ವಿಲೇವಾರಿ, ಸಂಸ್ಕರಣೆ: ಕೇಂದ್ರದಿಂದ ಯೋಜನ ವರದಿ


Team Udayavani, Mar 8, 2018, 11:12 AM IST

8-March-5.jpg

ಮಹಾನಗರ: ನಗರ ವ್ಯಾಪ್ತಿಯಲ್ಲಿ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದೇ ಈಗ ಬಹು ದೊಡ್ಡ ಸವಾಲು. ಈ ನಿಟ್ಟಿನಲ್ಲಿ,’ ಸ್ವಚ್ಛ ಭಾರತ್‌ ಮಿಷನ್‌’ ಯೋಜನೆಯಡಿಯಲ್ಲಿ ನಗರದಲ್ಲಿ ವೈಜ್ಞಾನಿಕವಾಗಿ ಘನತ್ಯಾಜ್ಯವನ್ನು ವಿಲೇವಾರಿ ಹಾಗೂ ಸಂಸ್ಕರಣೆ ಮಾಡುವ ಕುರಿತಂತೆ ಸಮಗ್ರ ಅಧ್ಯಯನ ಕೈಗೊಳ್ಳಲು ಹಾಗೂ ಅನುಷ್ಠಾನಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ.

ಇದರಂತೆ, ಕೇಂದ್ರ ಸರಕಾರದಿಂದ ಗುರುತಿಸಲಾದ ಸಲಹೆಗಾರರನ್ನು ಅಧ್ಯಯನ ಕೈಗೊಳ್ಳಲು ಮಂಗಳೂರಿಗೆ ಈಗಾಗಲೇ ನೇಮಿಸಿ, ಪರಿಶೀಲನೆ ನಡೆಸಿ, ಈಗ ವರದಿಯನ್ನು ಪಾಲಿಕೆಗೆ ಸಲ್ಲಿಸಲಾಗಿದೆ. ಆದರೆ, ವರದಿಯಲ್ಲಿ ಕೆಲವು ಅಭಿಪ್ರಾಯ ಗೊಂದಲ ಇರುವ ಕಾರಣದಿಂದ ಇನ್ನಷ್ಟು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಪಾಲಿಕೆ ನಿರ್ಧರಿಸಿದೆ.

ವೆಚ್ಚದ ಲೆಕ್ಕಾಚಾರ
ಒಟ್ಟು 12.19 ಕೋ.ರೂ. ವೆಚ್ಚದಲ್ಲಿ ಮಂಗಳೂರಿನಲ್ಲಿ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಹಾಗೂ ಸಂಸ್ಕರಣೆ ನಡೆಸುವ ಕುರಿತಂತೆ ವರದಿಯಲ್ಲಿ ಲೆಕ್ಕಾಚಾರ ನೀಡಲಾಗಿದೆ. ಈ ಪೈಕಿ, 43 ಲಕ್ಷ ರೂ. ವೆಚ್ಚದಲ್ಲಿ ಪಚ್ಚನಾಡಿಯಲ್ಲಿ ವೇಸ್ಟ್‌ ರಿಸೀವಿಂಗ್‌ ಫ್ಲ್ಯಾಟ್‌ಫಾರ್ಮ್ ಶೆಡ್‌ ನಿರ್ಮಾಣ, 1.18 ಕೋ.ರೂ. ವೆಚ್ಚದಲ್ಲಿ ರೂಫಿಂಗ್ ರಿಪ್ಲೇಸ್‌ಮೆಂಟ್‌, 68 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆ, 13 ಲಕ್ಷ ರೂ. ವೆಚ್ಚದಲ್ಲಿ ಕಾರ್ಮಿಕರಿಗೆ ವಿಶ್ರಾಂತಿ ಗೃಹ, 77 ಲಕ್ಷ ರೂ.ವೆಚ್ಚದಲ್ಲಿ ನಂದಿಗುಡ್ಡ, ಅತ್ತಾವರ, ಅಳಕೆ, ಉರ್ವ ಮಾರುಕಟ್ಟೆ, ಕಾವೂರು, ಕೂಳೂರು ಹಾಗೂ ಸುರತ್ಕಲ್‌ ನಲ್ಲಿ ಒಣಕಸ ಸಂಗ್ರಹ ಕೇಂದ್ರ ಸೇರಿದಂತೆ ಹಲವು ಕಾಮಗಾರಿ ಕೈಗೆತ್ತಿಕೊಳ್ಳುವ ಬಗ್ಗೆ ನಮೂದಿಸಲಾಗಿದೆ. ‘ಸ್ವಚ್ಛ ಭಾರತ್‌ ಮಿಷನ್‌’ ಯೋಜನೆಯಡಿಯಲ್ಲಿ ಕೇಂದ್ರ ಸರಕಾರದ ವತಿಯಿಂದ ಶೇ.35 ಹಾಗೂ ರಾಜ್ಯ ಸರಕಾರದಿಂದ ಶೇ.23.30ರಷ್ಟು ಅನುದಾನವನ್ನು ಮಂಗಳೂರು ಪಾಲಿಕೆಗೆ ನೀಡಲಿದ್ದಾರೆ. ಉಳಿದ ಮೊತ್ತವನ್ನು ಪಾಲಿಕೆ ಭರಿಸಬೇಕಾಗಿದೆ.

ಸ್ವಚ್ಛ ಭಾರತ್‌ ಮಿಷನ್‌ ಯೋಜನೆ ಯಡಿಯಲ್ಲಿ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಹಾಗೂ ಸಂಸ್ಕರಣೆಯನ್ನು ಮಾಡುವ ಕುರಿತು ವಿಸ್ತೃತ ಯೋಜನೆಯನ್ನು ತಯಾರಿಸಿಕೊಂಡು ರಾಜ್ಯ ಮಟ್ಟದ ತಾಂತ್ರಿಕ ಪರಿಶೀಲನ ಸಭೆಗೆ ಮಂಡಿಸಿ, ರಾಜ್ಯ ಸರಕಾರದ ಅನುಮೋದನೆ ಪಡೆದುಕೊಂಡು ಕಾರ್ಯಾನುಷ್ಠಾನಗೊಳಿಸಲು ಪೌರಾಡಳಿತ ನಿರ್ದೇಶನಾಲಯ 2016 ಜೂ. 29ರಂದು ಆದೇಶಿಸಿತ್ತು. ಸರಕಾರದ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಹಾಗೂ ಸಂಸ್ಕರಣೆಯನ್ನು ಮಾಡಲು ವಿಸ್ತೃತ ಯೋಜನ ವರದಿ ತಯಾರಿಸಲು ಟೆಂಡರ್‌ ಮುಖಾಂತರ ಭಾರತ ಸರಕಾರದಿಂದ ಗುರುತಿಸಲಾದ ಮುಂಬಯಿಯ ಮೆ| ಟಾಟಾ ಕನ್ಸೆಲ್ಟಿಂಗ್‌ ಎಂಜಿನಿಯರ್ಸ್‌ ಲಿ. ಅವರನ್ನು ನೇಮಕ ಮಾಡಲಾಗಿತ್ತು.

ಈ ಕುರಿತಂತೆ ಸಂಬಂಧಪಟ್ಟ ಸಂಸ್ಥೆಯ ಪ್ರತಿನಿಧಿಗಳು ಪರಿಶೀಲನೆ ನಡೆಸಿ ಮನಪಾ ಅಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಚರ್ಚೆ ನಡೆಸಲಾಗಿತ್ತು. ಇದೀಗ ಸಂಸ್ಥೆಯು ವರದಿಯನ್ನು ತಯಾರಿಸಿ ಮಹಾನಗರ ಪಾಲಿಕೆಗೆ ವಿಸ್ತೃತ ಯೋಜನ ವರದಿಯನ್ನು ಸಲ್ಲಿಸಲಾಗಿದೆ.

ಯೋಜನ ವರದಿಯಲ್ಲೇನಿದೆ?
ಈಗ ಸಂಸ್ಕರಣೆಗಾಗಿ ಮಂಗಳೂರಿನ ಪಚ್ಚನಾಡಿಯಲ್ಲಿ ಏರೋಬಿಕ್‌ ವಿಂಡ್‌ರೋ ಮಾದರಿಯ ಗೊಬ್ಬರ ತಯಾರಿಕ ಘಟಕವನ್ನು ನಿರ್ಮಿಸಲಾಗಿದ್ದು, ಇದು ಕೇವಲ 175 ಟನ್‌ಗಳನ್ನು ಸಂಸ್ಕರಣೆ ಮಾಡಲು ಮೂಲಸೌಕರ್ಯದ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಘಟಕವನ್ನು ನಿರ್ಮಿಸಿ ಈಗಾಗಲೇ 12-13 ವರ್ಷ ಕಳೆದಿರುವುದರಿಂದ ಈಗ ಇರುವ ಸ್ಥಾವರ ಮೇಲ್ದರ್ಜೆಗೇರಿಸಲು ಯೋಜನ ವರದಿಯಲ್ಲಿ ವಿವರಿಸಲಾಗಿದೆ. ಏರೋಬಿಕ್‌ ವಿಂಡ್‌ರೊ ಘಟಕದಲ್ಲಿ ಇರುವ ಯಂತ್ರಗಳ ಸಾಮರ್ಥ್ಯವನ್ನು ಹೆಚ್ಚಿಸಲು ಹೆಚ್ಚುವರಿ ಯಂತ್ರೋಪಕರಣ ಹಾಗೂ ಉಪಕರಣವನ್ನು ಖರೀದಿಸಲು ಯೋಜನ ವರದಿಯಲ್ಲಿ ಪ್ರಸ್ತಾವಿಸಲಾಗಿದೆ. ಈಗ ಸಂಗ್ರಹವಾಗಿರುವ ತ್ಯಾಜ್ಯವನ್ನು ಪಿ.ಪಿ.ಪಿ. ಮಾದರಿಯಲ್ಲಿ ಬಯೋಮೈನಿಂಗ್‌ ವ್ಯವಸ್ಥೆಯನ್ನು ಕಲ್ಪಿಸುವ ಬಗ್ಗೆ ವರದಿಯಲ್ಲಿ ಪ್ರಸ್ತಾವಿಸಲಾಗಿದೆ. 

ಟಾಪ್ ನ್ಯೂಸ್

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!

2(1

Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್‌

1(1

Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.