Hindus ತೆರಿಗೆ ಹಣ ಹಿಂದೂಗಳಿಗೆ ಹಂಚಿ: ಶಾಸಕ ಹರೀಶ್ ಪೂಂಜರ ಹೇಳಿಕೆ ವೈರಲ್
Team Udayavani, Feb 9, 2024, 11:21 PM IST
ಬೆಳ್ತಂಗಡಿ: ರಾಜ್ಯದಲ್ಲಿ ತೆರಿಗೆ ಹಂಚಿಕೆ ವಿಚಾರ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಶಾಸಕ ಹರೀಶ್ ಪೂಂಜ ಅವರು ಫೇಸ್ ಬುಕ್ ಹಾಗೂ ಟ್ವಿಟರ್‌ನಲ್ಲಿ ತೆರಿಗೆಯ ಬಗೆಗಿನ ಪೋಸ್ಟ್ ಒಂದು ಎಲ್ಲೆಡೆ ಸಂಚಲನ ಮೂಡಿಸಿದೆ.
ಕೇಂದ್ರ ಸರಕಾರವು ತೆರಿಗೆ ಹಂಚಿಕೆ ವಿಚಾರವಾಗಿ ತಾರತಮ್ಯ ಮಾಡುತ್ತಿದೆ ಎಂದು ರಾಜ್ಯ ಸರಕಾರ ಗಂಭೀರವಾಗಿ ಆರೋಪ ಮಾಡುತ್ತಿದೆ. ಆದರೆ ಬಿಜೆಪಿ ನಾಯಕರು ಕೇಂದ್ರದ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ ಶಾಸಕ ಹರೀಶ್ ಪೂಂಜ ಅವರು ತೆರಿಗೆ ವಿಚಾರವಾಗಿ “ನನ್ನ ತೆರಿಗೆ ನನ್ನ ಹಕ್ಕು ಆಂದೋಲನದ ಹಿನ್ನೆಲೆಯಲ್ಲಿ ಅವರು “ಈ ಆರ್ಥಿಕ ವರ್ಷದಿಂದ ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ವಿನಿಯೋಗವಾಗಬೇಕು. ಹಿಂದೂಗಳು ಕಟ್ಟಿದ ತೆರಿಗೆ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದೂಗಳಿಗೆ ಆಗುವ ಅನ್ಯಾಯ, ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು’ ಎಂದು ಬರೆದಿದ್ದಾರೆ. ಫೇಸ್ ಬುಕ್ ನಲ್ಲಿ ಹಲವರು ಇದಕ್ಕೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕರು ಇಷ್ಟಕ್ಕೆ ಸುಮ್ಮನಾಗದೆ ಮುಂದುವರಿದು ಮತ್ತೊಂದು ಪೋಸ್ಟ್ ಹಾಕಿದ್ದು, ದೇಶದಲ್ಲಿರುವ ತೆರಿಗೆ ಸಂಗ್ರಹದಲ್ಲಿ ಹಿಂದೂಗಳ ಪಾಲೆಷ್ಟು ? ಇದರಲ್ಲಿ ಹಿಂದೂಗಳ ಅಭಿವೃದ್ಧಿಗೆ ಉಪಯೋಗ ವಾಗುತ್ತಿರುವುದು ಎಷ್ಟು? ಹಿಂದೂ ಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು’ ಎಂದು ಬರೆದಿದ್ದಾರೆ. ಈ ಮೂಲಕ ತೆರಿಗೆ ವಿಚಾರದ ಪೋಸ್ಟ್ ಗೆ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಆಕ್ರೋಶ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.