ಶಿಸ್ತುಬದ್ಧ ಜೀವನ ವ್ಯಕ್ತಿತ್ವದ ಪ್ರತಿಬಿಂಬ:ಶುಭಾ ಬಾಳಿಗ
Team Udayavani, Jul 19, 2017, 2:30 AM IST
ಕೊಡಿಯಾಲ್‌ಬೈಲ್: ನಾಯಕ ಸ್ಥಾನದಲ್ಲಿರುವವರು ಆತ್ಮ ವಿಶ್ವಾಸ, ಸಕಾರಾತ್ಮಕ ಚಿಂತನೆ, ಶಿಸ್ತುಬದ್ಧತೆ, ಪ್ರಾಮಾಣಿಕ ಸನ್ನಡತೆಗಳಿಂದ ಸಾಂಘಿಕವಾಗಿ ಶ್ರಮಿಸಬಲ್ಲ ವ್ಯಕ್ತಿತ್ವವನ್ನು ಹೊಂದಿರಬೇಕು. ಶಿಸ್ತುಬದ್ಧ ಜೀವನ ವ್ಯಕ್ತಿತ್ವದ ಪ್ರತಿಬಿಂಬವಾಗಿದೆ ಎಂದು ನ್ಯಾಯವಾದಿ ಶುಭಾ ಬಾಳಿಗ ಹೇಳಿದರು.
ಕೆನರಾ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನ ಕಾರ್ಯ ಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು. ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಗೌರವ ಕಾರ್ಯದರ್ಶಿ ಎಂ. ರಂಗನಾಥ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿ ನಾಯಕರು ಎಲ್ಲ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮಲ್ಲಿರುವ ಸಾಮರ್ಥ್ಯವನ್ನು ಅನಾವರಣಗೊಳಿಸುವ ಮೂಲಕ ಕಾಲೇಜಿನ ಘನತೆಯನ್ನು ಎತ್ತಿಹಿಡಿಯಲು ಶ್ರಮಿಸಬೇಕು ಎಂದು ಹೇಳಿದರು.ಸೇವಾ ಮನೋಭಾವವನ್ನು ಮೈಗೂಡಿಸಿಕೊಂಡು ದುಡಿಯ ಬಲ್ಲವರೇ ಉತ್ತಮ ನೇತಾರ ರಾಗಬಲ್ಲರು ಎಂದು ಪ್ರಾಂಶುಪಾಲೆ ಡಾ| ಕೆ.ವಿ. ಮಾಲಿನಿ ಹೇಳಿದರು. ಕಾಲೇಜಿನ ಸಂಚಾಲಕ ಮಾರೂರು ಸುಧೀರ್ ಪೈ ಅತಿಥಿಯಾಗಿದ್ದರು. ವಿದ್ಯಾರ್ಥಿ ಕ್ಷೇಮಪಾಲಕಿ ಪ್ರೊ| ಸಂಧ್ಯಾ ಬಿ. ಚುನಾಯಿತ ನಾಯಕರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ವಿದ್ಯಾರ್ಥಿ ಕ್ಷೇಮಪಾಲಕಿ ಡಾ| ಭುವನಾ ರಾಮಚಂದ್ರನ್ ಉಪಸ್ಥಿತರಿದ್ದರು. ಅನಸೂಯಾ ಭಾಗವತ್ ವಂದಿಸಿದರು.ವಿದ್ಯಾರ್ಥಿನಿ ದೀûಾ ಕಾರ್ಯ ಕ್ರಮವನ್ನು ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.