಗೂ ಸರಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿ ದ್ದರೆ ಅದನ್ನು ರದ್ದು ಮಾಡಬಾರದಾ ಎಂದು ಪ್ರಶ್ನಿಸಿದರು.
ರಾಜ್ಯದ ಕೆಲವೆಡೆ ಶೇ.80, ಇನ್ನೂ ಕೆಲವೆಡೆ ಶೇ. 90ರಷ್ಟು ಬಿಪಿಎಲ್ ಕಾರ್ಡ್‌ಗಳಿವೆ. ಅರ್ಹತೆ ಆಧಾರದಲ್ಲಿ ಅಷ್ಟು ಬಿಪಿಎಲ್ ನೀಡಲು ಸಾಧ್ಯವೇ ಇಲ್ಲ. ಅನರ್ಹತೆ ಇರುವ ಕಾರ್ಡ್ ಗಳನ್ನು ರದ್ದು ಮಾಡಬೇಕಿದೆ. ತಾಂತ್ರಿಕ ಕಾರಣಗಳಿಂದ ಅರ್ಹರ ಶೇ.5-10ರಷ್ಟು ಬಿಪಿಎಲ್ ಕಾರ್ಡ್ ರದ್ದಾಗುವ ಸಾಧ್ಯತೆ ಇರುತ್ತದೆ. ಅದನ್ನು ಸರಿಪಡಿಸಲು ಮುಖ್ಯಮಂತ್ರಿ ಸೂಚನೆ ನೀಡಿದ್ದು, ಅರ್ಹರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು.
ಗೃಹಲಕ್ಷ್ಮಿಗೂ ಪಡಿತರ ಚೀಟಿಗೂ ಸಂಬಂಧವಿಲ್ಲ. ತೆರಿಗೆ ಕಟ್ಟುವವರಿಗೆ ಗೃಹಲಕ್ಷ್ಮಿ ನೀಡಲಾಗುತ್ತಿಲ್ಲ. ಇತರ ಎಪಿಎಲ್ ಕಾರ್ಡ್‌ನವ ರಿಗೂ ಗೃಹಲಕ್ಷ್ಮಿ ಹಣ ಸಿಗಲಿದೆ ಎಂದರು.
ನಬಾರ್ಡ್‌ನಿಂದ ರಾಜ್ಯಕ್ಕೆ 2,500 ಕೋ. ರೂ. ಕಡಿತವಾಗಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಇಷ್ಟು ಗಂಭೀರ ವಿಚಾರ ಬಗ್ಗೆ ಯಾಕೆ ಮಾತ ನಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಸರಕಾರಿ ಆಸ್ಪತ್ರೆಗಳ ಸೇವಾ ಶುಲ್ಕವನ್ನು ಬಹಳ ವರ್ಷಗಳ ಬಳಿಕ ಅಲ್ಪ ಪ್ರಮಾಣದಲ್ಲಿ ಏರಿಸಲಾಗಿದೆ. ಆ ಹಣವನ್ನು ಆಸ್ಪತ್ರೆಯ ಶುಚಿತ್ವ ಸಹಿತ ಇತರ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುತ್ತಿದೆ. ಅದಕ್ಕೂ ಗ್ಯಾರಂಟಿ ಯೋಜನೆಯೊಂದಿಗೆ ಸಂಬಂಧ ಕಲ್ಪಿಸುವುದಕ್ಕೆ ಏನು ಹೇಳಬೇಕೋ ಗೊತ್ತಾಗುತ್ತಿಲ್ಲ ಎಂದರು.
ಎರಡು ಕ್ಷೇತ್ರಗಳಲ್ಲಿ ಗೆಲುವು
ರಾಜ್ಯದ ಮೂರೂ ಕ್ಷೇತ್ರಗಳಲ್ಲೂ ಉತ್ತಮ ಸ್ಪರ್ಧೆ ನೀಡಿದ್ದು, ಮೂರರಲ್ಲೂ ಗೆಲ್ಲುವ ಅವಕಾಶ ಇದೆ. ಆದರೆ ಎರಡು ಕ್ಷೇತ್ರಗಳಲ್ಲಿ ಗೆಲುವು ಖಚಿತ ಎಂದರು.
ನಕ್ಸಲ್ ವಿರುದ್ಧ ಕ್ರಮ
ನಕ್ಸಲ್ ಚಟುವಟಿಕೆ ಗಂಭೀರ ವಿಚಾರ. ಈ ಹಿಂದೆ ನಕ್ಸಲ್‌ವಾದಿಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಅನೇಕ ಸರಕಾರಗಳಿಂದ ನಡೆದಿದೆ. ಈಗ ಉದ್ಭವಿಸಿರುವ ಸಮಸ್ಯೆಯನ್ನು ಗೃಹ ಇಲಾಖೆ ಸೂಕ್ತವಾಗಿ ನಿಭಾಯಿಸುತ್ತಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ತರಬೇಕಾದ ಅಗತ್ಯವಿದೆ. ಕಾರ್ಕಳದಲ್ಲಿ ಇತ್ತೀಚೆಗೆ ನಡೆದ ಎನ್‌ಕೌಂಟರ್ ಉದ್ದೇಶಪೂರ್ವಕವಾದುದಲ್ಲ. ಅದೊಂದು ಅನಿವಾರ್ಯ ಕ್ರಮವಾಗಿತ್ತು ಎಂದು ಸಚಿವ ದಿನೇಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.